ಕಾರ್ಯಕರ್ತರ ಹತ್ಯೆಗೆ ಸರಕಾರದ ಕುಮ್ಮಕ್ಕುಸದಾನಂದಗೌಡ ಸಂಶಯ
ಬೆಂಗಳೂರು, ನ. 6: ರಾಜ್ಯದಲ್ಲಿ ಆರೆಸೆಸ್ಸ್ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ಹತ್ಯೆಗಳಿಗೆ ರಾಜ್ಯ ಸರಕಾರ ಕುಮ್ಮಕ್ಕು ನೀಡುತ್ತಿದೆಯೇ ಎಂಬ ಸಂಶಯ ಸೃಷ್ಟಿಯಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಇಂದಿಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿರುವ ಅನುಮಾನವಿದ್ದು, ಇಂತಹ ಕೃತ್ಯಗಳನ್ನು ಬಿಜೆಪಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದ್ದು, ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕಾದುದು ಅನಿವಾರ್ಯ ಎಂದ ಅವರು, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಧ್ಯ ಪ್ರವೇಶಕ್ಕೆ ಮೇಲ್ಕಂಡ ಪ್ರಕರಣಗಳು ಅವಕಾಶ ಕಲ್ಪಿಸಿವೆ ಎಂದರು.ಪ್ಪು ಸುಲ್ತಾನ್ ಜಯಂತಿ ಹೆಸರಿನಲ್ಲಿ ರಾಜ್ಯ ಸರಕಾರ ಚುನಾವಣಾ ರಾಜಕೀಯ ಲಾಭ ಪಡೆಯಲು ಹುನ್ನಾರ ನಡೆಸಿದ್ದು, ಸರಕಾರವೇ ಸಂಘರ್ಷ ಸೃಷ್ಟಿಸಲು ಮುಂದಾಗಿದೆ ಎಂದ ಅವರು, ಶಾಂತಿ ಕದಡುವ ಯಾವುದೇ ಜಯಂತಿ ಆಚರಣೆ ಸರಿಯಲ್ಲ ಎಂದು ಟೀಕಿಸಿದರು.
ಪೊಲೀಸರ ಮೇಲೆ ಒತ್ತಡ: ಆರೆಸೆಸ್ಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಹಿಂದಿರುವ ಸಂಘಟನೆಗಳ ಹೆಸರನ್ನು ಬಹಿರಂಗಪಡಿಸದಂತೆ ಪೊಲೀಸ್ ಇಲಾಖೆಯ ಮೇಲೆ ರಾಜ್ಯ ಸರಕಾರ ಒತ್ತಡ ಹೇರುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಹೇಳಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯಪಾಲರು ಮತ್ತು ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಬೇಕೆಂದು ಆಗ್ರಹಿಸಿದ ಅವರು, ಕಾನೂನು ಸುವ್ಯವಸ್ಥೆ, ಶಾಂತಿ-ಸೌಹಾರ್ದತೆ ಸಂರಕ್ಷಿಸಲು ಸರಕಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯಪ್ರವಾಸಬೆಂಗಳೂರು, ನ. 6: ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ನ.7) ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ.
ಸಂಜೆಯ ವರೆಗೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಸಿದ್ದರಾಮಯ್ಯ, ಅನಂತರ ಬೆಂಗಳೂರು ಕೇಂದ್ರ ಸ್ಥಾನಕ್ಕೆ ಹಿಂದಿರುಗಲಿದ್ದಾರೆ ಎಂದು ಅಕೃತ ಪ್ರಕಟನೆ ತಿಳಿಸಿದೆ.