Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಕ್‌ಗೆ ಕಾರು ಢಿಕ್ಕಿ: ಅಕ್ಕ-ತಮ್ಮ...

ಬೈಕ್‌ಗೆ ಕಾರು ಢಿಕ್ಕಿ: ಅಕ್ಕ-ತಮ್ಮ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ7 Nov 2016 5:28 PM IST
share
ಬೈಕ್‌ಗೆ ಕಾರು ಢಿಕ್ಕಿ: ಅಕ್ಕ-ತಮ್ಮ ಮೃತ್ಯು

ಉಪ್ಪಿನಂಗಡಿ, ನ.7: ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಸಹೋದರ ಹಾಗೂ ಸಹೋದರಿ ಸಾವನ್ನಪ್ಪಿದ ದಾರುಣ ಘಟನೆ ಬಜತ್ತೂರು ಗ್ರಾಮದ ಬೆದ್ರೋಡಿ ಬಳಿ ಸೋಮವಾರ ನಡೆದಿದೆ.

ಅಪಘಾತದಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ನೀರಪಾದೆ ಜನಾರ್ದನ ಆಚಾರ್ಯ ಎಂಬವರ ಮಗ ಶಿವಾನಂದ (19) ಹಾಗೂ ಆತನ ಅಕ್ಕ ಅಕ್ಷತಾ (25) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಹಾಸನ ಮೂಲದ ಹರ್ಷ (30), ಅವರ ಪತ್ನಿ ಶುಭಶ್ರೀ (25), ತಂದೆ ಶಿವಯ್ಯ (55), ತಾಯಿ ಕಮಲಮ್ಮ (50), ಅಜ್ಜಿ ಸರ್ವಮಂಗಳ (60) ಗಾಯಗೊಂಡಿದ್ದಾರೆ. ಇವರಲ್ಲಿ ಶಿವಯ್ಯ ಹಾಗೂ ಶುಭಶ್ರೀ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ನೀರಪಾದೆಯ ಶಿವಾನಂದ ಅವರು ತನ್ನ ಅಕ್ಕ ಅಕ್ಷತಾ ಅವರೊಂದಿಗೆ ಸೋಮವಾರ ಬೆಳಗ್ಗೆ ಗೋಳಿತೊಟ್ಟುವಿನ ಅನಿಲ ಎಂಬಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬೈಕ್‌ನಲ್ಲಿ ತೆರಳಿದ್ದು, ಬೆಳಗ್ಗೆ ಸುಮಾರು 10:30ರ ಸುಮಾರಿಗೆ ಬೆದ್ರೋಡಿ ಎಂಬಲ್ಲಿ ಇವರ ಬೈಕ್‌ಗೆ ಅತೀ ವೇಗದಿಂದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ವ್ಯಾಗನರ್ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ರಸ್ತೆ ಬದಿಯ ಸುಮಾರು ಆರು ಫೀಟ್‌ನ ತೋಡಿಗೆ ಎಸೆಯಲ್ಪಟ್ಟರೆ, ಕಾರು ಅಲ್ಲೇ ಪಕ್ಕದಲ್ಲಿದ್ದ ತೋಟದಲ್ಲಿ ಅಡಿಮೇಲಾಗಿ ಬಿದ್ದಿದೆ.

ಘಟನೆಯಿಂದ ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಉಳಿದ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ಹರ್ಷ ಹಾಗೂ ಶುಭಶ್ರೀಗೆ ನ. 5ರಂದು ಮದುವೆಯಾಗಿದ್ದು, ಇವರು ಕುಟುಂಬ ಸಮೇತರಾಗಿ ಕಟೀಲು ದೇವಸ್ಥಾನಕ್ಕೆಂದು ತೆರಳುತ್ತಿದ್ದರು. ಬೆದ್ರೋಡಿ ಬಳಿ ಏಕಾಏಕಿ ಕಾರು ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಲ್ಲಿ ಬಂದಿರುವುದೇ ಅಪಘಾತಕ್ಕೆ ಕಾರಣವಾಗಿದೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X