ಕಾಲಿಕಡವು: ಸಿಪಿಎಂ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಪಿಣರಾಯಿ ವಿಜಯನ್ ಭಾಗಿ

ಕಾಸರಗೋಡು, ನ.4: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಜಿಲ್ಲೆಗಾಗಮಿಸಿದ ಪಿಣರಾಯಿ ವಿಜಯನ್‌ರಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭೂತಪೂರ್ವ ಸ್ವಾಗತ ನೀಡಿದರು.
ಕಣ್ಣೂರಿನಿಂದ ಜಿಲ್ಲೆಯ ಗಡಿ ಪ್ರದೇಶ ಕಾಲಿಕಡವಿಗೆ ಆಗಮಿಸಿದ ಮುಖ್ಯಮಂತ್ರಿಯವರನ್ನು ಕಾರ್ಯಕರ್ತರು ಅಭೂತಪೂರ್ವವಾಗಿ ಸ್ವಾಗತಿಸಿದರು. ಬಳಿಕ ಕಾಲಿಕಡವಿನಲ್ಲಿ ನಡೆದ ಸಿಪಿಎಂ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಂಡರು.
ಸಂಸದ ಪಿ. ಕರುಣಾಕರನ್, ಶಾಸಕರಾದ ಎಂ. ರಾಜಗೋಪಾಲ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ಪಿ. ಸತೀಶ್ಚಂದ್ರನ್, ಮುಖಂಡರಾದ ವಿ. ಬಾಲಕೃಷ್ಣನ್ ಮಾಸ್ಟರ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
Next Story





