ಹಣ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಗೆ
ಮಂಗಳೂರು, ನ. 9: ಎಟಿಎಂಗಳಿಗೆ ಹಣ ಬಟವಾಡೆ ಮಾಡುವ ಸಂಬಂಧ ಮೋಸ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಕಸ್ಟಡಿಗೆ ಪಡೆದಿದ್ದು, ಆರೋಪಿಯಿಂದ 6,70,000ರೂ. ವಶಕ್ಕೆ ಪಡೆದ ಘಟನೆ ನಡೆದಿದೆ.
ಬ್ಯಾಂಕ್‌ಗಳ ಎಟಿಎಂಗಳಿಗೆ ಹಣ ಬಟವಾಡೆ ಮಾಡುವ ಗುತ್ತಿಗೆ ಪಡೆದಿದ್ದ ಏಜೆನ್ಸಿಯೊಂದರಿಂದ ಸಿಬ್ಬಂದಿ ಹಣವನ್ನು ಎಟಿಎಂಗಳಿಗೆ ಬಟವಾಡೆ ಮಾಡಿ ಪರಾರಿಯಾಗಿ 88 ಲಕ್ಷ ರೂ.ನ್ನು ವಂಚಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಿಕರ್ನಕಟ್ಟೆಯ ನಿವಾಸಿ ಪ್ರಸಾದ್ ಎಂಬಾತನನ್ನು ಈ ಹಿಂದೆಯೇ ವಶಕ್ಕೆ ಪಡೆದಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಕದ್ರಿ ಪೊಲೀಸರು ಆರೋಪಿ ಪ್ರಸಾದ್‌ನನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆತನಿಂದ 6,70,000 ನಗದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಶೈಲೇಶ್ ಎಂಬಾತ ಕೂಡಾ ಶಾಮೀಲಾಗಿದ್ದು, ತಲೆಮರೆಸಿಕೊಂಡಿದ್ದಾನೆ. ಇನ್ನೂ ಕೆಲವು ಆರೋಪಿಗಳಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.