Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಬೀದಿಬದಿ ವ್ಯಾಪಾರಸ್ಥರಿಂದ ಧರಣಿ

ಉಡುಪಿ: ಬೀದಿಬದಿ ವ್ಯಾಪಾರಸ್ಥರಿಂದ ಧರಣಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Nov 2016 6:49 PM IST
share
ಉಡುಪಿ: ಬೀದಿಬದಿ ವ್ಯಾಪಾರಸ್ಥರಿಂದ ಧರಣಿ

ಉಡುಪಿ, ನ.2: ಉಡುಪಿ ನಗರಸಭೆ ಮತ್ತು ಜಿಲ್ಲೆಯ ಇತರ ಸ್ಥಳೀಯ ಆಡಳಿತ ಸಂಸ್ಥೆಗಳ ಬಡತನ ವಿರೋಧಿ, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು)ದ ನೇತೃತ್ವದಲ್ಲಿ ಬುಧ ವಾರ ಉಡುಪಿ ಬಸ್ ನಿಲ್ದಾಣದ ಬಳಿಯಿಂದ ಉಡುಪಿ ನಗರಸಭೆವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬೀದಿಬದಿ ವ್ಯಾಪಾರಸ್ಥರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಬೀದಿ ಬದಿ ವ್ಯಾಪಾರಸ್ಥರ ಬದುಕನ್ನು ಉತ್ತಮಗೊಳಿಸುವುದಕ್ಕಾಗಿ ದೇಶದ ಸಂಸತ್ತಿನಲ್ಲಿ ಕಾನೂನು ಅಂಗೀಕರಿಸಲ್ಪಟ್ಟು ಬೀದಿ ಬದಿ ವ್ಯಾಪಾರಗಳ ಅಧಿ ನಿಯಮ 2014 ಕರ್ನಾಟಕದಲ್ಲಿ ಜಾರಿಗೆ ಬಂದಿದೆ. ಆದರೆ ರಾಜ್ಯ ಸರಕಾರ ಕೇಂದ್ರ ಸರಕಾರದ ಕಾನೂನು ಮತ್ತು ಅಧಿನಿಯಮಗಳ ಆಧಾರದಲ್ಲಿ ರಾಜ್ಯ ನಿಯಮಾವಳಿ ಗಳನ್ನು ಇನ್ನೂ ಅನುಷ್ಠಾನಗೊಳಿಸಿಲ್ಲ ಎಂದರು.

ನಗರಸಭೆ ಅಧಿಕಾರಿಗಳು ಕಾನೂನು ಉಲ್ಲಂಘಿಸಿ ಬೀದಿಬದಿ ವ್ಯಾಪಾರಸ್ಥರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಆದರೆ ಇವರಿಗೆ ನಗರದಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳು ಹಾಗೂ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಭೂಮಿಯ ವಿರುದ್ಧ ಕ್ರಮ ತೆಗೆದುಕೊಳ್ಳುವ ಧೈರ್ಯ ಇಲ್ಲವಾಗಿದೆ ಎಂದು ಅವರು ಟೀಕಿಸಿದರು.

ಪೌರಾಯುಕ್ತರಿಗೆ ಮನವಿ

ನಗರದ ಜನದಟ್ಟಣೆ ಪ್ರದೇಶದಲ್ಲಿ ಬೀದಿಬದಿ ವ್ಯಾಪಾರಿಗಳಿಗೂ ಮಾರಾಟ ಜಾಗ ಒದಗಿಸಬೇಕು. ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ವ್ಯವಸ್ಥಿತವಾಗಿ, ಪಾರದರ್ಶಕವಾಗಿ ನಡೆಸಬೇಕು. ಎಲ್ಲ ಬೀದಿಬದಿ ವ್ಯಾಪಾರಿಗಳಿಗೆ ಗುರುತು ಚೀಟಿಯನ್ನು ಸಮೀಕ್ಷೆ ವರದಿ ಆಧಾರ ದಲ್ಲಿ ನೀಡಬೇಕು. ಬೀದಿ ಬದಿ ವ್ಯಾಪಾರಿಗಳ ಗುರುತು ಚೀಟಿಯನ್ನು ಕಾಲ ಕಾಲಕ್ಕೆ ಕಟ್ಟುನಿಟ್ಟಾಗಿ ನವೀಕರಿಸುತ್ತಿರಬೇಕು. 2014ರ ಕಾನೂನು/ಅಧಿ ನಿಯಮ ಶರ್ತಗಳಿಗೆ ಒಳ ಪಟ್ಟು ವ್ಯಾಪಾರ ನೀತಿ ರಚನೆಯನ್ನು ಆದ್ಯತೆಯಲ್ಲಿ ಜಾರಿಗೊಳಿಸಬೇಕು ಎಂದು ಪೌರಾಯುಕ್ತ ಡಿ.ಮಂಜುನಾಥಯ್ಯರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳ ಮೇಲೆ ನಡೆಯುವ ದೌರ್ಜನ್ಯ, ಕಾನೂನು ಬಾಹಿರ, ಅನಾಗರಿಕರ ಕೃತ್ಯವನ್ನು ನಗರಸಭೆ ತಕ್ಷಣ ನಿಲ್ಲಿಸಬೇಕು. ಗುರುತು ಚೀಟಿ ಹೊಂದಿದವರಿಗೆ ಮುದ್ರಾ ಬ್ಯಾಂಕ್‌ಗಳ ಮೂಲಕ ಸಾಲದ ವ್ಯವಸ್ಥೆ ಮಾಡಬೇಕು. ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳಿಗೆ ಸಂಬಂಧಪಟ್ಟ ಅವರ ಸಂಘದೊಂದಿಗೆ ನಿರಂತರ ಸಂಪರ್ಕ/ಸಮಾಲೋಚನೆ ನಡೆಸಬೇಕು. ಬೀದಿ ಬದಿ ವ್ಯಾಪಾರಿಗಳು ಸಮರ್ಥರಾಗುವಂತೆ ಮಾಡಲು ಸಾಮರ್ಥ್ಯ ವರ್ಧನೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಂಘ ಮನವಿಯಲ್ಲಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸಲಹೆಗಾರ ಪಿ.ವಿಶ್ವನಾಥ ರೈ, ದ.ಕ. ಜಿಲ್ಲಾ ಸಂಘದ ಅಧ್ಯಕ್ಷ ಮುಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಎಸ್., ಉಡುಪಿ ಜಿಲ್ಲಾ ಗೌವರಾಧ್ಯಕ್ಷ ಕವಿರಾಜ್, ಅಧ್ಯಕ್ಷ ವಿರೇಶ್, ಕಾರ್ಯದರ್ಶಿ ಬಸವರಾಜ್, ಕೋಶಾಧಿಕಾರಿ ಸಂಗಮೇಶ್, ಮುಖಂಡರಾದ ವೆಂಕಟೇಶ್ ಕೋಣಿ, ಉಮೇಶ್ ಕುಂದರ್, ನಳಿನಿ ಎಸ್. ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X