ಜಿಲ್ಲಾಮಟ್ಟದ ನೃತ್ಯ ಸ್ಪರ್ಧೆ
ಉಡುಪಿ, ಅ.31: ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಮಕ್ಕಳ ದಿನಾ ಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆ ‘ಯು.ಎಫ್. ಸಿ. ಮಕ್ಕಳ ಹಬ್ಬ-2016’ ನ.19ರಂದು ಬೆಳಗ್ಗೆ 9:30ರಿಂದ ಸಂಜೆ 4:30ರವರೆಗೆ ಉದ್ಯಾವರ ವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ.
ವಿಜೇತ ತಂಡಗಳಿಗೆ ಎರಡೂ ವಿಭಾಗಗಳಲ್ಲಿ 5,000 ರೂ., 3,000 ರೂ., 2,000 ರೂ. ಬಹುಮಾನ, ಸ್ಮರಣಿಕೆ, ಪ್ರಮಾಣ ಪತ್ರ ಮತ್ತು ಭಾಗವಹಿಸಿದ ಎಲ್ಲಾ ತಂಡಗಳಿಗೂ ತಲಾ 1,000 ರೂ. ಮತ್ತು ಸ್ಮರಣಿಕೆ, ಪ್ರಮಾಣ ಪತ್ರ ನೀಡಲಾಗುವುದು. ಆಸಕ್ತ ಶಾಲಾ ತಂಡಗಳು ಮುದ್ರಿತ ಪ್ರವೇಶ ಪತ್ರ ತುಂಬಿಸಿ ಮುಖ್ಯೋಪಾ ಧ್ಯಾಯರ ಸಹಿಯೊಂದಿಗೆ ನ.14 ರೊಳಗೆ ತಿಲಕರಾಜ್ ಸಾಲ್ಯಾನ್(9844812513) ಪ್ರ.ಕಾರ್ಯದರ್ಶಿ, ಉದ್ಯಾವರ ಫ್ರೆಂಡ್ಸ್ ಸರ್ಕಲ್, 574118, ಉಡುಪಿ ಇವರಿಗೆ ಕಳುಹಿಸಿಕೊಡುವಂತೆ ಪ್ರಕಟನೆ ತಿಳಿಸಿದೆ.
Next Story





