ಆಳ್ವಾಸ್ ಪಪೂ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಪಪೂ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

ಮೂಡುಬಿದಿರೆ, ನ.9: ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ, ದ.ಕ. ಹಾಗೂ ಸೈಂಟ್ ಜೋಸೆಫ್ ಪದವಿಪೂರ್ವ ಕಾಲೇಜು ಬಜ್ಪೆಇವುಗಳ ಸಂಯುಕ್ತಾಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ಬುಧವಾರ ನಡೆದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪಪೂ ಕಾಲೇಜು ಸಮಗ್ರ ಪ್ರಶಸ್ತಿ ಗಳಿಸಿದೆ. ಬಾಲಕರ ವಿಭಾಗದಲ್ಲಿ 19 ಚಿನ್ನ, 16 ಬೆಳ್ಳಿ ಮತ್ತು 1 ಕಂಚಿನ ಪದಕ ಮತ್ತು ಬಾಲಕಿಯರ ವಿಭಾಗದಲ್ಲಿ 16 ಚಿನ್ನ, 14 ಬೆಳ್ಳಿ ಪದಕಗಳನ್ನು ಪಡೆದು ಆಳ್ವಾಸ್ ಪಪೂ ಕಾಲೇಜು ಪ್ರಶಸ್ತಿಯನ್ನು ಪಡೆಯಿತು. ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ನ.16, 17ರಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
Next Story





