‘ನ್ಯಾಯ ಕೊಡಿಸಿ’ ಎಂದು ಕೂಗಿದ ವ್ಯಕ್ತಿ ಪೊಲೀಸ್ ವಶಕ್ಕೆ
ಬೆಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ಎದ್ದು ನಿಂತು ಕೆಪಿಎಸ್ಸಿ ಪರೀಕ್ಷೆಯಲ್ಲಿ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಘೋಷಣೆ ಕೂಗಿದ ವೇಳೆ ಕಬ್ಬನ್‌ಪಾರ್ಕ್ ಠಾಣಾ ಪೊಲೀಸರು ಆತನನ್ನು ವಶಕ್ಕೆ ಪಡೆದರು. ಮಂಗಳವಾರ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ರಾಜ್ಯೋತ್ಸವ ವೇಳೆ ಭಾಷಣ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ, ಕೆಪಿಎಸ್ಸಿ ಪರೀಕ್ಷೆಯಲ್ಲಿ ಅನ್ಯಾಯವಾಗಿದೆ. ನನಗೆ ನ್ಯಾಯ ಕೊಡಿಸಿ ಎಂದು ಘೋಷಣೆ ಕೂಗಿದ. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರಿಗೆ ಏನು ಅನ್ಯಾಯವಾಗಿದೆ ಕೇಳಿ, ಅದನ್ನು ಸರಿಪಡಿಸಿ ನ್ಯಾಯ ಕೊಡಿಸೋಣ ಎಂದು ಹೇಳಿದರು. ಆ ವೇಳೆಗೆ ಪೊಲೀಸರು ಬಂದು ಘೋಷಣೆ ಕೂಗಿದ ವ್ಯಕ್ತಿಯನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆದೊಯ್ದರು.
Next Story





