Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಥಮ ಟೆಸ್ಟ್: ಪಾಂಡ್ಯ, ನಾಯರ್ ಪರ...

ಪ್ರಥಮ ಟೆಸ್ಟ್: ಪಾಂಡ್ಯ, ನಾಯರ್ ಪರ ಕುಂಬ್ಳೆ ಬ್ಯಾಟಿಂಗ್

ವಾರ್ತಾಭಾರತಿವಾರ್ತಾಭಾರತಿ6 Nov 2016 11:20 PM IST
share
ಪ್ರಥಮ ಟೆಸ್ಟ್: ಪಾಂಡ್ಯ, ನಾಯರ್ ಪರ ಕುಂಬ್ಳೆ ಬ್ಯಾಟಿಂಗ್

  ರಾಜ್‌ಕೋಟ್, ನ.6: ಟೀಮ್ ಇಂಡಿಯಾದ ಕೋಚ್ ಅನಿಲ್ ಕುಂಬ್ಳೆ ಅವರು ಇಂಗ್ಲೆಂಡ್ ವಿರುದ್ಧ ನ.9ರಂದು ರಾಜ್‌ಕೋಟ್‌ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್‌ಗೆ ಭಾರತದ ಅಂತಿಮ ಹನ್ನೊಂದರ ಬಳಗದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಕರುಣ್ ನಾಯರ್ ಇವರಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂಬ ಗೊಂದಲದಲ್ಲಿ ಸಿಲುಕಿದ್ದಾರೆ.
‘ಐದನೆ ಬೌಲರ್’ ಆಗಿ ಹಾರ್ದಿಕ್ ಪಾಂಡ್ಯ ಮತ್ತು ‘ಆರನೆ ಬ್ಯಾಟ್ಸ್‌ಮನ್ ’ ಆಗಿ ಕರುಣ್ ನಾಯರ್ ಅವರನ್ನು ಸೇರಿಸಿಕೊಂಡರೆ ತಂಡಕ್ಕೆ ಪ್ರಯೋಜನವಾದಿತು ಎದು ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್. ಪ್ರತಿಭಾವಂತ ಆಟಗಾರ. ಅವರು ಐಪಿಎಲ್‌ಗೆ ಕಾಲಿರಿಸಿದಾಗಲೇ ತನ್ನ ಸಾಮರ್ಥ್ಯವನ್ನು ತೋರಿಸಿಕೊಟ್ಟಿದ್ದರು. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅವರು ಮಿಂಚಿದ್ದರೂ, ಟೆಸ್ಟ್‌ನಲ್ಲಿ ಆಡುವ ಎಲ್ಲ ಅರ್ಹತೆ ಅವರಿಗಿದೆ ಎಂದು ಕುಂಬ್ಳೆ ಹೇಳಿದ್ದಾರೆ.
 ತಂಡದಲ್ಲಿ ಐದನೆ ಬೌಲರ್‌ನ ಪ್ರಾಮುಖ್ಯತೆಯನ್ನು ಎಲ್ಲರೂ ಅರಿತುಕೊಂಡಿದ್ದಾರೆ. 140 ಕಿ.ಮೀ ವೇಗದಲ್ಲಿ ಬೌಲಿಂಗ್ ನಡೆಸುವ ಮತ್ತು ಕೆಳ ಕ್ರಮಾಂಕದಲ್ಲಿ ಚೆನ್ನಾಗಿ ಬ್ಯಾಟಿಂಗ್ ನಡೆಸುವ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿರುವ ಕುಂಬ್ಳೆ ನಾವು ಹಾರ್ದಿಕ್ ಅವರ ಬೆಳವಣಿಗೆಯನ್ನು ಗಮನಿಸುತ್ತಿದ್ದೇವೆ. ಸಿಕ್ಕಿದ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಲು ಪಾಂಡ್ಯಗೆ ನಾವು ಮುಕ್ತ ಸ್ವಾತಂತ್ರ ನೀಡಿರುವುದಾಗಿ ಕುಂಬ್ಳೆ ಹೇಳಿದ್ದಾರೆ.

ಕರ್ನಾಟಕದ ಕರುಣ್ ನಾಯರ್ ಅವರು ಆರನೆ ಕ್ರಮಾಂಕದಲ್ಲಿ ಆಡಲು ಸೂಕ್ತ ಬ್ಯಾಟ್ಸ್‌ಮನ್ ಆಗಿದ್ದಾರೆ. ಟೆಸ್ಟ್‌ನಲ್ಲಿ ಈ ವರೆಗೆ ಆಡದಿದ್ದರೂ ನಾಯರ್ ಸಾಮರ್ಥ್ಯದ ಬಗ್ಗೆ ಕುಂಬ್ಳೆಗೆ ವಿಶ್ವಾಸವಿದೆ. ಕರುಣ್ ನಾಯರ್ ದೇಶಿಯ ಕ್ರಿಕೆಟ್‌ನಲ್ಲಿ ಸಾಕಷ್ಟು ರನ್ ಸೇರಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.ಅವರು ಗರಿಷ್ಠ ರನ್ ದಾಖಲಿಸುತ್ತಾರೆ. ಪ್ರತಿಯೊಂದು ಪಂದ್ಯಗಳಲ್ಲೂ ಚೆನ್ನಾಗಿ ಆಡುತ್ತಾರೆ. ಅವರು ಆಸ್ಟ್ರೇಲಿಯ ಪ್ರವಾಸದ ವೇಳೆ ಭಾರತ ಎ’ ತಂಡದ ಪರ ಚೆನ್ನಾಗಿ ಆಡಿಲ್ಲ ಎಂಬ ಕಾರಣಕ್ಕಾಗಿ ಅವರ ಸಾಮರ್ಥ್ಯವನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ. ನ್ಯೂಝಿಲೆಂಡ್ ವಿರುದ್ಧ ಆಡಿದ ತಂಡದಲ್ಲಿ ಅವರಿದ್ದರು. ಈಗ ಅವರು ರಣಜಿ ತಂಡದಲ್ಲಿ ಚೆನ್ನಾಗಿ ಆಡುತ್ತಿದ್ದಾರೆ. ರೋಹಿತ್ ಶರ್ಮ ಅನುಪಸ್ಥಿತಿಯಲ್ಲಿ ನಾಯರ್‌ಗೆ ಅವಕಾಶ ನೀಡಬಹುದು ಎಂದು ಕುಂಬ್ಳೆ ಹೇಳಿದ್ದಾರೆ.
ಭಾರತ ಈ ಹಿಂದೆ ಮೂರು ಟೆಸ್ಟ್ ಸರಣಿಗಳಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. 2011 ಮತ್ತು 2014ರಲ್ಲಿ ಇಂಗ್ಲೆಂಡ್‌ನಲ್ಲಿ , 2012ರಲ್ಲಿ ಭಾರತದಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ಸೋಲು ಅನುಭವಿಸಿತ್ತು.
ನಾವು ಇತಿಹಾಸವನ್ನು ನೋಡಿ ತಂಡದ ಸಾಮರ್ಥ್ಯದ ಬಗ್ಗೆ ಮಾತನಾಡಬಾರದು. ಈಗ ಭಾರತ ತಂಡದಲ್ಲಿ ಮತ್ತು ಇಂಗ್ಲೆಂಡ್ ತಂಡದಲ್ಲಿ ಹೊಸ ಆಟಗಾರರು ಇದ್ದಾರೆ.ಈ ಪೈಕಿ ಕೆಲವು ಆಟಗಾರರು ಹಿಂದೆ ನಡೆದ ಸರಣಿಯಲ್ಲಿ ಆಡಿರುವ ಅನುಭವ ಹೊಂದಿದ್ದಾರೆ.
 ‘‘ ಸರಣಿಯಲ್ಲಿ ಪ್ರತಿಯೊಬ್ಬ ಆಟಗಾರನು ಚೆನ್ನಾಗಿ ಪ್ರದರ್ಶನ ನೀಡಲು ಬಯಸುತ್ತಾನೆ.ಈ ಸರಣಿಯಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಲಿದೆ ಎಂದು ಕುಂಬ್ಳೆ ವಿಶ್ವಾಸ ವ್ಯಕ್ತಪಡಿಸಿದರು.
ಇಂಗ್ಲೆಂಡ್ ತಂಡದ ನಾಯಕ ಅಲೆಸ್ಟೈರ್ ಕುಕ್ ಮತ್ತು ಜೋ ರೂಟ್ ಅವರು ಭಾರತಕ್ಕೆ ಹಲವು ಬಾರಿ ಬಂದಿದ್ದಾರೆ. ಅವರು ಇಲ್ಲಿ ಆಡಿರುವ ಅಪಾರ ಅನುಭವ ಹೊಂದಿದ್ದಾರೆ. ಅವರ ಬೌಲಿಂಗ್ ದಾಳಿ ಹಿಂದೆ ತೊಂದರೆ ಕೊಟ್ಟಿತ್ತು. ಈ ಹೊತ್ತು ಅದೇ ದಾಳಿಯನ್ನು ಇಂಗ್ಲೆಂಡ್‌ನಿಂದ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕುಂಬ್ಳೆ ನುಡಿದರು.
ರಾಜ್‌ಕೋಟ್‌ನಲ್ಲಿ ಹೊಸ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಆಡಿದ್ದರೂ ಟೆಸ್ಟ್‌ನಲ್ಲಿ ಪಿಚ್ ಯಾವ ರೀತಿ ಇದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಕುಂಬ್ಳೆ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X