Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ಕಂಬಳ ಪ್ರೇಮಿಗಳ ಆತಂಕ ನಿವಾರಣೆ

ಜಿಲ್ಲೆಯ ಕಂಬಳ ಪ್ರೇಮಿಗಳ ಆತಂಕ ನಿವಾರಣೆ

ವಾರ್ತಾಭಾರತಿವಾರ್ತಾಭಾರತಿ4 Nov 2016 8:38 PM IST
share
ಜಿಲ್ಲೆಯ ಕಂಬಳ ಪ್ರೇಮಿಗಳ ಆತಂಕ ನಿವಾರಣೆ

ಪುತ್ತೂರು, ನ.4: ಜಿಲ್ಲೆಯಲ್ಲಿ ಕಂಬಳ ಅಯೋಜಿಸಲು ಅನುಮತಿ ನಿರಾಕರಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟು ತಡೆಯಾಜ್ಞೆ ನೀಡಿದ್ದು, ಕರಾವಳಿ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಪುತ್ತೂರಿನ ಕೋಟಿ ಚೆನ್ನಯ ಕೋಡುಕರೆ ಕಂಬಳವು ಕಳೆದ ಬಾರಿಯಂತೆ ಈ ಬಾರಿಯೂ ನಿರಾತಂಕವಾಗಿ ನಡೆಯುವುದು ಎಂದು ಕಂಬಳ ತೀರ್ಪುಗಾರ ನಿರಂಜನ ರೈ ಮಠಂತಬೆಟ್ಟು ತಿಳಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಕಂಬಳ ಆಯೋಜಿಸಲು ರಾಜ್ಯ ಹೈಕೋರ್ಟ್ ಹಸಿರುನಿಶಾನೆ ತೋರಿದ ಹಿನ್ನಲೆಯಲ್ಲಿ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಜಿಲ್ಲೆಯಲ್ಲಿ ನಿಗದಿಯಾಗಿರುವ ಕಂಬಳವನ್ನು ಕಳೆದ ಬಾರಿಯಂತೆ ಯಥಾಸ್ಥಿತಿಯಲ್ಲಿ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಂಬಳ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ ಕಂಬಳ ನಡೆಸಲು ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದರು. ಜಿಲ್ಲಾಧಿಕಾರಿಗಳ ಈ ನಿಲುವನ್ನು ಪ್ರಶ್ನಿಸಿ ಮತ್ತು ಕಂಬಳ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿ ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅಶೋಕ್ ಕುಮಾರ್ ರೈ ಅವರ ಪರವಾಗಿ ಹೈಕೋರ್ಟಿನಲ್ಲಿ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಮತ್ತು ರಾಜಶೇಖರ್ ಇಲ್ಯಾರು ಮಂಡಿಸಿದ ವಾದವನ್ನಾಲಿಸಿದ ನ್ಯಾಯಾಧೀಶ ಎ.ಎಸ್.ಬೋಪಯ್ಯ ಅವರು ಜಿಲ್ಲಾಧಿಕಾರಿಗಳ ಆದೇಶಕ್ಕೆ ಗುರುವಾರ ತಡೆಯಾಜ್ಞೆ ನೀಡಿ, ಕಂಬಳವನ್ನು ಕಳೆದ ಬಾರಿಯಂತೆ ಯಥಾಸ್ಥಿತಿಯಲ್ಲಿ ಅವಕಾಶ ಕಲ್ಪಿಸಿ ಆದೇಶ ನೀಡಿದ್ದಾರೆ.

ಹೈಕೋರ್ಟಿನಲ್ಲಿ ನಮ್ಮ ಕಾನೂನು ಹೋರಾಟಕ್ಕೆ ಜಯ ಲಭಿಸಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ. ಕಂಬಳ ಅಯೋಜಿಸಲು ಅನುಮತಿ ನಿರಾಕರಿಸಿದ್ದ ಉಡುಪಿ ಜಿಲ್ಲಾಧಿಕಾರಿಗಳ ನಿಲುವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ರಾಜ್ಯ ಹೈಕೋರ್ಟು ಕಂಬಳ ನಡೆಸಲು ಅವಕಾಶ ನೀಡಿ ಆದೇಶಿಸಿತ್ತು. ಆದರೆ ದ.ಕ ಜಿಲ್ಲಾಧಿಕಾರಿ ಕಂಬಳಕ್ಕೆ ಅವಕಾಶ ನೀಡುವುದಿಲ್ಲ ಎಂದು ಲಿಖಿತವಾಗಿ ತಿಳಿಸಿದ್ದರು. ಇದೀಗ ಅಶೋಕ್ ರೈ ಕುಮಾರ್ ಕೋಡಿಂಬಾಡಿ ಅವರ ಕಾನೂನು ಹೋರಾಟಕ್ಕೆ ಜಯ ಸಿಕ್ಕಿರುವುದರಿಂದ ಕಂಬಳ ನಡೆಸಲು ಎದುರಾಗಿದ್ದ ಅಡ್ಡಿ ಆತಂಕ ನಿವಾರಣೆಯಾಗಿದೆ, ಇದು ಕಂಬಳ ಪ್ರೇಮಿಗಳಿಗೆ ಖುಷಿ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಕೃಷಿ ಸಂಸ್ಕೃತಿಯ ಅಂಗ: ಹಿಂಸೆ ಇಲ್ಲ

ಕಂಬಳ ತುಳುನಾಡಿನ ಒಂದು ಗಂಡು ಕಲೆಯಾಗಿದ್ದು, ನಾಗಾರಾಧನೆ, ದೈವಾರಾಧನೆಯಂತೆ ಕಂಬಳ ಕಲೆಯೂ ಬಹಳಷ್ಟು ಪುರಾತನ ಕಾಲದಿಂದ ನಡೆದುಬಂದಿದೆ. ಕಂಬಳ ಮನರಂಜನೆಯ ಜೊತೆಗೆ ಕೃಷಿ ಸಂಸ್ಕೃತಿಯ ಒಂದು ಅವಿಭಾಜ್ಯ ಅಂಗವಾಗಿದ್ದು, ಕೃಷಿ ಸಂಸ್ಕೃತಿಯ ಜೊತೆಗೆ ಕಂಬಳ ಸಂಸ್ಕೃತಿಯೂ ಉಳಿಯಬೇಕಾಗಿದೆ ಎಂದಿರುವ ನಿರಂಜನ ರೈ ಮಠಂತಬೆಟ್ಟು, ಕಂಬಳದಲ್ಲಿ ಹಿಂಸೆ ಇಲ್ಲ. ತಾಲೂಕು ದಂಡಾಧಿಕಾರಿಗಳು, ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲೇ ಕಂಬಳ ನಡೆಯುವುದರಿಂದ ಹಿಂಸೆಗೆ ಅವಕಾಶವೇ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪುತ್ತೂರು ಕಂಬಳ ಯಥಾಸ್ಥಿತಿ ಜಯಕರ್ನಾಟಕ ಸಂಘಟನೆಯ ಸ್ಥಾಪಕಾಧ್ಯಕ್ಷರಾದ ಉದ್ಯಮಿ ಎನ್.ಮುತ್ತಪ್ಪ ರೈ , ಶಾಸಕ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಳೆದ ಹಲವಾರು ವರ್ಷಗಳಿಂದ ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆದುಕೊಂಡು ಬಂದಿರುವ ಐತಿಹಾಸಿಕ ಹಿನ್ನಲೆಯುಳ್ಳ ಕೋಟಿ ಚೆನ್ನಯ ಕೋಡುಕರೆ ಕಂಬಳವೂ ಈ ಬಾರಿಯೂ ಯಥಾಸ್ಥಿತಿಯಲ್ಲಿ ಯಶಸ್ವಿಯಾಗಿ ನಡೆಯಲಿದೆ ಎಂದು ನಿರಂಜನ ರೈ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X