Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ಧ ವಾಗುತ್ತಿದೆ ವಿಧಾನಸಭೆ ಚುನಾವಣೆಗೆ...

ಸಿದ್ಧ ವಾಗುತ್ತಿದೆ ವಿಧಾನಸಭೆ ಚುನಾವಣೆಗೆ ಅಖಾಡ

ಬಿ. ರೇಣುಕೇಶ್ಬಿ. ರೇಣುಕೇಶ್3 Nov 2016 10:17 PM IST
share
ಸಿದ್ಧ ವಾಗುತ್ತಿದೆ ವಿಧಾನಸಭೆ ಚುನಾವಣೆಗೆ ಅಖಾಡ

ಶಿವಮೊಗ್ಗ, ನ. 3: ‘ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲೆದರು’ ಎಂಬ ಗಾದೆ ಮಾತಿನಂತೆ, ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೂವರೆ ವರ್ಷ

  ಬಾಕಿಯಿರುವಾಗಲೇ ಜಿಲ್ಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಚುನಾವಣಾ ಪೂರ್ವಭಾವಿ ಸಿದ್ಧತೆಯ ರಂಗ ತಾಲೀಮು ಆರಂಭಿಸಿವೆ. ಪಕ್ಷ ಸಂಘಟನೆ, ಕಾರ್ಯಕರ್ತರ ಒಗ್ಗೂಡಿಸುವ ಕೆಲಸಕ್ಕೆ ವಿದ್ಯುಕ್ತ ಚಾಲನೆ ನೀಡುವ ಮೂಲಕ ರಣಕಹಳೆ ಮೊಳಗಲಾರಂಭಿಸಿವೆ

   ಪ್ರಸ್ತುತ ಜಿಲ್ಲೆಯ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ, ವಿದ್ಯಮಾನಗಳನ್ನು ಗಮನಿಸಿದರೆ ಇದು ಅಕ್ಷರಶಃ ಸತ್ಯವಾಗಿದೆ. ಚಳಿಗಾಲದಲ್ಲಿಯೇ ಜಿಲ್ಲೆಯ ರಾಜಕೀ ಯ ಚಟುವಟಿಕೆಗಳು ಕಾವೇರ ತೊಡಗಿರುವುದು ಮತದಾರರನ್ನು ತಬ್ಬಿಬ್ಬುಗೊಳ್ಳುವಂತೆ ಮಾಡಿದೆ. ಈ ಹಿಂದಿನಂತೆ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಸಿದ್ಧತೆ ಆರಂಭಿಸುವ ವ್ಯವಸ್ಥೆಗೆ ಇತಿಶ್ರೀ ಹಾಡಿರುವ ಮೂರು ಪಕ್ಷಗಳು, ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿಯಿರುವಂತೆ ಸಂಘಟನಾ ಚಟುವಟಿಕೆಗಳನ್ನು ಆರಂಭಿಸಿವೆ. ಈ ಮೂಲಕ ಕೊನೆಯ ಹಂತದಲ್ಲಿ ಉಂಟಾಗುವ ಗೊಂದಲಗಳಿಗೆ ಕಡಿವಾಣ ಹಾಕಲು ಮುಂದಾಗಿವೆ. ಮೂರು ಪಕ್ಷಗಳ ಮುಖಂಡರು ಪರಸ್ಪರ ಆರೋಪ-ಪ್ರತ್ಯಾರೋಪ, ಟೀಕೆ-ಟಿಪ್ಪಣಿ, ಕೆಸರೆರಚಾಟ ನಡೆಸಲಾರಂಭಿಸಿದ್ದಾರೆ. ಪಕ್ಷದ ಪ್ರಭಾವಿ ನಾಯಕರನ್ನು ಜಿಲ್ಲೆಗೆ ಕರೆತಂದು ಕಾರ್ಯಕರ್ತರ ಸಭೆ ನಡೆಸಲಾಗುತ್ತಿವೆ. ಈ ಮೂಲಕ ಕಾರ್ಯಕರ್ತರಲ್ಲಿ ಹುರುಪು ಮೂಡಿಸುವ ಕೆಲಸ ನಡೆಸಲಾಗುತ್ತಿದೆ. ಟಿಕೆಟ್ ಸಿಗುವ ಆತ್ಮವಿಶ್ವಾಸದಲ್ಲಿರುವವರಂತೂ ಈಗಾಗಲೇ ಮತದಾರರ ಮನವೊಲಿಸುವ ಕಾರ್ಯವನ್ನು ಭರ್ಜರಿಯಾಗಿ ಮಾಡಲಾರಂಭಿಸಿದ್ದಾರೆ!

ಚಟುವಟಿಕೆ ಬಿರುಸು: ಕಳೆದ ಕೆಲ ವಾರಗಳಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪೈಪೋಟಿಗೆ ಬಿದ್ದವರಂತೆ ಚುನಾವಣಾ ಪೂರ್ವಭಾವಿ ಸಿದ್ಧತೆ ಮಾಡುತ್ತಿರುವುದು ಕಂಡುಬರುತ್ತಿದೆ. ಈ ವಿಷಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಳೆದ ಹಲವು ದಿನಗಳ ಹಿಂದಿನಿಂದಲೇ ಪಕ್ಷ ಸಂಘಟನೆಯ ದಿಕ್ಕಿನಲ್ಲಿ ಸಕ್ರಿಯವಾಗಿದ್ದು, ಇದೀಗ ಕಾಂಗ್ರೆಸ್ ಕೂಡ ಸಿದ್ಧತೆಯಲ್ಲಿ ತೊಡಗಿಕೊಂಡಿದೆ.

ಘಟಾನುಘಟಿ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮತ್ತಿತರ ನಾಯಕರಿರುವ ಬಿಜೆಪಿ ಪಕ್ಷವು ನಿರಂತರವಾಗಿ ಜಿಲ್ಲೆಯ ವಿವಿಧೆಡೆ ವಿವಿಧ ಮೋರ್ಚಾಗಳ ಸಭೆ ನಡೆಸುವುದು, ಸಮಸ್ಯೆ ಮುಂದಿಟ್ಟುಕೊಂಡು ಪಾದಯಾತ್ರೆ, ಹೋರಾಟ ನಡೆಸುವ ಮೂಲಕ ಮತದಾರರ ಗಮನ ಸೆಳೆಯುವ ಕೆಲಸ ನಡೆಸುತ್ತಿದೆ. ಜೆಡಿಎಸ್ ಪಕ್ಷವೂ ಹೋರಾಟ, ಪಾದಯಾತ್ರೆ ನಡೆಸುತ್ತಿದೆ. ಹಾಗೆಯೇ ಪಕ್ಷದ ವರಿಷ್ಠ ಎಚ್. ಡಿ.ದೇವೇಗೌಡರನ್ನು ಕೆಲವೇ ದಿನಗಳ ಅಂತರದಲ್ಲಿ ಎರಡು ಬಾರಿಗೆ ಜಿಲ್ಲೆಗೆ ಕರೆಯಿಸಿ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸುವ ಕೆಲಸ ಮಾಡಿದೆ. ಅಲ್ಲದೆ, ಇತರ ಪಕ್ಷಗಳ ಪ್ರಮುಖ ಮುಖಂಡರನ್ನು ಸೆಳೆದುಕೊಳ್ಳುವ ಕೆಲಸ ಕೂಡ ನಡೆಸಲಾರಂಭಿಸಿದೆ. ಈ ಎರಡು ಪಕ್ಷಗಳಿಗೆ ಹೋಲಿಕೆ ಮಾಡಿದರೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪೂರ್ವಭಾವಿ ಸಿದ್ಧತಾ ಕಾರ್ಯಗಳನ್ನು ತಡವಾಗಿ ಆರಂಭಿಸಿದೆ. ಅದೂ ಪಕ್ಷದ ರಾಜ್ಯಾಧ್ಯಕ್ಷ ಡಾ. ಪರಮೇಶ್ವರ್‌ರವರನ್ನು ಕರೆಯಿಸಿ ಕಾರ್ಯಕರ್ತರ ಸಭೆ ನಡೆಸಿದೆ. ಈ ಮೂಲಕ ವಿದ್ಯುಕ್ತವಾಗಿ ಚುನಾವಣಾ ಪೂರ್ವಾವಿ ಸಿದ್ಧತೆಯನ್ನು ಆರಂಭಿಸಿದೆ.

ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಏಳು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸಬೇಕೆನ್ನುವ ಗುರಿಯೊಂದಿಗೆ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಈಗಿನಿಂದಲೇ ನಡೆಸಲಾಗುತ್ತಿದೆ ಎಂದು ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿಯವರು ತಿಳಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಗರ, ಶಿವಮೊಗ್ಗ ನಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಉಳಿದಂತೆ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಸೊರಬ ಹಾಗೂ ಶಿಕಾರಿಪುರ ಕ್ಷೇತ್ರಗಳಲ್ಲಿ ಉತ್ತಮ ಮತಗಳಿಸಿದ್ದರೂ ಪಕ್ಷ ಹಿನ್ನಡೆ ಸಾಧಿಸಿತ್ತು. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳತ್ತ ಹೆಚ್ಚಿನ ಗಮನಹರಿಸಲಾಗಿದೆ. ಪಕ್ಷದ ಸಂಘಟನೆಗೆ ಒತ್ತು ನೀಡಲಾಗಿದೆ. ಪಕ್ಷದ ಮುಖಂಡರಲ್ಲಿರುವ ಗೊಂದಲ ಪರಿಹರಿಸುವ ಹಾಗೂ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜು ಗೊಳಿಸುವ ಕೆಲಸ ನಡೆಸಲಾಗುತ್ತಿದೆ. ರಾಜ್ಯ ಸರಕಾರದ ಸಾಧನೆಯನ್ನು ಮತದಾರರಿಗೆ ತಿಳಿಸುವ ಹಾಗೂ ಸರಕಾರದ ಜನಪರ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ತಿಳಿ ಹೇಳಲಾಗಿದೆ. ಒಟ್ಟಾರೆ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸುವಂತೆ ಮಾಡುವುದೇ ಜಿಲ್ಲಾ ಘಟಕದ ಮುಖ್ಯ ಉದ್ದೇಶ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

share
ಬಿ. ರೇಣುಕೇಶ್
ಬಿ. ರೇಣುಕೇಶ್
Next Story
X