ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
.gif)
ಪುತ್ತೂರು, ನ.9: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಜರಗಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿಗಳು ಹಲವು ಪದಕಗಳನ್ನು ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಹಾಸ್ ಪಿ.ಎಂ. 2 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು, ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರೋಯ್‌ಸ್ಟನ್ ರೊಡ್ರಿಗಸ್ 1 ಬೆಳ್ಳಿ ಹಾಗೂ 1 ಕಂಚು, ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಶೆಟ್ಟಿ 2 ಬೆಳ್ಳಿ ಹಾಗೂ 1 ಕಂಚು ಗಳಿಸಿದ್ದಾರೆ. ಸುಹಾಸ್ ಪಿ.ಎಂ. ಈಜು ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದರೆ, ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿದ್ದಾಂತ್ ಎಸ್. ಶೆಟ್ಟಿ ಮತ್ತು ದ್ವಿತೀಯ ವರ್ಷದ ವಿಜ್ಞ್ಞಾನ ವಿಭಾಗದ ವಿದ್ಯಾರ್ಥಿ ದೀಕ್ಷಿತ್ ದಿವಾಕರ್ ವಾಟರ್‌ಪೋಲೊ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರೆಲ್ಲರೂ ಪುತ್ತೂರು ಅಕ್ವಾಟಿಕ್ ಕ್ಲಬ್‌ನ ಸದಸ್ಯರಾಗಿದ್ದು, ಪಾರ್ಥ ವಾರಣಾಸಿ, ವಸಂತಕುಮಾರ್ ಹಾಗೂ ನಿರೂಪ್ ಜಿ.ಆರ್.ರಿಂದ ತರಬೇತಿ ಪಡೆಯುತ್ತಿದ್ದಾರೆ.
ರಾಷ್ಟ್ರಮಟ್ಟದ ಅಕ್ವಾಟಿಕ್ ಚಾಂಪಿಯನ್‌ಶಿಪ್ ನ.24ರಿಂದ 29ರ ತನಕ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಜರಗಲಿದೆ.





