ಉಡುಪಿಯಲ್ಲಿ ಹಾರದ ನಾಡಧ್ವಜ: ಕರವೇ ಖಂಡನೆ
ಉಡುಪಿ, ನ.4: ಉಡುಪಿಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಕನ್ನಡದ ನಾಡ ಧ್ವಜವನ್ನು ಹಾರಿಸದೆ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕವು ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಉಡುಪಿ ಜಿಲ್ಲೆಯಲ್ಲಿ ಮಾತ್ರ ಈ ವಿಶಿಷ್ಟ ಸಂಪ್ರದಾಯ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಇಲ್ಲಿ ಕನ್ನಡ ಧ್ವಜಕ್ಕೆ ಮಾನ್ಯತೆ ಇಲ್ಲವಾಗಿದೆ ಇದು ಖಂಡನೀಯ. ಈ ಕುರಿತು ಜಿಲ್ಲಾಧಿಕಾರಿಗಳು ಜನತೆಗೆ ಉತ್ತರಿಸಬೇಕು. ಆ ದಿನ ಕರಾಳ ದಿನ ಆಚರಿಸಿರುವ ತುಳುನಾಡ ರಕ್ಷಣಾ ವೇದಿಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಕರವೇ ಜಿಲ್ಲಾಧ್ಯಕ್ಷ ಎಸ್.ಆರ್.ಲೋಬೊ, ಪ್ರ.ಕಾರ್ಯದರ್ಶಿ ಯು.ಸುದೇಶ್ ಶೇಟ್ ಉಪಸ್ಥಿತರಿದ್ದರು.
Next Story





