Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ತವ್ಯದಲ್ಲಿರುವಾಗ ಮೊಬೈಲ್ ಬಳಕೆ ಬೇಡ:...

ಕರ್ತವ್ಯದಲ್ಲಿರುವಾಗ ಮೊಬೈಲ್ ಬಳಕೆ ಬೇಡ: ದೂರು ರಹಿತ ಸೇವೆ ನೀಡಿ

ಸಿಟಿ ಬಸ್ ಸಿಬ್ಬಂದಿ ವರ್ಗಕ್ಕೆ ಮಾಲಕರ ಸಂಘದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Nov 2016 5:27 PM IST
share
ಕರ್ತವ್ಯದಲ್ಲಿರುವಾಗ ಮೊಬೈಲ್ ಬಳಕೆ ಬೇಡ: ದೂರು ರಹಿತ ಸೇವೆ ನೀಡಿ

ಮಂಗಳೂರು, ನ.3: ದ.ಕ.ಜಿಲ್ಲೆಯ ಸಾರಿಗೆಯ ಜೀವನಾಡಿಯಂತಿರುವ ಖಾಸಗಿ ಬಸ್‌ಗಳ ಸಿಬ್ಬಂದಿಯ ವರ್ತನೆಗಳ ವಿರುದ್ಧ ಪ್ರಯಾಣಿಕರಿಂದ ದಿನನಿತ್ಯ ಕೇಳಿ ಬರುತ್ತಿರುವ ದೂರಿನ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ದ.ಕ.ಜಿಲ್ಲಾ ಬಸ್ ಮಾಲಕರ ಸಂಘವು ಇದೀಗ ಕೆಲವೊಂದು ನಿಯಮಾವಳಿಗಳನ್ನು ರೂಪಿಸಿ ಎಲ್ಲ ಬಸ್‌ಗಳ ಸಿಬ್ಬಂದಿ ವರ್ಗಕ್ಕೆ ಕಳುಹಿಸಿಕೊಟ್ಟಿವೆ.

ಬಸ್ ಮಾಲಕರ ಸಂಘ ಹೊರಡಿಸಿರುವ ಸೂಚನೆ ಹೀಗಿವೆ:

ಪ್ರತಿಯೊಬ್ಬ ನಿರ್ವಾಹಕರು ಕಂಪ್ಯೂಟರೈಸ್‌ಡ್ ಟಿಕೆಟ್ ಮೆಶಿನ್ ಮೂಲಕ ಪ್ರಯಾಣಿಕರಿಗೆ ಟಿಕೆಟ್ ಕಡ್ಡಾಯವಾಗಿ ನೀಡಬೇಕು. *ಕರ್ಕಶ ಹಾರ್ನ್‌ಗಳನ್ನು ಬಳಸಬಾರದು.

ಕರ್ತವ್ಯದಲ್ಲಿರುವಾಗ ಚಾಲಕರು-ನಿರ್ವಾಹಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಮತ್ತು ಮೊಬೈಲ್ ಫೋನ್ ಬಳಕೆ ಮಾಡಬಾರದು ಹಾಗೂ ತಮ್ಮ ಲೈಸನ್ಸ್‌ನ ದೃಢೀಕೃತ ಪ್ರತಿಯನ್ನು ಹೊಂದಿರಬೇಕು.

ಬಸ್ಸಿಗೆ ಸಂಬಂಧಿಸಿದ ದಾಖಲಾತಿಗಳಾದ ಆರ್‌ಸಿ, ಇನ್ಸೂರೆನ್ಸ್, ಪೊಲ್ಯುಶನ್ ಸರ್ಟಿಫಿಕೆಟ್, ರೂಟ್ ಪರ್ಮಿಟ್‌ನ ದೃಢೀಕೃತ ಪ್ರತಿಯನ್ನು ಬಸ್ಸಿನಲ್ಲಿಟ್ಟುಕೊಂಡಿರಬೇಕು.

ಸಂಚಾರದ ವೇಳೆ ಕ್ಲೀನರ್ ಅಥವಾ ಅನಗತ್ಯ ವ್ಯಕ್ತಿಗಳು ಬಸ್ಸಿನಲ್ಲಿ ತಿರುಗಾಡಬಾರದು.

ಬಸ್ ಪಾಸ್ ಹೊಂದಿದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು.

ಹಿರಿಯ ನಾಗರಿಕರು, ಅಂಗವಿಕಲರಿಗೆ ಮೀಸಲಿಟ್ಟ ಸೀಟುಗಳನ್ನು ಇತರ ಯಾರೂ ಆಕ್ರಮಿಸದಂತೆ ನೋಡಿಕೊಳ್ಳಬೇಕು.

ಚಾಲಕರು ಅಥವಾ ನಿರ್ವಾಹಕರು ಇತರ ಯಾವುದೇ ಬಸ್ಸುಗಳೊಂದಿಗೆ ಸ್ಪರ್ಧೆ, ಮೇಲಾಟ, ಜಗಳವಾಡಬಾರದು.

ನಿಗದಿತ ಬಸ್ ಸ್ಟಾಪ್‌ಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬೇಕು ಮತ್ತು ಇಳಿಸಬೇಕು.

ಪ್ರತೀ ಬಸ್ ಚಾಲಕರು ಬಸ್ ನಿಲ್ದಾಣಗಳಲ್ಲಿರುವ ‘ಬಸ್ ಬೇ’ಯೊಳಗೆ ನಿಲ್ಲಿಸಬೇಕು.

ಇದನ್ನು ಹಲವು ಸಿಬ್ಬಂದಿ ಸ್ವಾಗತಿಸಿದರೆ, ಇನ್ನು ಕೆಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲವು ಮಂದಿಯ ದುರ್ವರ್ತನೆಯಿಂದ ಬಸ್ಸಿನ ಎಲ್ಲ ಸಿಬ್ಬಂದಿ ವರ್ಗವನ್ನು ಸಾರ್ವಜನಿಕರು, ಪ್ರಯಾಣಿಕರು ಸಂಶಯದಿಂದ ನೋಡುವಂತಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಮಾಲಕರ ಸಂಘ ಹೊರಡಿಸಿದ ಸೂಚನೆ ಒಳ್ಳೆಯ ಬೆಳವಣಿಗೆಯಾಗಿದೆ. ಆದರೆ ಇದು ಕೇವಲ ಬಸ್ ಸಿಬ್ಬಂದಿ ವರ್ಗಕ್ಕೆ ಮಾತ್ರ ಅನ್ವಯವಾಗಬಾರದು. ಬಸ್ ಮಾಲಕರೂ ಈ ಸೂಚನೆಯನ್ನು ಪಾಲಿಸುವಂತಾಗಬೇಕು. ಸಿಬ್ಬಂದಿ ವರ್ಗಕ್ಕೆ ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಬೇಕು. ಕೆಲಸದ ಭದ್ರತೆ ನೀಡಬೇಕು. ಕಂಪ್ಯೂಟರೈಸ್‌ಡ್ ಟಿಕೆಟ್ ಮೆಶಿನ್ ಹಾಳಾದರೆ ಅದನ್ನು ರಿಪೇರಿ ಮಾಡಿಸಬೇಕು. ದಿನಂಪ್ರತಿ ಇಂತಿಷ್ಟೇ ಕಲೆಕ್ಷನ್ (ಹಣ) ಕೊಡಬೇಕು ಎಂದು ತಾಕೀತು ಮಾಡಬಾರದು. ಹಾಗೇ ಮಾಡಿದರೆ ನಿರ್ವಾಹಕರು ‘ಓಡಾಟದ ಪೈಪೋಟಿ’ಗೆ ಇಳಿಯುತ್ತಾರೆ. ಇದರಿಂದ ಅಪಘಾತವೂ ಹೆಚ್ಚಾಗುತ್ತದೆ. ದೂರು ರಹಿತ ಸೇವೆ ನೀಡುವ ಜವಾಬ್ದಾರಿ ಕೇವಲ ಸಿಬ್ಬಂದಿ ವರ್ಗಕ್ಕೆ ಮಾತ್ರವಲ್ಲ, ಮಾಲಕ ವರ್ಗಕ್ಕೂ ಇದೆ.

-ಹೆಸರು ಹೇಳಲು ಇಚ್ಛಿಸದ ಬಸ್ ಕಂಡಕ್ಟರ್

ಕೆಲವು ಸಿಬ್ಬಂದಿ ವರ್ಗದ ವಿರುದ್ಧ ಆಗಾಗ ದೂರುಗಳು ಕೇಳಿಬರುತ್ತಿತ್ತು. ಪ್ರಯಾಣಿಕರೊಂದಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಂಡು ದೂರು ರಹಿತ ಸೇವೆ ನೀಡುವುದು ನಮ್ಮ ಉದ್ದೇಶವಾಗಿದೆ. ಜಿಲ್ಲೆಯ ಬಹುತೇಕ ಮಂದಿ ಖಾಸಗಿ ಬಸ್‌ಗಳ ಸೇವೆಯನ್ನು ಅವಲಂಬಿಸಿರುತ್ತಾರೆ. ಶಿಸ್ತುಬದ್ಧ, ಅಪಘಾತ ರಹಿತ ಸೇವೆಯನ್ನು ನೀಡುವ ಮೂಲಕ ಜಿಲ್ಲೆಯ ಖಾಸಗಿ ಬಸ್ ಸಾರಿಗೆಯು ರಾಜ್ಯಕ್ಕೇ ಮಾದರಿಯಾಗಬೇಕು ಎಂಬುದು ನಮ್ಮ ಅಭಿಲಾಶೆಯಾಗಿದೆ. ಸಂಘದ ಅಧೀನದಲ್ಲಿ 343 ಬಸ್‌ಗಳಿವೆ. ಎಲ್ಲ ಬಸ್‌ಗಳ ಮಾಲಕರ ಮೂಲಕ ಸಿಬ್ಬಂದಿ ವರ್ಗಕ್ಕೆ ಈ ಸೂಚನೆ ನೀಡಲಾಗಿದೆ. ಬಹುಶ: ಈ ಸೂಚನೆಯನ್ನು ಎಲ್ಲ ಸಿಬ್ಬಂದಿ ವರ್ಗ ಪಾಲಿಸಿದರೆ ಉತ್ತಮ ಸೇವೆಯು ಪ್ರಯಾಣಿಕರಿಗೆ ಲಭ್ಯವಾಗಬಹುದು.

- ಅಝೀಝ್ ಪರ್ತಿಪ್ಪಾಡಿ, ಅಧ್ಯಕ್ಷರು, ಬಸ್ ಮಾಲಕರ ಸಂಘ, ದ.ಕ.ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X