Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಸ್ಯೆಗೆ ಪರಿಹಾರ ಹುಡುಕುವ ಆಸಕ್ತಿ ...

ಸಮಸ್ಯೆಗೆ ಪರಿಹಾರ ಹುಡುಕುವ ಆಸಕ್ತಿ ವಹಿಸಿ: ಅಣ್ಣಾಮಲೈ

‘ನೆರೆಹೊರೆ ಯುವಸಂಸತ್’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Nov 2016 10:26 PM IST
share
ಸಮಸ್ಯೆಗೆ ಪರಿಹಾರ ಹುಡುಕುವ ಆಸಕ್ತಿ  ವಹಿಸಿ: ಅಣ್ಣಾಮಲೈ

ಚಿಕ್ಕಮಗಳೂರು, ನ.4: ಸುತ್ತಲಿನ ಸಮಸ್ಯೆಗಳನ್ನು ಅರಿತು ಪರಿಹಾರ ಹುಡುಕುವುದರತ್ತ ವಿದ್ಯಾರ್ಥಿ ಯುವಜನರು ಆಸಕ್ತಿ ವಹಿಸಬೇಕು ಎಂದು ಎಸ್ಪಿ ಕೆ.ಅಣ್ಣಾಮಲೈ ಕರೆ ನೀಡಿದರು.

ಅವರು ಶುಕ್ರವಾರ ಚಿಕ್ಕಮಗಳೂರು ಅಡ್ವೆಂಚರ್ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಗರದ ಸ್ಕೌಟ್ ಭವನದಲ್ಲಿ ಆಯೋಜಿಸಿದ ‘ನೆರೆಹೊರೆ ಯುವಸಂಸತ್ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು.

ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಆಲೋಚನೆ, ಸಂಶೋಧನೆ, ಪ್ರಯೋಗ ಕೈಗೊಂಡು ಜನರ ಜೀವನ ಹಸನುಗೊಳಿಸುವ ಬದಲು ದೊಡ್ಡ ಕಂಪೆನಿ ಸೇರಿ ವೈಯಕ್ತಿಕ ಬೆಳವಣಿಗೆಯನ್ನಷ್ಟೆ ಕಂಡುಕೊಳ್ಳುವುದು ಗ್ರಾಮಕ್ಕೆ ದ್ರೋಹ ಬಗೆದಂತೆ. ಹೊಸ ವಿಷಯಗಳ ಬಗ್ಗೆ ಆಲೋಚಿಸಿ ಕಾರ್ಯರೂಪಕ್ಕಿಳಿಸಿದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಬಹುದು ಎಂದರು.

ಚಿಕ್ಕಮಗಳೂರು ಅಡ್ವೆಂಚರ್ ಸ್ಪೋರ್ಟ್ಸ್‌ಕ್ಲಬ್ ಅಧ್ಯಕ್ಷೆ ನಳಿನಾ ಡಿಸಾ ಮಾತನಾಡಿ, ವಿದ್ಯಾರ್ಥಿ ಯುವಕರು ಸಾಂಘಿಕ ಶಿಸ್ತು ಮತ್ತು ನಾಯಕತ್ವ ಬೆಳೆಸಿಕೊಳ್ಳಬೇಕು. ಮಾನಸಿಕ ದೃಢತೆ, ನೈತಿಕ ಬೆಂಬಲದೊಂದಿಗೆ ದುಶ್ಚಟಗಳಿಂದ ಮುಕ್ತರಾಗಬಹುದು. ಒಳ್ಳೆಯ ಹವ್ಯಾಸ ಮತ್ತು ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಹೊಂದಬಹುದು ಎಂದರು.

ಅಡ್ವೆಂಚರ್ ಸ್ಪೋರ್ಟ್ಸ್ ಕ್ಲಬ್ 2007ರಲ್ಲಿ ಅಂದಿನ ಎಸ್ಪಿ ವಿಪುಲಕುಮಾರ್ ಅಧ್ಯಕ್ಷತೆಯಲ್ಲಿ ಆರಂಭಗೊಂಡಿತು. ಅವಘಡ ರಹಿತ ಸಾಹಸ ಚಟುವಟಿಕೆ ಇದರ ಗುರಿ. ಏಕಾಗ್ರತೆ, ಶಿಸ್ತು, ಸಂಯಮ, ಧೈರ್ಯ, ಆತ್ಮವಿಶ್ವಾಸದ ಜೊತೆಗೆ ಉತ್ಸಾಹ ಮೂಡಿಸುವುದು ಕ್ಲಬ್‌ನ ಉದ್ದೇಶ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ. ಎಚ್.ಪಿ. ಮಂಜುಳಾ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಂಜುನಾಥ, ಸೈಕೋತೆರಪಿಸ್ಟ್ ಮಮತಾ ಮಹೇಶ್, ವಕೀಲೆ ಡಿ.ಎಸ್. ಮಮತಾ, ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷ ಎನ್.ಎಸ್. ಶಿವಸ್ವಾಮಿ, ಎನ್.ವೈ.ಕೆ. ಮಂಜುನಾಥ, ಚಿಕ್ಕಮಗಳೂರು ಅಡ್ವೆಂಚರ್ ಸ್ಪೋರ್ಟ್ಸ್‌ಕ್ಲಬ್ ಕಾರ್ಯದರ್ಶಿ ವಿವೇಕ, ಉಪಾಧ್ಯಕ್ಷ ಕಿಶನ್‌ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವೈಯಕ್ತಿಕ ಮಹತ್ವಾಕಾಂಕ್ಷೆಗಿಂತ ಸಮುದಾಯದ ಸಮಸ್ಯೆಗಳ ವಿರುದ್ಧ ಪರಿಹಾರ ಹುಡುಕಬೇಕು. ಇಂದು ಸಮಾಜಸೇವೆ, ಸಾಹಿತ್ಯ ರಚನೆ, ಪರಿಸರ ಸಂರಕ್ಷಣೆ, ಮಳೆನೀರು ಕೊಯ್ಲು ಸೇರಿದಂತೆ ಜನಪರ ಕಾರ್ಯಗಳಲ್ಲಿ ಹಿರಿಯರಷ್ಟೇ ತೊಡಗಿಸಿಕೊಂಡಿದ್ದಾರೆ, ಯುವಕರ ಸುಳಿವೇ ಇಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X