Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‌ನಲ್ಲಿ ಸಾಂಪ್ರದಾಯಿಕ ದೀಪಾವಳಿ...

ಆಳ್ವಾಸ್‌ನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ ಮತ್ತು ಸಾಂಸ್ಕೃತಿಕ ಸಂಗಮ

ವಾರ್ತಾಭಾರತಿವಾರ್ತಾಭಾರತಿ4 Nov 2016 8:32 PM IST
share
ಆಳ್ವಾಸ್‌ನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ ಮತ್ತು ಸಾಂಸ್ಕೃತಿಕ ಸಂಗಮ

ಮೂಡುಬಿದಿರೆ, ನ.4: ಹಬ್ಬಗಳು ನಮ್ಮ ಸಂಬಂಧ, ಪ್ರೀತಿ, ಸಾಮರಸ್ಯವನ್ನು ಬೆಸೆಯುವಂತಹ ಕೆಲಸವನ್ನು ಮಾಡುತ್ತವೆ. ಈ ನಿಟ್ಟಿನಲ್ಲಿ ನಮ್ಮ ಪೂರ್ವಜರು ನಮಗಾಗಿ ಹಬ್ಬಗಳನ್ನು ಬೇರೆ ಬೇರೆ ಜಾತಿ ಧರ್ಮ ಹಾಗೂ ಊರುಗಳಿಗೆ ಅನುಗುಣವಾಗಿ ಕೊಟ್ಟಿದ್ದಾರೆ. ಆದರೆ ಇಂದು ಹಬ್ಬಗಳು ವ್ಯಾಪಾರ ದೃಷ್ಟಿಯಿಂದ ಆಚರಿಸಲ್ಪಡುತ್ತಿರುವುದು ದುರದೃಷ್ಟಕರ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.

ಪುತ್ತಿಗೆಪದವಿನ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ.ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಆಳ್ವಾಸ್ ದೀಪಾವಳಿ ಉತ್ಸವದಲ್ಲಿ ತಮ್ಮ ಗುರಿಕಾರನ ಸ್ಥಾನದಿಂದ ತುಳಸಿ ಪೂಜೆ, ಗೊ ಪೂಜೆ, ಬಲೀಂದ್ರ ಪೂಜೆ, ಲಕ್ಷ್ಮೀ ಪೂಜೆ ಆಯುಧ ಪೂಜೆಗಳನ್ನು, ರೈತರ ಸಲಕರಣೆಗಳಿಗೆ ಪೂಜೆ, ಸರಸ್ವತಿ ಪೂಜೆ ನೆರವೇರಿಸಿ ಮಾತನಾಡಿದರು.

ಹಬ್ಬಗಳ ಬಗ್ಗೆ ಹಿರಿಯರಿದ್ದ ಆಶಯಗಳನ್ನು ಮುಂದುವರೆಸಿಕೊಂಡು ಪ್ರೀತಿ, ಸಾಮರಸ್ಯದಿಂದ ಸಾಂಸ್ಕೃತಿಕ ಬದುಕನ್ನು ಕಟ್ಟಿಕೊಂಡು ಉಳಿಸಿ ಮುಂದಿನ ಪೀಳಿಗೆಗೆ ನೀಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ನವನೀತ್ ಶೆಟ್ಟಿ ಕದ್ರಿ ಬಲೀಂದ್ರ ಪೂಜೆ ವೈಶಿಷ್ಟತೆಯ ಕುರಿತು ವಿವರಿಸಿದರು.

ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಉದ್ಯಮಿ ಕೆ.ಶ್ರೀಪತಿ ಭಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿಗಳಾದ ಜಯಶ್ರೀ ಅಮರನಾಥ ಶೆಟ್ಟಿ, ವಿವೇಕ್ ಆಳ್ವ, ವಿನಯ್ ಆಳ್ವ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಕಲೆ, ಸಂಸ್ಕೃತಿಯನ್ನು ತನ್ನದೇ ರೀತಿಯಲ್ಲಿ ವಿಶಿಷ್ಟವಾಗಿ ಕಟ್ಟಿಕೊಡುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 600ಕ್ಕೂ ಅಧಿಕ ವಿದ್ಯಾರ್ಥಿಗಳು ಸುಮಾರು ಮೂರುವರೆ ಗಂಟೆಗಳ ಕಾಲ ದೇಶ-ವಿದೇಶಗಳ 18 ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು.

ಕೇರಳದ ಸಿಂಗಾರಿ ಮೇಳ, ಕೇರಳದ ಶಾಸ್ತ್ರೀಯ ನೃತ್ಯ ಮೋಹಿನಿಯಟ್ಟಂ-ಕೇರಳ ನಟನಂ, ಮಧುಮಾಸದ ರೂಪಕ-ಬಡಗುತಿಟ್ಟು ಯಕ್ಷ ಪ್ರಯೋಗ, ಗೋಟಿಪುವ ಒರಿಸ್ಸಾದ ನೃತ್ಯ, ಆಂಧ್ರ್ರದ ಬೆಡಗಿನ ಬಂಜಾರ, ಶ್ರೀಲಂಕಾದ ಕ್ಯಾಂಡಿಯನ್ ಸಮೂಹ ನೃತ್ಯ, ಮಣಿಪುರದ ಸ್ಟಿಕ್ ಡ್ಯಾನ್ಸ್ ಮತ್ತು ದೋಲ್ ಚಲೋಂ, ಭರತನಾಟ್ಯ ರೂಪಕ ಆನಂದ ತಾಂಡವ, ಸಾಹಸವಯ ಮಲ್ಲಕಂಬ, ಗುಜರಾತಿನ ರಂಗಿನ ದಾಂಡಿಯಾ ನೃತ್ಯ, ವಿದ್ಯಾರ್ಥಿಗಳಿಂದ ಡೊಳ್ಳು ಕುಣಿತ, 40 ಸಿಂಹ ಮುಖವಾಡಗಳ ಸಿಂಹ ಬೇಟೆಯ ಪುರುಲಿಯೋ ನೃತ್ಯ, ಕಥಕ್-ಆನಂದ ಮಂಗಳಂ ದೇರ್, ಮಹಾರಾಷ್ಟ್ರದ ಲಾವಣಿ ನೃತ್ಯ, ತೆಂಕುತಿಟ್ಟು ಯಕ್ಷಗಾನ ವೇದೋದ್ಧರಣಂ, ರೋಮಾಂಚನಕಾರಿ ಸಮಕಾಲೀನ ನೃತ್ಯ, ಶ್ರೀಲಂಕಾದ ಜನಪದ ನೃತ್ಯ, ವಂದೇ ಮಾತರಂ ನೃತ್ಯಗಳು ಪ್ರದರ್ಶನಗೊಂಡಿತು.

ಮೊದಲಿಗೆ ಸಾಂಸ್ಕೃತಿಕ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ 100 ವಿದ್ಯಾರ್ಥಿಗಳಿಂದ ಕೇರಳ ಚೆಂಡೆ ವಾದನ, ಶ್ರೀಲಂಕಾದ ವಾದ್ಯ ಸಂಗೀತ, ಕೊಂಬು, ಕಹಳೆ, ಚೆಂಡೆ ವಾದನಗಳು ಗಮನ ಸೆಳೆಯಿತು.

35 ಸಾವಿರ ಪ್ರೇಕ್ಷಕರು

150 ಅಡಿ ಉದ್ದದ ಬೃಹತ್ ವರ್ಣರಂಜಿತ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಹಬ್ಬವದಲ್ಲಿ ಸುಮಾರು 40 ಸಾವಿರ ಆಸನದ ವ್ಯವಸ್ಥೆ ಹಾಕಲಾಗಿದ್ದು, ಸುಮಾರು 35 ಸಾವಿರ ಮಂದಿ ವೀಕ್ಷಿಸಿದರು. 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಅವರ ಪೋಷಕರು, ಆಳ್ವಾಸ್‌ನ ಸಿಬ್ಬಂದಿ ವರ್ಗ, ಮೂಡುಬಿದಿರೆ ಜನರು ಸಂ್ರಮದಲ್ಲಿ ಪಾಲ್ಗೊಂಡರು.

ಚಿತ್ರಗಳು : ರವಿ ಎಸ್.ಕೋಟ್ಯಾನ್ ಮಾನಸ ಡಿಜಿಟಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X