Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೃತ ನಟರ ಕುಟುಂಬಗಳಿಗೆ ಪರಿಹಾರ ಸರಕಾರದ...

ಮೃತ ನಟರ ಕುಟುಂಬಗಳಿಗೆ ಪರಿಹಾರ ಸರಕಾರದ ಜೊತೆ ಚರ್ಚೆ: ಮಾಜಿ ಸಚಿವ ಅಂಬರೀಶ್

ವಾರ್ತಾಭಾರತಿವಾರ್ತಾಭಾರತಿ8 Nov 2016 11:27 PM IST
share
ಮೃತ ನಟರ ಕುಟುಂಬಗಳಿಗೆ ಪರಿಹಾರ ಸರಕಾರದ ಜೊತೆ ಚರ್ಚೆ: ಮಾಜಿ ಸಚಿವ ಅಂಬರೀಶ್

ಬೆಂಗಳೂರು, ನ.8: ನಟ ದುನಿಯಾ ವಿಜಯ್ ನಟನೆಯ ಮಾಸ್ತಿಗುಡಿ ಸಿನೆಮಾ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ದುರಂತದಲ್ಲಿ ಸಾವನ್ನಪಿದ್ದ ನಟರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಲು ಸರಕಾರದ ಜೊತೆ ಚರ್ಚಿಸುತ್ತೇನೆ ಎಂದು ಹಿರಿಯ ನಟ ಅಂಬರೀಶ್ ಭರವಸೆ ನೀಡಿದ್ದಾರೆ.

 ಮಂಗಳವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವ ನಟರು ಯಾವುದೋ ಒಂದು ಆಸೆ ಇಟ್ಟಕೊಂಡು ಚಿತ್ರರಂಗಕ್ಕೆ ಬಂದಿರುತ್ತಾರೆ. ಅಂಥ ಅಪಘಾತ ಅನಿರೀಕ್ಷಿತ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ದೊರಕಿಸಲು ಸರಕಾರದ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.

                         
 ಹೋದ ಪ್ರಾಣ ಮರಳಿ ಬರೋದಿಲ್ಲ. ಆದರೆ ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳುವ ಮೊದಲು ಮುನ್ನೆಚ್ಚರಿಕೆ ಅಗತ್ಯ. ಇವತ್ತಿನ ತಂತ್ರಜ್ಞಾನ ಸಾಕಷ್ಟು ಬೆಳೆದಿದೆ. ಅದನ್ನು ಬಳಸಿಕೊಳ್ಳಬೇಕಿತ್ತು. ಸಾಹಸ ದೃಶ್ಯ ಮಾಡುವ ಮೊದಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿತ್ತು ಎಂದು ಚಿತ್ರ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈಜು ಬರುವುದಿಲ್ಲ ಮತ್ತು ಆರೋಗ್ಯ ಸರಿಯಿಲ್ಲ ಅಂಥ ಗೊತ್ತಿದ್ದರು ಇಂತಹ ಸಾಹಸಕ್ಕೆ ಇಳಿಯಬಾರದಿತ್ತು. ದುರಂತದ ಸುದ್ದಿ ಗೊತ್ತಾದ ತಕ್ಷಣ ಹೊಗನೇಕಲ್ ನಿಂದ ಮುಳುಗು ತಜ್ಞರನ್ನು ಕರೆಸಲು ನಾನೇ ವ್ಯವಸ್ಥೆ ಮಾಡಿದೆ. ನನಗೂ ತಿಪ್ಪಗೊಂಡನಹಳ್ಳಿ ಜಲಾಶಯದ ಬಳಿ ಹೋಗಬೇಕು ಅನ್ನುವ ಆಸೆ ಇದೆ, ಆದರೆ ಇಂತಹ ಪರಿಸ್ಥಿತಿಯಲ್ಲಿ ಅಲ್ಲಿಗೆ ಹೋದರೆ ಕಾರ್ಯಾಚರಣೆಗೆ ಅಡ್ಡಿ ಆಗಲಿದೆ ಎಂದು ಹೇಳಿದರು.
  
 ಈ ದುರಂತ ಸುದ್ದಿ ಇಡೀ ಚಿತ್ರರಂಗ ಮತ್ತು ಇಡೀ ರಾಜ್ಯದ ಜನತೆಗೆ ಆಘಾತ ತಂದಿದೆ. ಆತುರ ಪಟ್ಟು ನಿರ್ಧಾರ ತೆಗೆದುಕೊಂಡರೆ ಈ ರೀತಿಯಾದ ಅನಾಹುತಗಳು ಸಂಭವಿಸುತ್ತವೆ. ಒಂದೇ ಜಾಗದಲ್ಲಿ ಶವ ಇದೆ. ಇನ್ನು ಯಾಕೆ ಮೃತ ದೇಹಗಳು ಸಿಕ್ಕಿಲ್ಲ ಅನ್ನೋದೆ ಅರ್ಥ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಾಹಸ ನಿರ್ದೇಶಕರ ನಿರ್ಲಕ್ಷ ದ ಪರಮಾವಧಿಗೆ ಇಬ್ಬರು ಉದಯೋನ್ಮುಖ ಕಲಾವಿದರು ಬಲಿಯಾಗಿದ್ದಾರೆ. ಆಕಸ್ಮಿಕವಾಗಿ ಈ ಘಟನೆ ನಡೆದಿಲ್ಲ. ಸಂಪೂರ್ಣ ಚಿತ್ರತಂಡ ನಿರ್ಲಕ್ಷದಿಂದ ನಡೆದಿದೆ ಎಂದು ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಹಸ ನಿರ್ದೇಶಕ ರವಿವರ್ಮಗೆ ಹಾಲಿವುಡ್ ಮಟ್ಟದಲ್ಲಿ ಆಫರ್‌ಗಳಿವೆ. ಆದರೆ ಅಂತ ನಿರ್ದೇಶಕ ಕನಿಷ್ಠ ಮುಜಾಗ್ರತೆಯನ್ನೂ ಇಟ್ಟುಕೊಳ್ಳದೆ ಸಾಹಸಕ್ಕೆ ಇಳಿದದ್ದು ತಪ್ಪು. ನಟ ಅನಿಲ್ಗೆ ಇಬ್ಬರು ಎಳೆಯ ಮಕ್ಕಳಿದ್ದಾರೆ. ಅವರನ್ನ ನೋಡಿದರೆ ಮನ ಕಲುಕುತ್ತದೆ, ನಾಳೆ ಸಂಜೆ ವಾಣಿಜ್ಯ ಮಂಡಳಿಯಲ್ಲಿ ಹಮ್ಮಿಕೊಂಡಿರುವ ಸಭೆ ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮಾಸ್ತಿಗುಡಿ ದುರಂತ ಹಿನ್ನೆಲೆ ನಟರಾದ ಮೃತಪಟ್ಟ ಉದಯ್ ಹಾಗೂ ಅನಿಲ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X