Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರಿಂದ ಛೀಮಾರಿ ಹಾಕಿಕೊಳ್ಳುವಂಥ...

ಜನರಿಂದ ಛೀಮಾರಿ ಹಾಕಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣ: ಹಣಕಾಸು ಆಯೋಗದ ಮುಂದೆ ತಾಪಂ ಸದಸ್ಯರ ಅಳಲು

ವಾರ್ತಾಭಾರತಿವಾರ್ತಾಭಾರತಿ9 Nov 2016 9:06 PM IST
share
ಜನರಿಂದ ಛೀಮಾರಿ ಹಾಕಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣ: ಹಣಕಾಸು ಆಯೋಗದ ಮುಂದೆ ತಾಪಂ ಸದಸ್ಯರ ಅಳಲು

ಬಂಟ್ವಾಳ, ನ.9: ಚುನಾವಣಾ ಸಂದರ್ಭದಲ್ಲಿ ನಾವು ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿರುತ್ತೇವೆ. ಆದರೆ ಅನುದಾನದ ಕೊರತೆಯಿಂದ ಅದನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಪರಿಸ್ಥಿತಿ ಈಗ ಸಮಾರಂಭದ ಅತಿಥಿಗಳಿಗಷ್ಟೆ ಸೀಮಿತ. ಜನರಿಂದ ಛೀಮಾರಿ ಹಾಕಿಕೊಳ್ಳುವಂಥ ಪರಿಸ್ಥಿತಿ ಎದುರಾಗಿದೆ ಎಂದು ಬುಧವಾರ ಬಂಟ್ವಾಳ ತಾಲೂಕು ಪಂಚಾಯತ್‌ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ನಡೆದ ರಾಜ್ಯದ 4ನೆ ಹಣಕಾಸು ಆಯೋಗದ ಪ್ರತಿನಿಧಿಗಳು ಹಾಗೂ ಜನಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ತಾ.ಪಂ. ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡರು.

ನಾಲ್ಕನೆ ಹಣಕಾಸು ಆಯೋಗ ಅಧ್ಯಕ್ಷ ಸಿ.ಜಿ.ಚಿನ್ನಸ್ವಾಮಿ ಅನುಪಸ್ಥಿತಿಯಲ್ಲಿ ಸದಸ್ಯ ಎಚ್.ಡಿ.ಅಮರನಾಥ್ ಸಭೆ ಅಧ್ಯಕ್ಷತೆ ವಹಿಸಿ ಅಹವಾಲು ಆಲಿಸಿದರು. ಸದಸ್ಯರಿಗೆ ತಲಾ 10 ಲಕ್ಷ ರೂ. ಅನುದಾನ ಒದಗಿಸುವುದು ಹಾಗೂ ಎಲ್ಲ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಆಯೋಗಕ್ಕೆ ಮನವಿ ಮಾಡಿದರು.

ತಾಲೂಕಿನಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ಅಂತರ್ಜಲ ವೃದ್ಧಿಗೆ ಅನುದಾನ ಒದಗಿಸಬೇಕು. ಇಲ್ಲಿ ಪ್ರಸ್ತಾಪವಾದ ಸಮಸ್ಯೆಗಳನ್ನು ತಾವು ಕೇವಲ ತಮ್ಮ ಡೈರಿಯಲ್ಲಿ ಮಾತ್ರ ನಮೂದಿಸದೆ ತಾಲೂಕಿನ ಆಭಿವೃದ್ಧಿಯ ದೃಷ್ಟಿಯಿಂದ ಈ ಎಲ್ಲ ಬೇಡಿಕೆಗಳನ್ನು ಉಲ್ಲೇಖಿಸಿ ಸರಕಾರಕ್ಕೆ ಶಿಫಾರಸು ಮಾಡುವಂತೆ ಸದಸ್ಯರು ಆಯೋಗದ ಪ್ರತಿನಿಧಿಗಳ ಗಮನ ಸೆಳೆದರು.

ಈಗ ಸಿಗುವ 2 ಲಕ್ಷ 85 ಸಾವಿರ ಅನುದಾನದಿಂದ ಕ್ಷೇತ್ರದ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಕಾಗುವುದಿಲ್ಲ. ಈಗಾಗಲೇ ತಾ.ಪಂ. ಆಡಳಿತ ಅಧಿಕಾರಕ್ಕೆ ಬಂದು ವರ್ಷ ಸಮೀಪಿಸುತ್ತಿದೆ. ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ ಎಂದು ಸದಸ್ಯರು ಆಯೋಗ ಪ್ರತಿನಿಧಿಗಳ ಮುಂದೆ ಅಹವಾಲು ಮಂಡಿಸಿದರು.

ಆಯೋಗದ ಸದಸ್ಯರಾದ ತಮಗೆ ವೇತನ ಜೊತೆಗೆ ವಿವಿಧ ಭತ್ತೆಗಳನ್ನು ನೀಡಲಾಗುತ್ತಿದೆ. ಆದರೆ ನಾವು ಜನರ ಮಧ್ಯದಲ್ಲೇ ಇದ್ದು ಕೆಲಸ ಮಾಡಬೇಕಾಗಿರುವುದರಿಂದ ನಮಗೆ ಕೇವಲ ಒಂದೂವರೆ ಸಾವಿರ ರೂ.ಗಳಷ್ಟೇ ಗೌರವ ಧನ ನೀಡಲಾಗುತ್ತಿದೆ. ಇದನ್ನೂ ಕನಿಷ್ಠ 5ರಿಂದ 8 ಸಾವಿರದವರೆಗೆ ಏರಿಸಬೇಕು ಎಂದು ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿ ಆಯೋಗದ ಪ್ರತಿನಿಧಿಗಳ ಮುಂದೆ ವಾದಿಸಿದರು.

ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಈ ಬಾರಿ ನವೆಂಬರ್ ತಿಂಗಳಿಂದಲೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಬೋರ್‌ವೆಲ್ ಕೊರೆಯುವಂತಿಲ್ಲ. ಹೀಗಾಗಿ ಅಲ್ಲಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಅಂತರ್ಜಲ ವೃದ್ಧಿಗೆ ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗೆ ಪೂರಕವಾಗಲಿದೆ. ಈ ಹಿನ್ನೆಲೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಶಿಫಾರಸ್ಸು ಮಾಡಬೇಕು ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ಒತ್ತಾಯಿಸಿದರು.

ಬಂಟ್ವಾಳದ ಅಭಿವೃದ್ಧಿಗೆ ಪೂರಕವಾಗಿ ಅನುದಾನವನ್ನು ಬೇಗ ಒದಗಿಸಿಕೊಡಬೇಕೆಂದು ಉಪಾಧ್ಯಕ್ಷ ಅಬ್ಬಾಸ್ ಅಲಿ ತಿಳಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಮಾತನಾಡಿ, ಜನರ ಬೇಡಿಕೆ ಈಡೇರಿಸಲು ತಾಪಂ ಸದಸ್ಯರಿಗೆ ಹೆಚ್ಚುವರಿ ಅನುದಾನ ಒದಗಿಸಬೇಕು ಹಾಗೂ ಎಲ್ಲ ಸದಸ್ಯರ ಗೌರವಧನ ಹೆಚ್ಚಳಮಾಡಬೇಕೆಂದು ತಿಳಿಸಿದರು.

ತಾಲೂಕಿನಲ್ಲಿ ಗಣಿಗಾರಿಕೆ ನಡೆಯುವುದರಿಂದ ಎಲ್ಲ ಪಂಚಾಯತ್‌ಗಳ ರಸ್ತೆಗಳು ಸಂಪೂರ್ಣ ಹದಗೆಡುತ್ತದೆ ಹಾಗೂ ಮಳೆಗಾಲದಲ್ಲಿ ಕಲ್ಲಿನ ಕೋರೆಗಳಲ್ಲಿ ನೀರು ನಿಂತು ದುರ್ಘಟನೆ ನಡೆದರೆ ಸಾರ್ವಜನಿಕರು ಪಂಚಾಯತ್‌ಗೆ ಬಂದು ದೂರು ನೀಡುತ್ತಾರೆ. ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ತುಂಬೆ ಪಿಡಿಒ ಗಮನಸೆಳೆದರು.

4ನೆ ಹಣಕಾಸು ಆಯೋಗದ ಸದಸ್ಯ ಡಾ. ಶಶಿಧರ್, ಸಮಾಲೋಚಕಿ ಸುಪ್ರಸನ್ನಾ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಫರ್ ಶರೀಫ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X