Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟಿಪ್ಪು ಜಯಂತಿ ಆಚರಣೆಗೆ ಸೂಕ್ತ ಭದ್ರತೆ:...

ಟಿಪ್ಪು ಜಯಂತಿ ಆಚರಣೆಗೆ ಸೂಕ್ತ ಭದ್ರತೆ: ಡಿಸಿ

ವಾರ್ತಾಭಾರತಿವಾರ್ತಾಭಾರತಿ8 Nov 2016 8:26 PM IST
share
ಟಿಪ್ಪು ಜಯಂತಿ ಆಚರಣೆಗೆ ಸೂಕ್ತ ಭದ್ರತೆ: ಡಿಸಿ

ಮಂಗಳೂರು, ನ. 8: ಸರಕಾರಿ ಆದೇಶದಂತೆ ನವೆಂಬರ್ 10ರಂದು ಬೆಳಗ್ಗೆ 10ಗಂಟೆಗೆ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಯಲಿದ್ದು, ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಷ್ಟಾಚಾರದಂತೆ ಎಲ್ಲ ಗಣ್ಯರನ್ನು ಆಹ್ವಾನಿಸಲಾಗುತ್ತಿದ್ದು, ಸಭಾ ಕಾರ್ಯಕ್ರಮದಲ್ಲಿ ಜಾತ್ಯತೀತ ವ್ಯಕ್ತಿಯಿಂದ ಟಿಪ್ಪು ಕುರಿತು ಉಪನ್ಯಾಸ ನಡೆಯಲಿದೆ. ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿಂದ ನ. 12ರ ಸಂಜೆ 6 ಗಂಟೆಯವರೆಗೆ ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

ನಿಷೇಧಾಜ್ಞೆ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನ ಗುಂಪುಗೂಡಲು, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ ಸಮಾರಂಭ ನಡೆಸಲು ಅವಕಾಶವಿಲ್ಲ. ಧಾರ್ಮಿಕ ಭಾವನೆ ಕೆರಳಿಸುವ ಅಥವಾ ಪ್ರಚೋದನಕಾರಿ ಭಾಷಣ ಮಾಡಲು, ಸ್ಫೋಟಕ, ಶಸಾಸಗಳನ್ನು ಕೊಂಡೊಯ್ಯಲು, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಅನುಮತಿ ಇಲ್ಲದೆ ಪೋಸ್ಟರ್, ಬ್ಯಾನರ್ ಅಳವಡಿಸಲು ಮತ್ತು ಭಿತ್ತಿಪತ್ರ, ಕರಪತ್ರಗಳ ಹಂಚಿಕೆಗೂ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಮಾತನಾಡಿ, ಕಿಡಿಗೇಡಿಗಳು ಮತ್ತು ಸಮಾಜಘಾತಕ ಶಕ್ತಿಗಳನ್ನು ಬಗ್ಗುಬಡಿಯಲು ನಿಷೇಧಾಜ್ಞೆ ಹೇರಲಾಗಿದೆ. ಆದರೆ, ಸಾರ್ವಜನಿಕರಿಗೆ ಇದರಿಂದ ಯಾವುದೇ ಸಮಸ್ಯೆ ಇರುವುದಿಲ್ಲ. ಅವರ ದೈನಂದಿನ ಚಟುವಟಿಕೆಗೆ ಅಡ್ಡಿಯಾಗದು. ಯಾರೂ ಆತಂಕಪಡುವ ಅಗತ್ಯವಿಲ್ಲ. ಶಾಲೆ, ಕಾಲೇಜುಗಳು, ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯಾಚರಿಸಲಿವೆ. ಸಾರ್ವಜನಿಕರಿಗೆ ಎಲ್ಲ ರೀತಿಯ ಭದ್ರತೆ ನೀಡಲು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲ ಕ್ರಮ ಕೈಗೊಂಡಿದ್ದು, ನಗರ ವ್ಯಾಪ್ತಿಯಲ್ಲಿ ಎರಡು ಸಾವಿರ ಮಂದಿ ಪೊಲೀಸರನ್ನು ನೇಮಿಸಲಾಗಿದೆ ಎಂದರು.

ಎಸ್ಪಿ ಭೂಷಣ್ ಗುಲಾಬ್ ರಾವ್ ಬೊರಸೆ ಮಾತನಾಡಿ, ಜಿಲ್ಲಾಮಟ್ಟದ ಟಿಪ್ಪು ಜಯಂತಿ ಬಿಟ್ಟರೆ ಬೇರೆಲ್ಲೂ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಕ್ರಮ ಮಾಡಲು ಅವಕಾಶವಿಲ್ಲ. ಖಾಸಗಿ ಸ್ಥಳ ಅಥವಾ ಸಭಾಂಗಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಟಿಪ್ಪು ಜಯಂತಿ ನಡೆಸಿದರೆ ಅಭ್ಯಂತರ ಇಲ್ಲ ಎಂದು ಅವರು ಹೇಳಿದರು.

ಕೇರಳ ಸೇರಿದಂತೆ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್ ರಚಿಸಲಾಗಿದೆ. ವೀಡಿಯೊ ಕ್ಯಾಮೆರಾಗಳ ಸಹಿತ ಗಸ್ತು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿದ್ದರೂ ಹತ್ತು ನಿಮಿಷದೊಳಗೆ ಸ್ಥಳಕ್ಕೆ ಧಾವಿಸಲು ಬೇಕಾದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ಪುತ್ತೂರು ಉಪವಿಭಾಗಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X