Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯದಲ್ಲಿ ಹೋಬಳಿ ಮಟ್ಟದ ಜನಸಂಪರ್ಕ...

ಸುಳ್ಯದಲ್ಲಿ ಹೋಬಳಿ ಮಟ್ಟದ ಜನಸಂಪರ್ಕ ಸಭೆ: 94ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Nov 2016 6:24 PM IST
share
ಸುಳ್ಯದಲ್ಲಿ ಹೋಬಳಿ ಮಟ್ಟದ ಜನಸಂಪರ್ಕ ಸಭೆ: 94ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ

ಸುಳ್ಯ, ನ.5: ಸುಳ್ಯ ತಾಲೂಕು ಪಂಚಾಯತ್ ಪಯಸ್ವಿನಿ ಸಭಾಂಗಣದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸಭೆಯ ಔಚಿತ್ಯದ ಕುರಿತು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ತೀವ್ರ ಟೀಕೆ ವ್ಯಕ್ತವಾಯಿತು.

ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶುಭದಾ ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ, ತಹಶೀಲ್ದಾರ್ ಎಂ.ಎಂ.ಗಣೇಶ್ ವೇದಿಕೆಯಲ್ಲಿದ್ದರು. ಸಬೆ ಆರಂಭವಾಗುತ್ತಿದ್ದಂತೆ ಸಾರ್ವನಿಕರು ಅಹವಾಲು ನೀಡಬಹುದು ಎಂದು ಕಾರ್ಯನಿರ್ವಹಣಾಧಿಕಾರಿ ಹೇಳಿದರು.

ಆಗ ಎದ್ದು ನಿಂತ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಈ ಹಿಂದೆ 5 ಬಾರಿ ಜನಸಂಪರ್ಕ ಸಭೆ ನಡೆದಿವೆ. ಆದರೆ ಸಾರ್ವಜನಿಕರು ನೀಡಿದ ಅಹವಾಲು ಏನಾಗಿದೆ ಎಂದು ವಿವರ ನೀಡಬೇಕು ಎಂದರು.

ಸಂಪಾಜೆ 33 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಕುರಿತು 17 ವರ್ಷಗಳಿಂದ ನಿರಂತರ ಪ್ರಯತ್ನಗಳು ನಡೆಯುತ್ತಿವೆ. 5 ಬಾರಿ ಜನಸಂಪರ್ಕ ಸಭೆಯಲ್ಲೂ ಅಹವಾಲು ಸಲ್ಲಿಸಲಾಗಿದೆ. ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರೆ. ಹಾಗಿದ್ದೂ ಇನ್ನೂ ಜಮೀನು ಮೆಸ್ಕಾಂಗೆ ಹಸ್ತಾಂತರ ಆಗಿಲ್ಲ. ಅರಣ್ಯ ಇಲಾಖೆಯವರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

94ಸಿಯಡಿ ಅರ್ಜಿ ಸಲ್ಲಿಸಿದ ಬಡ ಜನರಿಂದ ಗ್ರಾಮಕರಣಿಕರು 10ರಿಂದ 20 ಸಾವಿರ ಲಂಚ ಕೇಳುತ್ತಿದ್ದಾರೆ. ಇದಕ್ಕೆ ತನ್ನ ಬಳಿ ದಾಖಲೆಯೂ ಇದೆ. ಅಧಿಕಾರಶಾಹಿ ತೊಲಗಬೇಕು. ಜನಪ್ರತಿನಿಧಿಗಳು ಧ್ವನಿ ಎತ್ತಬೇಕು ಎಂದು ಜಿ.ಕೆ. ಹಮೀದ್ ಆಕ್ರೋಶ ವ್ಯಕ್ತಪಡಿಸಿದರು. 2 ಎಕರೆ ಜಮೀನು ಮೆಸ್ಕಾಂಗೆ ಹಸ್ತಾಂತರಿಸುವ ಹಂತದಲ್ಲಿ ರಸ್ತೆ ಮಾರ್ಜಿನ್ ಕಾರಣದಿಂದ ಜಮೀನನ್ನು ಹಿಂದಿನ ಭಾಗಕ್ಕೆ ವಿಸ್ತರಿಸಿದಾಗ ಕೆಎಫ್‌ಡಿಸಿ ಜಮೀನು ಇರುವುದು ಗೊತ್ತಾಗಿ ಅವರಿಗೆ ಎನ್‌ಒಸಿಗೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೈ ಉತ್ತರಿಸಿದರು.

ಅರಣ್ಯ ಇಲಾಖೆಗೆ ಪರ್ಯಾಯವಾಗಿ 2 ಎಕರೆ ಕಂದಾಯ ಜಮೀನನ್ನು ಅಜ್ಜಾವರ ಗ್ರಾಮದಲ್ಲಿ ನೀಡಲಾಗಿದೆ. ಹಾಗಿದ್ದೂ ಹಸ್ತಾಂತರ ತಡವಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಶಾಸಕರ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ತಾಲೂಕು ಪಂಚಾಯತ್‌ನಲ್ಲಿ ನಡೆಸಿ ಇತ್ಯರ್ಥ ಪಡಿಸುವುದೆಂದು ನಿರ್ಣಯಿಸಲಾಯಿತು.

ಕಲ್ಚರ್ಪೆ ಡಂಪಿಂಗ್ ಯಾರ್ಡ್‌ನಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿಲ್ಲ. ವಾರದಲ್ಲಿ ಸರಿಪಡಿಸದಿದ್ದರೆ ತ್ಯಾಜ್ಯದ ಟ್ರಾಕ್ಟರ್‌ನ್ನು ತಡೆದು ಧರಣಿ ನಡೆಸಲಾಗುವುದು ಎಂದು ರಾಧಾಕೃಷ್ಣ ಪರಿವಾರಕಾನ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X