Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೈಪುರದ ನಕಲಿ ನ್ಯಾಯವಾದಿ ಬೆಂಗಳೂರಿನಲ್ಲಿ...

ಜೈಪುರದ ನಕಲಿ ನ್ಯಾಯವಾದಿ ಬೆಂಗಳೂರಿನಲ್ಲಿ ಸೆರೆ

ವಾರ್ತಾಭಾರತಿವಾರ್ತಾಭಾರತಿ6 Nov 2016 3:36 PM IST
share
ಜೈಪುರದ ನಕಲಿ ನ್ಯಾಯವಾದಿ ಬೆಂಗಳೂರಿನಲ್ಲಿ ಸೆರೆ

ಬೆಂಗಳೂರು, ನ.6:  ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಜೈಪುರದ ಮೂಲದ ನಕಲಿ ವಕೀಲೆಯನ್ನು ಶನಿವಾರ  ಪುಲಕೇಶಿ ನಗರ ಪೊಲೀಸರು ಬಂಧಿಸಿದ್ದಾರೆ.
ಖುಷ್ಬುಶರ್ಮಾಳನ್ನು  ವಕೀಲರೊಬ್ಬರಿಂದ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಪುಲಕೇಶಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 
 ಖುಷ್ಬು ಶರ್ಮಾ ಅಲಿಯಾಸ್ ಸ್ಮೃತಿ ಶರ್ಮಾ(26) ವಿರುದ್ಧ ರಾಜಸ್ಥಾನ, ದಿಲ್ಲಿ, ಆಂಧ್ರಪ್ರದೇಶ, ಪುಣೆ ಸೇರಿದಂತೆ ದೇಶದ ವಿವಿಧೆಡೆ 150ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ಅಂಗವಿಕಲೆಯಾಗಿರುವ ಖುಷ್ಬು ಶರ್ಮ ಅಫಘಾತವೊಂದರಲ್ಲಿ ಬಲಗೈಯನ್ನು ಕಳೆದುಕೊಂಡಿದ್ದಳು.
  ನಗರದ ಯುಬಿ ಸಿಟಿ ಕಟ್ಟಡದಲ್ಲಿ ಕೊಠಡಿ ಕೊಡಿಸುವ ನೆಪದಲ್ಲಿ ನ್ಯಾಯವಾದಿಯೊಬ್ಬರಿಂದ  2.5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದರೆನ್ನಲಾಗಿದೆ. ಅವರು ನೀಡಿದ ದೂರಿನಂತೆ   ಪುಲಕೇಶಿ ನಗರ ಪೊಲೀಸರು ಖುಷ್ಬು ಶರ್ಮಾ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಈಕೆ ಹಲವು ವಂಚನೆ  ಪ್ರಕರಣಗಳು ಬೆಳಕಿಗೆ ಬಂದಿತೆನ್ನಲಾಗಿದೆ.  ಒಂದು ಕಡೆ ಐಎಎಸ್ ಅಧಿಕಾರಿ. ಇನ್ನೊಂದು ಕಡೆ ಐಪಿಎಸ್ ಅಧಿಕಾರಿಯ ಮಗಳು ಹಾಗೂ  ಸುಪ್ರೀಂ ಕೋರ್ಟ್‌ನ ವಕೀಲೆ ಎಂದು ಹೇಳಿಕೊಳ್ಳುತ್ತಿದ್ದ 
ಇಂದಿರಾನಗರದ ಪಿಜಿಯೊಂದರಲ್ಲಿ ವಾಸವಾಗಿದ್ದಳು. ಜೈಪುರ ಮೂಲದ ಖುಷ್ಬು ಶರ್ಮಾ ಕಳೆದ ಏಪ್ರಿಲ್ ನಲ್ಲಿ ಬೆಂಗಳೂರಿಗೆ ಆಗಮಿಸಿ ಇಂದಿರಾನಗರದ ಪಿಜಿಯೊಂದರಲ್ಲಿ ವಾಸವಾಗಿದ್ದಳು.ನಗರದ ವಕೀಲರೊಬ್ಬರನ್ನು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದಳು. ತಾನು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯವಾದಿ ಎಂದು ಹೇಳಿ ಅವರಿಗೆ ಕಚೇರಿ ತೆರೆಯಲು ಯುಬಿ ಸಿಟಿ ಕಟ್ಟಡದಲ್ಲಿ ಕೊಠಡಿ ಒದಗಿಸಿಕೊಡುವುದಾಗಿ ನಂಬಿಸಿ ವಂಚಿಸಲು ಹೋಗಿ ಸಿಕ್ಕಿ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ  ವಕೀಲರಿಗೆ ಕಚೇರಿಗೆ ಕೊಠಡಿ ಒದಗಿಸಿಕೊಂಡು ಭರವಸೆ ನೀಡಿ 1.45 ಲಕ್ಷ ರುಪಾಯಿ ಮತ್ತು  80 ಸಾವಿರ ರೂಪಾಯಿ ಮೌಲ್ಯದ ಆ್ಯಪಲ್ ಫೋನ್‌ ಪಡೆದಿದ್ದಳು  ಎನ್ನಲಾಗಿದೆ.
ಖುಷ್ಬು ಕಚೇರಿ ತೋರಿಸಲು ಬಂದಿದ್ದ ವೇಳೆ ವಕೀಲರನ್ನು ಯುಬಿ ಸಿಟಿ ಕಟ್ಟಡದ ಬಳಿ ಇಳಿಸಿ ಅವರ ಕಾರಿನಲ್ಲಿದ್ದ ಕರಿಕೋಟು ಹಾಗೂ ಸೂಟ್‌ಕೇಸ್ ತೆಗೆದುಕೊಂಡು ಪರಾರಿಯಾಗಿದ್ದಳು. ಅವರ ಕೋಟಿನಲ್ಲಿ 25 ಸಾವಿರ ರುಪಾಯಿ ನಗದು ಇತ್ತು ಎನ್ನಲಾಗಿದೆ. ವಂಚನೆಗೊಳಗಾದ ವಕೀಲರು    ಪುಲಕೇಶಿ ನಗರ ಠಾಣೆಗೆ ಈಕೆಯ ವಿರುದ್ಧ ದೂರು ನೀಡಿದ್ದರು.
 ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ಖುಷ್ಬು  ಓದಿದ್ದು  8ನೇ ತರಗತಿ. ತನಗಿರುವ ಸೌಂದರ್ಯವನ್ನೇ  ಬಂಡವಾಳವನ್ನಾಗಿ ಮಾಡಿಕೊಂಡು ಹಲವರನ್ನು ಬುಟ್ಟಿಗೆ ಹಾಕಿಕೊಂಡು ಅವರಿಗೆ ವಂಚಿಸಿ ಪರಾರಿಯಾಗುತ್ತಿದ್ದಳು. ‘2015ರ ಮೇ 27ರಂದು ಜೈಪುರ ಪೊಲೀಸರು ಆಕೆಯನ್ನು ಬಂಧಿಸಿದ್ದರು. ವಿಚಾರಣೆಗೆ ಕರೆದೊಯ್ಯುವಾಗ ಸಂಭವಿಸಿದ ಕಾರು ಅಪಘಾತದಲ್ಲಿ ಆಕೆಯ ಬಲಗೈ  ಕಳೆದುಕೊಂಡಿದ್ದಳು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X