ಸಂಸದೆ ಶೋಭಾ ಪೊಲೀಸ್ ಇಲಾಖೆ ಸೇರಿದ್ದು ಯಾವಾಗ: ಶಾಸಕ ಝಮೀರ್ ಅಹ್ಮದ್ ಪ್ರಶ್ನೆ

ಬೆಂಗಳೂರು, ನ. 5: ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಯವರು ಪೊಲೀಸ್ ಇಲಾಖೆಗೆ ಸೇರಿದ್ದು ಯಾವಾಗ ಎಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, ಧರ್ಮದ ಆಧಾರದ ಮೇಲೆ ಯಾವುದೇ ವ್ಯಕ್ತಿಯ ಮೇಲೆ ಆರೋಪ ಸರಿಯಲ್ಲ ಎಂದು ರೋಷನ್ ಬೇಗ್ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದರು.
ಸಾಬೀತು ಮಾಡಿದರೆ ರಾಜೀನಾಮೆ: ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್ ಬೇಗ್ ಪಾತ್ರ ಇರುವುದನ್ನು ಸಂಸದೆ ಶೋಭಾ ಕರಂದ್ಲಾಜೆ ಸಾಬೀತು ಮಾಡಿದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಸವಾಲು ಹಾಕಿದ ಶಾಸಕ ಝಮೀರ್ ಅಹ್ಮದ್, ಇಲ್ಲವಾದರೆ ಶೋಭಾ ರಾಜಕೀಯ ನಿವೃತ್ತಿ ಪಡೆಯುವರೇ ಎಂದು ಪ್ರಶ್ನಿಸಿದರು.ಾಗಲೇ ರೋಷನ್ ಬೇಗ್ ಯಾವುದೇ ತನಿಖೆಗೆ ಸಿದ್ಧ ಎಂದು ಘೋಷಿಸಿದ್ದು, ರುದ್ರೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ ಅವರು, ಪೊಲೀಸರ ತನಿಖೆ ಪ್ರಗತಿಯಲ್ಲಿರುವ ವೇಳೆ ಸಂಸದೆ ಮತ್ತು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಮಾಡುವುದು ಸರಿಯಲ್ಲ ಎಂದರು.ರೆಸೆಸ್ಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್ ಬೇಗ್ ಅವರ ಯಾವುದೇ ಕೈವಾಡವಿಲ್ಲ. ಶೋಭಾ ಕರಂದ್ಲಾಜೆ ರಾಜಕೀಯ ಕಾರಣಕ್ಕಾಗಿ ಮಾಡಿರುವ ಆರೋಪದಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.







