ಕುಂಟಿಕಾನ: ನಾಳೆ ನರ್ಮ್ ಬಸ್ ಡಿಪೋ ಉದ್ಘಾಟನೆ
ಮಂಗಳೂರು, ನ.2: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಜವಾಹರ್‌ಲಾಲ್ ನೆಹರೂ ನರ್ಮ್ ಯೋಜನೆಯಲ್ಲಿ ನಿರ್ಮಾಣಗೊಂಡ ನೂತನ ಬಸ್ ಡಿಪೋ ನ.4ರಂದು ಉದ್ಘಾಟನೆಗೊಳ್ಳಲಿದೆ.
ಸುಮಾರು 5.93 ಕೋ.ರೂ. ವೆಚ್ಚದಲ್ಲಿ ನಗರದ ಕುಂಟಿಕಾನದಲ್ಲಿ ನಿರ್ಮಾಣವಾಗಿರುವ ಈ ಡಿಪೋವನ್ನು ನ.4ರಂದು ಅಪರಾಹ್ನ 3ಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್ ಉಪಸ್ಥಿತರಿರಲಿದ್ದು, ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





