Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ಸವ ಸಮಿತಿಗಳು ಜವಾಬ್ದಾರಿ ಸಮರ್ಪಕವಾಗಿ...

ಉತ್ಸವ ಸಮಿತಿಗಳು ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಲಿ: ಜಿಲ್ಲಾಧಿಕಾರಿ ನಕುಲ್

ಕರಾವಳಿ ಉತ್ಸವಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ2 Nov 2016 10:03 PM IST
share
ಉತ್ಸವ ಸಮಿತಿಗಳು ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಲಿ: ಜಿಲ್ಲಾಧಿಕಾರಿ ನಕುಲ್

ಕಾರವಾರ, ನ.2: ಡಿಸೆಂಬರ್ 10ರಿಂದ 12ರವರೆಗೆ ಕಾರವಾರದಲ್ಲಿ ನಡೆಯುವ ಕರಾವಳಿ ಉತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸಲು ಈಗಾಗಲೇ ರಚಿಸಿರುವ ಸಮಿತಿಗಳು ತಮಗೆ ವಹಿಸಿರುವ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದರು.
 ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ಧತಾ ಸಭೆಯನ್ನು ನಡೆಸಿದರು. ಈ ಬಾರಿಯ ಕರಾವಳಿ ಉತ್ಸವದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರವಲ್ಲದೆ ಇನ್ನಿತರ ಅರ್ಥಪೂರ್ಣ ಚಟುವಟಿಕೆಗಳನ್ನು ಆಯೋಜಿಸಬೇಕು. ಫಲ ಪುಷ್ಪ ಪ್ರದರ್ಶನವನ್ನು ದೊಡ್ಡ ಪ್ರಮಾಣದಲ್ಲಿ ನಡೆಸಬೇಕು ಎಂದರು.
ಫಲ ಪುಷ್ಪಪ್ರದರ್ಶನದಲ್ಲಿ ಕೇವಲ ಹೂವುಗಳನ್ನು ತಂದು ಪ್ರದರ್ಶಿಸದೆ, ವಿವಿಧ ರೀತಿಯ ಆಕರ್ಷಕ ಹೂವುಗಳನ್ನು ಬೆಳೆಸಲು ಈಗಿನಿಂದಲೇ ಸಿದ್ಧತೆ ನಡೆಸಬೇಕು. ಫಲ ಪುಷ್ಪಪ್ರದರ್ಶನಕ್ಕೆ ಸೂಕ್ತ ಸ್ಥಳವನ್ನು ನೀಡಲಾಗುವುದು. ಜಿಲ್ಲೆಯ ಖಾಸಗಿ ನರ್ಸರಿಗಳ ಸಹಕಾರದೊಂದಿಗೆ ಪ್ರದರ್ಶನ ಮತ್ತು ಮಾರಾಟವನ್ನು ಸಹ ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಅವರು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮ್ಯಾರಥಾನ್ ಈ ಬಾರಿ ವೃತ್ತಿಪರ ರೀತಿಯಲ್ಲಿ ವ್ಯವಸ್ಥಿತವಾಗಿ ಆಯೋಜಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ತಾರೆಯರನ್ನು ಸಹ ಮ್ಯಾರಥಾನ್ ಉದ್ಘಾಟನೆಗೆ ಆಹ್ವಾನಿಸಲಾಗುವುದು. ಶ್ವಾನ ಪ್ರದರ್ಶನ, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು, ಕುಸ್ತಿ, ದೇಹದಾರ್ಢ್ಯ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಬೇಕು. ಅಡುಗೆ ಸ್ಪರ್ಧೆಯನ್ನು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿರಿಸದೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದರು.
ಜಿಲ್ಲೆಯ ಸಾಧನೆ-ಸಾಧಕರು ಅಭಿವೃದ್ಧಿಯನ್ನು ಪ್ರತಿಬಿಂಬಿಸುವ ಮೌಲ್ಯಯುತ ಬರಹಗಳನ್ನು ಒಳಗೊಂಡ ಸ್ಮರಣ ಸಂಚಿಕೆಯನ್ನು ಉತ್ಸವದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಇಲ್ಲಿನ ಪ್ರಮುಖ ತಾಣಗಳು, ನೆಲ, ಜಲ, ಅರಣ್ಯ, ಕಡಲ ತೀರ, ಪ್ರಾಣಿ ಪಕ್ಷಿಗಳ ಆಕರ್ಷಕ ಛಾಯಾಚಿತ್ರಗಳನ್ನು ಒಳಗೊಂಡ ಸಮಗ್ರ ಸಂಪುಟವನ್ನು ಪ್ರಕಟಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಕರಾವಳಿ ಉತ್ಸವ ಸಂದರ್ಭದಲ್ಲಿ ಚಿತ್ರಕಲೆ, ಶಿಲ್ಪಕಲೆ ಕಾರ್ಯಾಗಾರ ಆಯೋಜಿಸಲಾಗುವುದು. ಇದೇ ಮೊದಲ ಬಾರಿಗೆ ಮರಳು ಶಿಲ್ಪ ಪ್ರದರ್ಶನವನ್ನು ಆಯೋಜಿಸಲಾಗುವುದು ಎಂದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X