ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್‌ರಿಗೆ ಅದ್ಧೂರಿ ಸ್ವಾಗತ

ಬಂಟ್ವಾಳ, ನ. 6: ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಬಂಟ್ವಾಳದ ಹಿರಿಯ ಕಾಂಗ್ರೆಸಿಗ ಹಾಜಿ ಬಿ.ಎಚ್.ಖಾದರ್ ರವಿವಾರ ಬಂಟ್ವಾಳಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂರ ಹಾಕಿ ಸ್ವಾಗತಿಸಿದಲ್ಲದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಈ ವೇಳೆ ಸ್ಥಳಕ್ಕಾಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಹೂ ಹಾರ ಹಾಕಿ ಖಾದರ್‌ರನ್ನು ಆಲಂಗಿಸಿ ಅಭಿನಂದಿಸಿದರು. ಸೋಮವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರು-ಕೊಟ್ಟಾರ ಚೌಕಿಯಲ್ಲಿರುವ ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವುದಾಗಿ ಬಿ.ಎಚ್.ಖಾದರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಡಿಸಿಸಿ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಸದಾಶಿವ ಬಂಗೇರ, ಅಬೂಬಕರ್ ಸಿದ್ದೀಕ್ ಗುಡ್ಡೆಅಂಗಡಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಇರಾ ಗ್ರಾಪಂ ಅಧ್ಯಕ್ಷ ಅಬ್ದುರ್ರಝಾಕ್ ಕುಕ್ಕಾಜೆ, ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪ್ರಮುಖರಾದ ರಂಜಿತ್, ಹಸೈನಾರ್ ಶಾಂತಿಅಂಗಡಿ, ಅಝೀರ್ ಬೊಳ್ಳಾಯಿ, ಇರ್ಶಾದ್ ಗುಡ್ಡೆಅಂಗಡಿ, ಆರಿಫ್ ನಂದಾವರ, ಶಾಫಿ ನಂದಾವರ, ಚಂದ್ರಶೇಖರ್ ಕರ್ಣ, ಅಹ್ಮದ್ ಬಾವ, ಯಾಸೀನ್, ಶಾಕಿರ್ ಬಡಕಬೈಲು, ರಶೀದ್ ಬಾಳ್ತಿಲ, ಶರೀಫ್ ಆಲಡ್ಕ ಮೊದಲಾದವರು ಉಪಸ್ಥಿತರಿದ್ದರು.







