Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.7ರಂದು ‘ತುಳುವ ತೇರ್’ ಬಿ.ಸಿ.ರೋಡ್‌ಗೆ...

ನ.7ರಂದು ‘ತುಳುವ ತೇರ್’ ಬಿ.ಸಿ.ರೋಡ್‌ಗೆ ಆಗಮನ: ಸುದರ್ಶನ್ ಜೈನ್

ವಾರ್ತಾಭಾರತಿವಾರ್ತಾಭಾರತಿ2 Nov 2016 6:10 PM IST
share
ನ.7ರಂದು ‘ತುಳುವ ತೇರ್’ ಬಿ.ಸಿ.ರೋಡ್‌ಗೆ ಆಗಮನ: ಸುದರ್ಶನ್ ಜೈನ್

ಬಂಟ್ವಾಳ, ನ.2: ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಡಿಸೆಂಬರ್ 9ರಿಂದ 13ರವೆರೆಗೆ ನಡೆಯಲಿರುವ ’ವಿಶ್ವ ತುಳುವರೆ ಆಯನೊ-2016’ ಇದರ ಪ್ರಚಾರಾರ್ಥವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ’ತುಳುವತೇರ್’ ನವೆಂಬರ್ 7ರಂದು ಸಂಜೆ 5 ಗಂಟೆಗೆ ಬಿ.ಸಿ.ರೋಡ್ ಪ್ರವೇಶಿಸಲಿದೆ ಎಂದು ವಿಶ್ವ ತುಳುವೆರೆ ಆಯನೊ-2016 ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದ್ದಾರೆ.

ಬುಧವಾರ ಸಂಜೆ ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಸಿ.ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ತುಳುತೇರನ್ನು ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸ್ವಾಗತಿಸಲಾಗುವುದು. ಬಳಿಕ ಇಲ್ಲಿಂದ ವೈವಿಧ್ಯಮಯ ಮೆರವಣಿಗೆಯೊಂದಿಗೆ ಸಾಗಲಿರುವ ತುಳುವತೇರ್ ತಾಲೂಕು ಕಚೇರಿಯ ಮುಂಭಾಗದಲ್ಲಿ ಸಂಪನ್ನಗೊಳ್ಳಲಿದೆ ಎಂದರು.

ಬಳಿಕ ಇಲ್ಲಿ ನಡೆಯಲಿರುವ ಸಬಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು ಬಂಟ್ವಾಳ ತುಳು ಕೂಟದ ಅಧ್ಯಕ್ಷ ಎ.ಸಿ.ಭಂಡಾರಿ ಸಬಾಧ್ಯಕ್ಷತೆ ವಹಿಸುವರು. ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಪಿಯೂಸ್ ರೊಡ್ರಿಗಸ್ ಅತಿಥಿಗಳಾಗಿ ಭಾಗವಹಿಸಲಿದ್ದು ವಿಶ್ವ ತುಳುವೆರೆ ಆಯೊನೊದ ಸಂಚಾಲಕ ಭಾಸ್ಕರ್ ಪೂಜಾರಿ ಕುಂಬ್ಳೆ, ಬದಿಯಡ್ಕದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಿರುವರು ಎಂದು ತಿಳಿಸಿದ ಅವರು ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ವಿವರಿಸಿದರು.

ಬದಿಯಡ್ಕದ ತುಳುವೆರೆ ಆಯನೊ ಕೂಟದ ದಶಮಾನೋತ್ಸವದ ಪ್ರಯುಕ್ತ ವಿಶ್ವ ತುಳುವೆರೆ ಆಯನೊ 2016 ಕಾರ್ಯಕ್ರಮ 5 ದಿನಗಳ ಕಾಲ ನಡೆಯಲಿದ್ದು ಈ ಸಂದರ್ದಲ್ಲಿ ತುಳು ಬಾಷೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ ಮೊದಲಾದ ಸಬೆ, ಗೋಷ್ಠಿಗಳು ನಡೆಯಲಿದೆ. ಜೊತೆಗೆ ತುಳುನಾಡಿನ ದೈವಾರಾಧನೆ ಬಗ್ಗೆ ವಿಚಾರ ವಿಮರ್ಶೆ, ತುಳುನಾಡಿನಲ್ಲಿರುವ ಎಲ್ಲ ಬಾಷೆಗಳ ಬಹು ಬಾಷೆ ಸಂಗಮವು ನಡೆಯುವುದು. ತುಳುನಾಡಿನಾದ್ಯಂತ ವಿಶ್ವ ತುಳುವೆರೆ ಆಯೊನೊದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುಳುವ ತೇರ್ ಬಾರ್ಕೂರು ತುಳುವೇಶ್ವರ ದೇವಸ್ಥಾನದಿಂದ ಹೊರಟಿದ್ದು 108 ದಿನಗಳ ಕಾಲ ತುಳು ನಾಡಿನಾದ್ಯಂತ ಸಂಚಾರಿಸಿ ಡಿಸೆಂಬರ್ 9ರಂದು ಬದಿಯಡ್ಕವನ್ನು ತಲುಪಲಿದೆ ಎಂದರು.

ಪ್ರಧಾನಿಗೆ ಮನವಿ

ತುಳುವನ್ನು ಸಂವಿಧಾನದ 8ನೆ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ತುಳು ಕೂಟದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಬಂಟ್ವಾಳ ತುಳುಕೂಟದ ಅಧ್ಯಕ್ಷ ಎ.ಸಿ.ಭಂಡಾರಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತ್ಯೇಕ ತುಳು ರಾಜ್ಯ ಕೂಗಿನ ಬಗ್ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು ಇದುವೆರೆಗೆ ಪ್ರತ್ಯೇಕ ತುಳು ರಾಜ್ಯದ ಬಗ್ಗೆ ತುಳು ಕೂಟ ಚಿಂತನೆ ನಡೆಸಿಲ್ಲ. ನವೆಂಬರ್ 1ರಂದು ಜಿಲ್ಲೆಯ ಕೆಲವೆಡೆ ಪ್ರತ್ಯೇಕ ತುಳು ರಾಜ್ಯಕ್ಕೆ ಒತ್ತಾಯಿಸಿ ಧ್ವಜಾರೋಹಣ ನಡೆಸಿರುವುದರ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಬಿ.ತಮ್ಮಯ್ಯ, ಪರಮೇಶ್ವರ ಎಂ., ಬಿ.ಕೆ.ಇದಿನಬ್ಬ ಕಲ್ಲಡ್ಕ, ಕೈಯ್ಯೂರು ನಾರಾಯಣ ಭಟ್, ಎಚ್.ಕೆ.ನಯನಾಡು, ಮಂಜು ವಿಟ್ಲ, ನಾರಾಯಣ ಪೆರ್ನೆ, ಮಾಧವ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X