Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್ನಂಜೆ: ಉಡುಪಿ ವಲಯ ಮಟ್ಟದ ಶಾಲಾ...

ಇನ್ನಂಜೆ: ಉಡುಪಿ ವಲಯ ಮಟ್ಟದ ಶಾಲಾ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ8 Nov 2016 11:36 PM IST
share
ಇನ್ನಂಜೆ: ಉಡುಪಿ ವಲಯ ಮಟ್ಟದ ಶಾಲಾ ಕ್ರೀಡಾಕೂಟ

ಶಿರ್ವ, ನ.8: ಕ್ರೀಡೆಗೆ ಎಲ್ಲರ ಪ್ರೋತ್ಸಾಹ ಅತ್ಯಗತ್ಯವಾಗಿದ್ದು, ಆಗ ಮಾತ್ರ ಕ್ರೀಡಾ ಪಟುಗಳು ಕ್ರೀಡೆಯಲ್ಲಿ ಸಾಧನೆಗೈಯ್ಯಲು ಸಾಧ್ಯವಾಗುತ್ತದೆ. ಕ್ರೀಡಾ ಪಟುಗಳಿಗೆ ಉತ್ತೇಜನ ನೀಡಲು ರಾಜ್ಯದಲ್ಲಿ ನೂತನ ಕ್ರೀಡಾನೀತಿಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಸೋಮವಾರ ಇನ್ನಂಜೆ ಎಸ್‌ವಿಎಚ್ ಪ. ಪೂ. ಕಾಲೇಜು ಕ್ರೀಡಾಗಣದಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಹಾಗೂ ಎಸ್‌ವಿಎಚ್ ಪ.ಪೂ. ಕಾಲೇಜು, ಎಸ್‌ವಿಎಚ್ ಕನ್ನಡ ಮಾಧ್ಯಮ ಪ್ರೌಢಶಾಲೆ, ಎಸ್‌ವಿಎಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇನ್ನಂಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಉಡುಪಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇನ್ನಂಜೆ ಎಸ್‌ವಿಎಚ್ ಸಮೂಹ ಶಿಕ್ಷಣ ಸಂಸ್ಥೆಗಳ ಪೋಷಕರಾದ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭತೀರ್ಥ ಶ್ರೆಪಾದರು ಆಶೀರ್ವಚನ ನೀಡಿದರು. ಕ್ರೀಡಾಕೂಟವನ್ನು ಉದ್ಘಾಟಿಸಿದ ನಿಟ್ಟೆ ವಿವಿಯ ಕುಲಪತಿ ಎನ್. ವಿನಯ ಹೆಗ್ಡೆ ಶುಭಾಶಂಸನೆಗೈದರು. ಉಡುಪಿ ಜಿಪಂ ಸದಸ್ಯ ಗೀತಾಂಜಲಿ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

ತಾಪಂ ಸದಸ್ಯ ರಾಜೇಶ್ ಶೆಟ್ಟಿ ಗೌರವ ವಂದನೆ ಸ್ವೀಕರಿಸಿದರು. ರಾಷ್ಟ್ರೀಯ ಕ್ರೀಡಾ ಪುರಸ್ಕೃತ, ಅಂತಾರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ ಕ್ರೀಡಾಜ್ಯೋತಿ ಬೆಳಗಿದರು.

ಇನ್ನಂಜೆ ಗ್ರಾಪಂ ಅಧ್ಯಕ್ಷೆ ರೇಖಾ ಅನಿಲ್, ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಪೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಯುಪಿಸಿಎಲ್‌ನ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಇನ್ನಂಜೆ ಎಸ್‌ವಿಎಚ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರತ್ನ ಕುಮಾರ್, ಸಂಚಾಲಕ ಪಾಡಿಗಾರು ಶ್ರೆನಿವಾಸ ತಂತ್ರಿ, ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷ ಕೆ. ಲೀಲಾಧರ ಶೆಟ್ಟಿ, ಗೌರವಾಧ್ಯಕ್ಷ ಅಶೋಕ್ ಹೆಗ್ಡೆ, ಎಸ್‌ವಿಎಚ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸತೀಶ್ ಎನ್., ಎಸ್‌ವಿಎಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಡಳಿತಾಧಿಕಾರಿ ಪ್ರಭಾವತಿ ಎಸ್. ಅಡಿಗ, ಉಡುಪಿ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶೇಖರ ಗೌಡ ಸಿ. ಪಾಟೀಲ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಎಸ್., ಪ್ರೌಢಶಾಲಾ ಮುಖ್ಯೋಪಾಧ್ಯಾಯ ನಟರಾಜ ಉಪಾಧ್ಯ, ಕುರ್ಕಾಲು ದಿನಕರ ಶೆಟ್ಟಿ, ಸೀತಾರಾಮ ಶೆಟ್ಟಿ ಕಳತ್ತೂರು ಉಪಸ್ಥಿತರಿದ್ದರು.

ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಸ್ವಾಗತಿಸಿದರು. ಎಸ್‌ವಿಎಚ್ ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಎಸ್. ಶೆಟ್ಟಿ ವಂದಿಸಿದರು. ಕುದಿ ವಸಂತ ಶೆಟ್ಟಿ ಮತ್ತು ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X