ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಮೇಲ್ದರ್ಜೆಗೆ: ಡಾ.ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು, ನ. 8: ನಗರದ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನ.14ಕ್ಕೆ ಮೇಲ್ದರ್ಜೆಗೇರಿಸಲ್ಪಟ್ಟ ನೂತನ ಆಸ್ಪತ್ರೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿದ್ದು, ಕಾರ್ಯ ಒತ್ತಡದ ಲ್ಲಿರುವ ಅವರಿನ್ನೂ ಸಮಯ ನೀಡಿಲ್ಲ ಎಂದು ಸ್ಪಷ್ಟಣೆ ನೀಡಿದರು.ಹಾಸಿಗೆಗಳ ಈ ಆಸ್ಪತ್ರೆಯನ್ನು 440ಹಾಸಿಗೆಗಳ ಆಸ್ಪತ್ರೆ ಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು. 30 ಹಾಸಿಗೆಗಳ ತುರ್ತು ನಿಗಾ ಘಟಕವೂ ಸೇರಿದಂತೆ ಆತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಮೇಲ್ದರ್ಜೆಗೇ ರಿಸಲಾಗುತ್ತಿದೆ ಎಂದು ಹೇಳಿದರು.
ನೀಟ್ ತರಬೇತಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್)ಗೆ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಿದ್ದು, ಪ್ರಾಯೋಗಿಕವಾಗಿ ಹೈದರಾ ಬಾದ್ ಕರ್ನಾಟಕ ಭಾಗದಲ್ಲಿ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಪಾಟೀಲ್ ತಿಳಿಸಿದರು.
ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನೀಡುತ್ತಿ ರುವ ನೀಟ್ ತರಬೇತಿ ಯಶಸ್ವಿಯಾದರೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಯೋಜನೆಯನ್ನು ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎಂದ ಅವರು, ಮೂರು ತಿಂಗಳಲ್ಲಿ ಯೋಜನೆ ಜಾರಿಯಾಗಲಿದೆ ಎಂದರು.ಲ್ಲಾ ಕೇಂದ್ರಗಳಲ್ಲಿ ತರಬೇತಿ ಕೇಂದ್ರಗಳನ್ನು ಆರಂಭಿಸಲಾ ಗುವುದು. ಖಾಸಗಿಯವರು ‘ನೀಟ್’ ತರಬೇತಿಗೆ ಹೆಚ್ಚು ಹಣ ಪಡೆಯುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಪಾಟೀಲ್ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು.
ನೀಟ್ ಪರೀಕ್ಷೆ ಬರೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಕಷ್ಟವಾಗುವುದಿಲ್ಲ. ಮೂರು ವರ್ಷದಿಂದ ಅಖಿಲ ಭಾರತ ಮಟ್ಟದಂತೆ ನಾವು ಪರೀಕ್ಷೆಯನ್ನು ನಡೆಸುತ್ತಿದ್ದೇವೆ. ಆದುದರಿಂದ ತೊಂದರೆಯಾಗುವುದಿಲ್ಲ ಎಂದು ಶರಣ ಪ್ರಕಾಶ್ ಪಾಟೀಲ್ ಇದೇ ವೇಳೆ ತಿಳಿಸಿದರು.
ಸರಕಾರಿ ಆಸ್ಪತ್ರೆ ಗಳಲ್ಲಿ ವೈದ್ಯರ ಕೊರತೆ ನೀಗಿಸಲು ಸರಕಾರ ಚಿಂತನೆ ನಡೆಸಿದ್ದು, ಎಂಬಿಬಿಎಸ್‌ಗೆ ಸಮನಾದ ಡಿಎಂಬಿ ಡಿಪ್ಲೋಮೊ ಕೋರ್ಸ್ ಆರಂಭಿಸಲಾಗುವುದು. ಇದಕ್ಕೆ ಭಾರತೀಯ ವೈದ್ಯಕೀಯ ಮಂಡಳಿ(ಎಂಸಿಐ) ಮಾನ್ಯತೆ ನೀಡಿದೆ. ಸರಕಾರಿ ವೈದ್ಯಕೀಯ ಕಾಲೇಜ್‌ಗಳಿಲ್ಲದ ಜಿಲ್ಲೆಗಳಲ್ಲಿ ಈ ಕೋರ್ಸ್ ಆರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಹೊಸದಾಗಿ ಇನ್ನೂ ಐದು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಲೋಧಾ ಕಮಿಟಿ ಅನುಮತಿ ನೀಡಿದೆ. ಎಂಸಿಐ ಅನುಮತಿ ನಿರಾಕರಿಸಿತ್ತು. ಕೊನೆಗೆ ಲೋಧಾ ಕಮಿಟಿ ಅನುಮತಿ ನೀಡಿದೆ. ಕೆಜಿಎ್ನ ಸಂಭ್ರಮ್, ಬೆಂಗಳೂರಿನ ಆಕಾಶ್ ಮತ್ತು ಆಕ್ಸ್‌ರ್ಡ್, ತುಮಕೂರಿನ ಶ್ರೀದೇವಿ ಮತ್ತು ಉಡುಪಿ ಹಣಚೂರು ಕಾಲೇಜುಗಳಿಗೆ ತಲಾ 150 ಸೀಟ್‌ಗೆ ಅನುಮತಿ ನೀಡಲಾಗಿದೆ ಎಂದು ಅವರು ವಿವರ ನೀಡಿದರು.
240 ಹಾಸಿಗೆಗಳ ಈ ಆಸ್ಪತ್ರೆಯನ್ನು 440 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು. 30 ಹಾಸಿಗೆಗಳ ತುರ್ತು ನಿಗಾ ಘಟಕವೂ ಸೇರಿದಂತೆ ಆತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಮೇಲ್ದರ್ಜೆಗೇರಿಸಲಾಗುತ್ತಿದೆ -ಶರಣ ಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ







