ಅಜ್ಜಾವರ: ನಾಳೆಯಿಂದ ಕ್ರೀಡಾ ಹಬ್ಬ
ಸುಳ್ಯ, ನ.6: ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವು ನ.8 ಮತ್ತು 9ರಂದು ಅಜ್ಜಾವರ ಸರಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ದ.ಕ. ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಸ್ವಾಗತ ಸಮಿತಿ ಹಾಗೂ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನ.8ರಂದು ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸುವರು. ನ.9ರಂದು ಅಪರಾಹ್ನ ಸಮಾರೋಪ ಸಮಾರಂಭ ನಡೆಯಲಿದೆ. ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪಬಹುಮಾನ ವಿತರಿಸಲಿದ್ದಾರೆ. ತಾಪಂ ಉಪಾಧ್ಯಕ್ಷೆ ಶುಭದಾ ಎಸ್ ರೈ ಅಧ್ಯಕ್ಷತೆ ವಹಿಸುವರು. ಮೂರು ವಿಭಾಗಗಳಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ನಾಗರಾಜ್, ಆರ್ಥಿಕ ಸಮಿತಿ ಸಂಚಾಲಕ ವೆಂಕಟ್ರಮಣ ಅತ್ಯಾಡಿ, ಸದಸ್ಯರಾದ ಸುರೇಶ್ ಕಣೆಮರಡ್ಕ, ಶಿವಪ್ರಸಾದ್ ಯು.ಎಮ್ ಉಪಸ್ಥಿತರಿದ್ದರು.





