ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ಸಭೆ
ಉಡುಪಿ, ನ.6: ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ಸಭೆಯು ರವಿವಾರ ಸಂಜೆ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಜರಗಿತು.
ಸರಕಾರ ನಡೆಸಲುದ್ದೇಶಿಸಿರುವ ಟಿಪ್ಪುಸುಲ್ತಾನ್ ಜಯಂತಿಯನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷ ಮತ್ತು ಸಂಘಟನೆಗಳು ಸಮಾಜವನ್ನು ವಿಘಟಿಸಿ ಕೋಮುದ್ವೇಷವನ್ನು ಹಬ್ಬಿಸಲು ಮತ್ತು ಆ ಕೋಮುವಾದಕ್ಕೆ ಶೂದ್ರ ಮತ್ತು ದಲಿತ ವರ್ಗಗಳ ಯುವಕರನ್ನು ಪ್ರಚೋದಿಸಿ ಬಲಿಯಾಗಿಸುವ ತಂತ್ರ ನಡೆಸುತ್ತಿದ್ದು, ಸರಕಾರ ಇದರ ವಿರುದ್ಧ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನ.7ರಂದು ಉಡುಪಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಹುಸೇನ್ ಕೋಡಿಬೆಂಗ್ರೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story





