Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಂಗ್ಲಾದೇಶಕ್ಕೆ ಚಂಡಮಾರುತ ಭೀತಿ

ಬಾಂಗ್ಲಾದೇಶಕ್ಕೆ ಚಂಡಮಾರುತ ಭೀತಿ

ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಸಂಭವ

ವಾರ್ತಾಭಾರತಿವಾರ್ತಾಭಾರತಿ3 Nov 2016 10:49 PM IST
share

ಹೊಸದಿಲ್ಲಿ, ನ.3: ಬಾಂಗ್ಲಾ ದೇಶಕ್ಕೆ ಅಪ್ಪಳಿಸುವ ಮುನ್ಸೂಚನೆಯಿರುವ ಚಂಡಮಾರುತದಿಂದಾಗಿ ಮುಂದಿನ 2-3 ದಿನಗಳ ಕಾಲ ಈಶಾನ್ಯ ರಾಜ್ಯಗಳು, ಪಶ್ಚಿಮಬಂಗಾಳ, ಒಡಿಶಾ ಹಾಗೂ ಆಂಧ್ರಪ್ರದೇಶಗಳಲ್ಲಿ ಭಾರಿಯಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆಯೆಂದು ಹವಾಮಾನ ಕಚೇರಿ ಇಂದು ಹೇಳಿದೆ.

ವಾಯುಭಾರ ಕುಸಿತದ ಪ್ರಾಥಮಿಕ ಹಂತದಲ್ಲಿರುವ ಈ ಚಂಡಮಾರುತವು ಪ್ರಕೃತ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯದ 530 ಕಿ.ಮೀ., ಪಾರಾದೀಪ್‌ನ ದಕ್ಷಿಣ-ನೈಋತ್ಯದ 730 ಕಿ.ಮೀ. ಹಾಗೂ ಖೇಪುಪಾರದ (ಬಾಂಗ್ಲಾದೇಶ) ದಕ್ಷಿಣ-ನೈಋತ್ಯದ 1,020 ಕಿ.ಮೀ. ದೂರದಲ್ಲಿ ಕೇಂದ್ರೀಕರಿಸಿದೆ.

ಈ ವ್ಯವಸ್ಥೆಯು ಮುಂದಿನ 24 ತಾಸುಗಳಲ್ಲಿ ಮೊದಲು ವಾಯವ್ಯದತ್ತ ಹಾಗೂ ಬಳಿಕ ತಿರುವು ಪಡೆದು ಮುಂದಿನ 48 ತಾಸುಗಳಲ್ಲಿ ಈಶಾನ್ಯ ದಿಕ್ಕಿನಲ್ಲಿ ಬಾಂಗ್ಲಾ ದೇಶದ ಕರಾವಳಿಯತ್ತ ಚಲಿಸುವ ಭಾರೀ ಸಾಧ್ಯತೆಯಿದೆ. ಮುಂದಿನ 24 ತಾಸುಗಳಲ್ಲಿ ಅದು ಭಾರೀ ವಾಯುಭಾರ ಕುಸಿತವಾಗಿ ತೀವ್ರಗೊಂಡು ಬಳಿಕ ಚಂಡಮಾರುತದ ರೂಪ ಪಡೆಯಲಿದೆಯೆಂದು ಭಾರತೀಯ ಹವಾಮಾನ ಇಲಾಖೆಯ ಚಂಡಮಾರುತ ಮುನ್ನೆಚ್ಚರಿಕೆ ವಿಭಾಗದ ಮುಖ್ಯಸ್ಥ ಎಂ. ಮಹಾಪಾತ್ರ ತಿಳಿಸಿದ್ದಾರೆ.

ಇದು 10 ದಿನಗಳಿಗೂ ಕಡಿಮೆ ಅವಧಿಯೊಳಗೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ 2ನೆ ಚಂಡಮಾರುತವಾಗಿದೆ. ಅಕ್ಟೋಬರ್ ಕೊನೆಯ ವಾರದಲ್ಲಿ ‘ಕ್ಯಾಂಟ್’ ಚಂಡಮಾರುತ ಉಂಟಾಗಿದ್ದರೂ ಅದು ನೆಲಕ್ಕಪ್ಪಳಿಸಿರಲಿಲ್ಲ.

ಒಡಿಶಾ ಕರಾವಳಿಯ ಹಲವು ಭಾಗಗಳಲ್ಲಿ ಹಾಗೂ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ನ.4ರಿಂದ 6ರ ವರೆಗೆ ಲಘುವಿನಿಂದ ಸಾಧಾರಣ ಮಳೆಯಾಗಬಹುದು. ಮಣಿಪುರ, ಮಿರೆರಾಂ ಹಾಗೂ ತ್ರಿಪುರಗಳ ಕೆಲವು ನಿರ್ದಿಷ್ಟ ಪ್ರದೇಶಗಳನ್ನು ನ.5ರಂದು ಭಾರೀ ಮಳೆಯಾಗುವ ಸಂಭವವಿದೆಯೆಂದು ಹವಾಮಾನ ಇಲಾಖೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X