ನ.10: ಟಿಪ್ಪು ಜಯಂತಿ ಕಾರ್ಯಕ್ರಮ
ಉಡುಪಿ, ನ.7: ಉಡುಪಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮೈಸೂರು ಹುಲಿ ಹಝ್ರತ್ ಟಿಪ್ಪುಸುಲ್ತಾನ್‌ರ ಜಯಂತಿ ಆಚರಣಾ ಸಮಾರಂಭವನ್ನು ನ.10ರಂದು ಬೆಳಗ್ಗೆ 10ಗಂಟೆಗೆ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.
Next Story





