Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏಕೀಕರಣದ ಕನ್ನಡ...

ಏಕೀಕರಣದ ಕನ್ನಡ ರಥಕ್ಕೆಮುಖ್ಯಮಂತ್ರಿಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Nov 2016 11:50 PM IST
share
ಏಕೀಕರಣದ ಕನ್ನಡ ರಥಕ್ಕೆಮುಖ್ಯಮಂತ್ರಿಚಾಲನೆ

ಬೆಂಗಳೂರು, ನ.1: ಕರ್ನಾಟಕ ರಾಜ್ಯದ ಏಕೀಕರಣದ 60ನೆ ವರ್ಷಾಚರಣೆಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರೂಪಿಸಿರುವ ‘ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂಬ ಕನ್ನಡ ರಥಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಮಂಗಳವಾರ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗ ರಾಜ್ಯದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ಕನ್ನಡ ರಥಗಳ ರಾಜ್ಯವ್ಯಾಪಿ ಸಂಚಾರಕ್ಕೆ ಹಸಿರು ನಿಶಾನೆ ತೋರುವ ಮೂಲಕ ಅವರು ಚಾಲನೆ ನೀಡಿದರು.
ರಾಜ್ಯದ ಏಕೀಕರಣದ ವಜ್ರಮಹೋತ್ಸವದ ಅಂಗವಾಗಿ ಕಾವೇರಿ, ಕೃಷ್ಣೆ, ತುಂಗಭದ್ರಾ ಹೆಸರಿನ ಈ ರಥಗಳು ಬೆಂಗಳೂರಿನಿಂದ ಹೊರಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 10 ರಿಂದ 12 ದಿನಗಳ ಕಾಲ ಸಂಚರಿಸಿ ಕನ್ನಡದ ಹಿರಿಮೆ ಗರಿಮೆ ಬಿಂಬಿಸಲಿವೆ.

ಕನ್ನಡ ರಥ ಸಂಚರಿಸುವ ಮಾರ್ಗದ ವಿವರ: ರಾಜ್ಯದ ಕಲೆ, ಸಾಹಿತ್ಯ, ಸಂಸ್ಕೃತಿ ಬಿಂಬಿಸುವ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು ಎಂಬ ಹೆಸರಿನ ಮೂರು ಪ್ರತ್ಯೇಕ ಕನ್ನಡ ರಥಗಳು ನ.2 ರಿಂದ 11ರವರೆಗೆ ರಾಜ್ಯದಲ್ಲಿ ಮೂರು ಮಾರ್ಗಗಳಾಗಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿವೆ. ಮಾರ್ಗ-1: ನ.2ರಂದು ತುಮಕೂರು, 3 ರಂದು ಚಿತ್ರದುರ್ಗ, 4 ರಂದು ಬಳ್ಳಾರಿ, 5 ರಂದು ಕೊಪ್ಪಳ, 6 ರಂದು ಗದಗ, 7 ರಂದು ಬಾಗಲಕೋಟೆ, 8 ರಂದು ರಾಯಚೂರು, 9 ರಂದು ಯಾದಗಿರಿ, 10 ರಂದು ಕಲಬುರಗಿ, 11 ರಂದು ಬೀದರ್ ಜಿಲ್ಲೆಗಳಲ್ಲಿ ಸಂಚರಿಸಲಿದೆ.
ಮಾರ್ಗ-2: ನ.2 ರಂದು ಹಾಸನ, 3 ರಂದು ಚಿಕ್ಕಮಗಳೂರು, 4 ರಂದು ಶಿವಮೊಗ್ಗ, 5 ರಂದು ದಾವಣಗೆರೆ, 6 ರಂದು ಹಾವೇರಿ, 7 ರಂದು ಉತ್ತರಕನ್ನಡ, 8 ರಂದು ಧಾರವಾಡ, 9 ರಂದು ಬೆಳಗಾವಿ, 10 ರಂದು ವಿಜಯಪುರ ಜಿಲ್ಲೆಯಲ್ಲಿ ಸಂಚರಿಸಲಿದೆ.

ಮಾರ್ಗ-3: ನ.2 ರಂದು ಕೋಲಾರ, 3 ರಂದು ಚಿಕ್ಕಬಳ್ಳಾಪುರ, 4 ರಂದು ರಾಮನಗರ, 5 ರಂದು ಮಂಡ್ಯ, 6 ರಂದು ಚಾಮರಾಜ ನಗರ, 7 ರಂದು ಮೈಸೂರು, 8 ರಂದು ಮಡಿಕೇರಿ, 9 ರಂದು ಮಂಗಳೂರು, ನ.10 ರಂದು ಉಡುಪಿ ಜಿಲ್ಲೆಗಳಲ್ಲಿ ಸಂಚರಿಸಲಿದೆ.
 ಗಾನ-ಯಾನ: ಕನ್ನಡ ರಥವು ತಂಗಲಿರುವ ಜಿಲ್ಲೆಗಳ ಜಿಲ್ಲಾ ಕೇಂದ್ರದಲ್ಲಿ, ಕನ್ನಡ ಏಕೀಕರಣವನ್ನು ನೆನಪಿಸುವ ರೀತಿಯಲ್ಲಿ ರಾಜ್ಯದ ಖ್ಯಾತ ಗಾಯಕರುಗಳಿಂದ ಕನ್ನಡ ಹಾಡುಗಳನ್ನು ಪ್ರಸ್ತುತಪಡಿಸುವ ‘ಗಾನ-ಯಾನ’ ಕಾರ್ಯಕ್ರಮ ಆಯಾ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಲಾಗಿದೆ. ನ್ನಡ ರಥ ಆಗಮಿಸುವ ಜಿಲ್ಲೆಗಳಲ್ಲಿ, ಆಯಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ಥಳೀಯ ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ರಥವನ್ನು ಸ್ವಾಗತಿಸಲಿದ್ದಾರೆ.

ಕಲಾಜಾಥಕ್ಕೆ ಚಾಲನೆ: ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಎರಡನೆ ಹಂತದ ವಿಶೇಷ ಆರೋಗ್ಯ ಜಾಗೃತಿ ಅಭಿಯಾನ ಕ್ಕಾಗಿ ಕಲಾಜಾಥಾ ಸಂಚಾರಿ ವಾಹನಗಳ ಮೂಲಕ ಕೈಗೊಳ್ಳುವ ಪ್ರಚಾರ ಕಾರ್ಯಕ್ಕೂ ಮುಖ್ಯಮಂತ್ರಿ ಹಸಿರು ನಿಶಾನೆ ತೋರಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಆರೋಗ್ಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಶೇ.40ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸಿ-ಎಸ್ಟಿ ಜನರು ವಾಸಿಸುತ್ತಿರುವ ರಾಜ್ಯದ 30 ಜಿಲ್ಲೆಗಳ ಒಟ್ಟು 7,202 ಗ್ರಾಮಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಭಾಗಿತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಈ ಪ್ರಚಾರ ಕಾರ್ಯವನ್ನು ಹಮ್ಮಿಕೊಂಡಿದೆ.ಪ್ರಚಾರ ಕಾರ್ಯದ ಮೊದಲ ಹಂತದಲ್ಲಿ ಒಟ್ಟು 2564 ಹಳ್ಳಿಗಳಲ್ಲಿ ಪ್ರಚಾರ ನೀಡಲಾಗಿತ್ತು. ಎರಡನೆ ಹಂತದಲ್ಲಿ ಒಟ್ಟು 4638 ಹಳ್ಳಿಗಳಲ್ಲಿ 40 ಸಂಚಾರಿ ಕಲಾಜಾಥಾ ವಾಹನಗಳನ್ನು ಬಳಸಿಕೊಂಡು ಸುಮಾರು 3 ತಿಂಗಳುಗಳ ಕಾಲ ಪ್ರಚಾರ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಸಾಹಿತಿ ಪ್ರೊ.ಕೆ.ಎಸ್.ನಿಸಾರ್‌ಅಹ್ಮದ್, ಸಚಿವರಾದ ಕೆ.ಜೆ.ಜಾರ್ಜ್, ಉಮಾಶ್ರೀ, ಆರ್.ರೋಷನ್ ಬೇಗ್, ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ದೇಶಕ ಡಾ.ರತನ್‌ಕೇಲ್ಕರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X