ಬಿ.ಎಚ್.ಖಾದರ್‌ರಿಗೆ ನಿಗಮದ ಅಧ್ಯಕ್ಷ ಸ್ಥಾನ
ಮಂಗಳೂರು, ಅ. 4: ಬಂಟ್ವಾಳದ ಬಿ.ಎಚ್.ಖಾದರ್ ಅವರಿಗೆ ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮೊದಲು ನಿಗಮದ ಹೊಣೆಯನ್ನು ಇತ್ತೀಚೆಗೆ ಹತ್ಯೆಗೀಡಾದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕರಾವಳಿ ವಿಭಾಗದ ಅಧ್ಯಕ್ಷ ಇಸ್ಮಾಯೀಲ್ ನೇಲ್ಯಮಜಲು ಅವರ ಪತ್ನಿ ವಹೀದಾ ಅವರು ವಹಿಸಿಕೊಳ್ಳಲಿದ್ದಾರೆಂದು ಹೇಳಲಾಗಿತ್ತು.
ಈ ಬಗ್ಗೆ ಇಂದು ಅಂತಿಮ ಪಟ್ಟಿ ಸಿದ್ಧಗೊಂಡಿದ್ದು, ಅದರಂತೆ ಖಾದರ್ ಆಯ್ಕೆ ಬಹುತೇಕ ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಬಿ.ಎಚ್.ಖಾದರ್ ಅವರು ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅವರು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Next Story





