Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತುಳು ಸಂಸ್ಕೃತಿ ವಿಶ್ವಕ್ಕೆ ಮಾದರಿ: ಸಚಿವ...

ತುಳು ಸಂಸ್ಕೃತಿ ವಿಶ್ವಕ್ಕೆ ಮಾದರಿ: ಸಚಿವ ಯು.ಟಿ ಖಾದರ್

ವಾಶಿಯಲ್ಲಿ ರಂಗಭೂಮಿ ಫೈನ್ ಆರ್ಟ್ಸ್ ರಜತಮಹೋತ್ಸವ ಸಮಾರೋಪ

ವರದಿ : ರೋನ್ಸ್ ಬಂಟ್ವಾಳ್ವರದಿ : ರೋನ್ಸ್ ಬಂಟ್ವಾಳ್6 Nov 2016 11:59 PM IST
share
ತುಳು ಸಂಸ್ಕೃತಿ ವಿಶ್ವಕ್ಕೆ ಮಾದರಿ: ಸಚಿವ ಯು.ಟಿ ಖಾದರ್

ಮುಂಬೈ, ನ.6: ಮುಂಬೈನಲ್ಲಿ ತುಳುನಾಡ ಸಂಸ್ಕೃತಿಯ ಬೆಳವಣಿಗೆ ಅಭಿನಂದನೀಯ. ಮಾಯಾನಗರಿಯಲ್ಲಿ ರಂಗಭೂಮಿ ಫೈನ್‌ಆರ್ಟ್ಸ್‌ನ ಇಪ್ಪತೈದರ ಸೇವೆ ಅನನ್ಯವಾಗಿದ್ದು. ಇದು ತುಳುನಾಡಿನ ಸಂಸ್ಕೃತಿ ಅನಾವರಣಕ್ಕೆ ಮೆರಗು ನೀಡಿದೆ. ನಮ್ಮ ಪೂರ್ವಜರ ಇಂತಹ ಪರಂಪರೆಯನ್ನು ಭವಿಷ್ಯತ್ತಿನ ಪೀಳಿಗೆಯಲ್ಲಿ ರೂಢಿಸಲು ಇಂತಹ ಸಂಸ್ಥೆಗಳ ಪಾತ್ರ ಮಹತ್ತರವಾದದ್ದು. ನಮ್ಮೆಲ್ಲರದ್ದು ತುಳು ಸಂಸ್ಕೃತಿ ಅದೇ ಬದುಕು ಆಗಿದೆ. ತುಳು ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಿದೆ. ಭಾರತವು ಬಹುಭಾಷಿತವಾಗಿದ್ದು ಇಲ್ಲಿ ಹಲವಾರು ಜಾತಿಧರ್ಮಗಳಿವೆ. ಆದರೆ ನಾವು ಸಹೋದರತ್ವದ ಬಾಳನ್ನು ಮೈಗೂಡಿಸಿ ರಂಗಭೂಮಿ ಮೂಲಕ ತುಳುನಾಡನ್ನು ಜಗತ್ತಿಗೆ ಗುರುತಿಸಿದ್ದೇವೆ. ಇದೇ ತುಳುನಾಡಿನ ಜನತೆಯ ವೈಶಿಷ್ಟ್ಯತೆ ಎಂದು ಕರ್ನಾಟಕದ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ತಿಳಿಸಿದರು.

ನವಿಮುಂಬಯಿ ವಾಶಿಯ ಅಲ್ಲಿನ ಸಿಡ್ಕೋ ಪ್ರದರ್ಶನಾಲಯ ಕೇಂದ್ರದ ಸಭಾಗೃಹದಲ್ಲಿ ನವಿಮುಂಬಯಿಯಲ್ಲಿ ರಂಗಭೂಮಿ ಫೈನ್ ಆರ್ಟ್ಸ್‌ನ ರಜತಮಹೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ರಂಗಭೂಮಿಯ ಸ್ಮರಣಸಂಚಿಕೆ ಬಿಡುಗಡೆಗೊಳಿಸಿ ಸಚಿವ ಖಾದರ್ ಅವರು ಮಾತನಾಡಿದರು.

ರಂಗಭೂಮಿ ರಜತ ಮಹೋತ್ಸವ ಸಮಿತಿ ಸಂಚಾಲಕ ಸಂತೋಷ್ ಡಿ.ಶೆಟ್ಟಿ ಸಬಾಧ್ಯಕ್ಷತೆ ವಹಿಸಿದ್ದರು. ವಿದ್ಯಾವಿಹಾರ್‌ನ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ ಪ್ರಧಾನ ಅರ್ಚಕ ಪೆರ್ಣಂಕಿಲ ಶ್ರೀ ಹರಿದಾಸ ಭಟ್ ದೀಪ ಬೆಳಗಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನಗೈದರು.

ಗೌರವ ಅತಿಥಿಗಳಾಗಿ ಆಲ್‌ಕಾರ್ಗೋ ಲಾಜಿಸ್ಟಿಕ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಶಶಿಕಿರಣ್ ಜೆ.ಶೆಟ್ಟಿ, ರಿಲೈಬಲ್ ಬಿಲ್ಡರ್ಸ್‌ನ ಸದಾನಂದ ಶೆಟ್ಟಿ, ಅಭ್ಯುದಯ ಬ್ಯಾಂಕ್‌ನ ಆಡಳಿತ ನಿರ್ದೇಶಕ ಪುನೀತ್‌ಕುಮಾರ್ ಶೆಟ್ಟಿ, ಮಾತೃಭೂಮಿ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಕಾರ್ಯಾಧ್ಯಕ್ಷ ಶಂಕರ್ ಬಿ.ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ್ ಪಾಲೆತ್ತಾಡಿ, ರಾಮರಾಜ ಕ್ಷತ್ರೀಯ ಮಹಿಳಾ ಮಂಡಳಿ ಮುಂಬಯಿ ಅಧ್ಯಕ್ಷ ರಾಜ್‌ಕುಮಾರ್ ಕಾರ್ನಾಡ್, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕಾಧ್ಯಕ್ಷ ಸುರೇಶ್ ಶೆಟ್ಟಿ ಯೆಯ್ಯಿಡಿ ಉಪಸ್ಥಿತರಿದ್ದರು.

ಹರಿದಾಸ ಭಟ್ ಮಾತನಾಡಿ, ಸಂಘ ಸಂಸ್ಥೆಗಳ ಆಚರಣೆ ನಮಗೆ ಖುಷಿ ನೀಡುತ್ತದೆ. ಆದರೆ ಸಾಂಘಿಕತೆಯ ಹಿಂದಿನ ಸಹನೆ, ಸಂಕಷ್ಟ ಗೌಪ್ಯವಾಗಿರುತ್ತದೆ. ಇವತ್ತಿನ ಬೆಳ್ಳಿ ಹಬ್ಬದ ದೀಪ ಪ್ರಜ್ವಲನೆ ಈ ಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ನಾಂದಿಯಾಗಲಿ. ದೇವರ ಸಹಾಯ ದೊರೆತು ರಂಗಭೂಮಿ ಮೂಲಕ ಕಲೆಯು ಬೆಳಗಲಿ ಎಂದರು.

ಸಮಾರಂಭದಲ್ಲಿ ಹಿರಿಯ ಹೊಟೇಲು ಉದ್ಯಮಿ ಶಂಕರ ಶೆಟ್ಟಿ, ಧಾರ್ಮಿಕ ಮುಂದಾಳುಗಳಾದ ಧರ್ಮದರ್ಶಿ ಅಣ್ಣಿ ಸಿ.ಶೆಟ್ಟಿ, ಧರ್ಮದರ್ಶಿ ರಮೇಶ್ ಎಂ.ಪೂಜಾರಿ ಮತ್ತು ರಂಗೂಮಿ ಅಧ್ಯಕ್ಷ ವಿ.ಕೆ ಸುವರ್ಣ ದಂಪತಿಯನ್ನು ಅತಿಥಿಗಳು ಸನ್ಮಾನಿಸಿ ಅಭಿನಂದಿಸಿದರು. ಇಂದಿರಾ ಹರೀಶ್ ಶೆಟ್ಟಿ ಬಳಗ ಪ್ರಾರ್ಥಿಸಿದರು. ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಉಪಾಧ್ಯಕ್ಷ ತಾರನಾಥ ಶೆಟ್ಟಿ ಪುತ್ತೂರು ಪ್ರಸ್ತಾವಿಕ ನುಡಿಗಳನ್ನಾಡಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಪನ್ವೇಲ್, ಪ್ರಭಾಕರ್ ಹೆಗ್ಡೆ, ದೆಪ್ಪಣಿಗುತ್ತು ಚಂದ್ರಹಾಸ ಶೆಟ್ಟಿ, ರಘು ಮೂಲ್ಯ ಸನ್ಮಾನಿತರನ್ನು ಪರಿಚಯಿಸಿದರು. ಸಾಂಸ್ಕೃತಿಕ ಸಮಿತಿ ಮುಖ್ಯಸ್ಥ ಆನಿಲ್‌ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ರಂಗಭೂಮಿಯ ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಗೌರವ ಕೋಶಾಧಿಕಾರಿ ಇಂದಿರಾ ಎಸ್.ಶೆಟ್ಟಿ ಇತರ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ನವಿಮುಂಬಯಿಯ ವಿವಿಧ ಸಂಸ್ಥೆಗಳ ಕಲಾವಿದರು ‘ನೃತ್ಯ ವೈಭವ’ವನ್ನು ಹಾಗೂ ರಂಗಭೂಮಿಯ ಮಹಿಳಾ ಸದಸ್ಯೆಯರು ತಾರಾ ಆರ್.ಬಂಗೇರ ರಚಿಸಿ ನಿರ್ದೇಶಿಸಿದ ‘ಎನ್ನ ತಂಗಡಿನ ಮದಿಮೆ’ ತುಳು ನಾಟಕ ಮತ್ತು ಅಭಿನಯ ಮಂಟಪ ಮುಂಬಯಿ ಕಲಾವಿದರು ಕರುಣಾಕರ ಕಾಪು ನಿರ್ದೇಶನದಲ್ಲಿ ರಮಾನಂದ ನಾಯಕ್ ರಚಿಸಿದ ‘ಒಯಿಕ್‌ಲಾ ದಿನ ಬರೊಡು’ ತುಳು ನಾಟಕ ಪ್ರದರ್ಶಿಸಿದರು.

ರಂಗಭೂಮಿ ಸದಸ್ಯರ ಮಕ್ಕಳು ಅಶೋಕ್ ಕೊಡ್ಯಡ್ಕ ನಿರ್ದೇಶನದಲ್ಲಿ ತುಳು ಸಂಸ್ಕೃತಿ ಬಿಂಬಿಸುವ ‘ತುಳು ಅಪ್ಪೆನ ಪೋರ್ಲು’ ಕಾರ್ಯಕ್ರಮ ನೀಡಿದರು.

ವರದಿ : ರೋನ್ಸ್ ಬಂಟ್ವಾಳ್

share
ವರದಿ : ರೋನ್ಸ್ ಬಂಟ್ವಾಳ್
ವರದಿ : ರೋನ್ಸ್ ಬಂಟ್ವಾಳ್
Next Story
X