1,500 ಪೊಲೀಸರ ನಿಯೋಜನೆ: ಎಸ್ಪಿ

ಇಂದಿನಿಂದ ಮದ್ಯ ಮಾರಾಟ ನಿಷೇಧ
ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಕೊಡಗು, ನ.8 : ಇದೇ ನ.10ರಂದು ನಡೆಯುವ ಟಿಪ್ಪು ಜಯಂತಿ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗೃತೆ ಹಾಗೂ ಬಂದೋಬಸ್ತ್ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರುಗಳು ಶಾಂತಿ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ತಹಶೀಲ್ದಾರರಿಗೆ ಇರುವ ದಂಡಾಧಿಕಾರಿಯ ಅಧಿಕಾರ ವನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಯವರಿಗೆ ನೀಡಲಾಗಿದೆ. ಕೊಡಗು ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕೆಂದು ಕೋರಿದ ಜಿಲ್ಲಾಧಿಕಾರಿ ಅವರು ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ನ.10ರಂದು ಟಿಪ್ಪುಜಯಂತಿ ಆ ರಣೆ ಮಾಡಲಾಗುತ್ತಿದ್ದು, ಕೊಡಗಿನಾದ್ಯಂತ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಶೇಷ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಯನ್ನು ನಿಯೋಜಿಸಲಾಗಿದೆ. ಪೊಲೀಸ್ ಇಲಾ ಖೆಯ ಉನ್ನತ ಅಧಿಕಾರಿಗಳಾದ ಸುನಿಲ್ ಅಗರ್‌ವಾಲ್, ಐಜಿಪಿ ಬಿ.ಕೆ. ಸಿಂಗ್ ಅವರು ಈಗಾಗಲೇ ಜಿಲ್ಲೆಗೆ ಆಗಮಿಸಿ ಪರಿಸ್ಥಿತಿ ಅವಲೋಕಿ ಸಿದ್ದಾರೆ ಎಂದರು. ರಾತ್ರಿ ವೇಳೆಯಲ್ಲಿ ಗಸ್ತು ವಾಹನ ತಿರುಗಲು ವ್ಯವಸ್ಥೆ ಮಾಡಲಾಗಿದೆ. 20 ದಿನಗಳಿಂದ ಚೆಕ್‌ಪೋಸ್ಟ್‌ಗಲ್ಲಿ ವಾಹನ ತಪಾಸಣೆ ಮಾಡ ಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಸಿ.ಸಿ.ಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
144 ಸೆಕ್ಷನ್ ಜಾರಿಯಲ್ಲಿದ್ದರೂ ಗಲಭೆ ಮಾಡಲು ಮುಂದಾದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ಮಾಡಲಾಗುವುದು. ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಲ್ಲಾ ರೀತಿಯ ರಕ್ಷಣೆ ನೀಡಲಿದೆ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಸಮಾಜದವರೊಂದಿಗೆ ಮನವಿ ಮಾಡಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಉಪಸ್ಥಿತರಿದ್ದರು.
ಮದ್ಯ ಮಾರಾಟ ನಿಷೇಧ ಟಿಪ್ಪು ಜಯಂತಿ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ನ.9 ರ ರಾತ್ರಿ 10 ಗಂಟೆಯಿಂದ ನ.11ಬೆಳಗ್ಗೆ 11ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಮಳಿಗೆಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಆದೇಶ ಹೊರಡಿಸಿದ್ದಾರೆ.
ಟಿಪ್ಪು ಜಯಂತಿ ಹಿನ್ನೆಲೆ ಇಬ್ಬರು ಎಸ್ಪಿ ಗಳು, 8 ಡಿವೈಎಸ್ಪಿಗಳು, 20 ಇನ್‌ಸ್ಪೆಕ್ಟರ್‌ಗಳು, 1,450 ಮುಖ್ಯ ಪೇದೆ ಹಾಗೂ ಪೇದೆ, 500 ಹೋಂ ಗಾರ್ಡ್, 12 ಕೆಎಸ್ಸಾರ್ಪಿ ಡಿ.ಆರ್.ಪಿ, ಸೆಕ್ಟರ್ ಮೊಬೈಲ್ ಅಧಿಕಾರಿಗಳನ್ನು ನಿಯೋಜಿ ಸಲಾಗಿದೆ ಎಂದು ಪಿ. ರಾಜೇಂದ್ರ ಪ್ರಸಾದ್ ಮಾಹಿತಿ ನೀಡಿದರು.





