Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ...

ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಪ್ರತಿಭಟನೆ

ಗುಂಡಿನ ಹಾರಾಟದಲ್ಲಿ ಐವರು ಗಾಯ, ಓರ್ವ ಗಂಭೀರ

ವಾರ್ತಾಭಾರತಿವಾರ್ತಾಭಾರತಿ10 Nov 2016 11:34 AM IST
share
ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಪ್ರತಿಭಟನೆ

ಚಿಕಾಗೊ/ನ್ಯೂಯಾರ್ಕ್, ನ.10: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ವಿರುದ್ಧ ಅನಿರೀಕ್ಷಿತವಾಗಿ ಜಯ ಸಾಧಿಸಿ ನೂತನ ಅಧ್ಯಕ್ಷರಾಗಲು ಸಜ್ಜಾಗುತ್ತಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡೊ ಟ್ರಂಪ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ.
 ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ಬುಧವಾರ ರಾತ್ರಿ ಸಿಯಾಟಲ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆಯೇ ಅಪಚಿತನೊಬ್ಬ ಗುಂಡಿನ ಹಾರಾಟ ನಡೆಸಿದ್ದು, ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದರೆ, ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
ಗುಂಡು ಹಾರಾಟಕ್ಕೂ, ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ವೈಯಕ್ತಿಕ ಜಗಳದಿಂದಾಗಿ ಗುಂಡು ಹಾರಾಟ ನಡೆದಿದೆ. ಓರ್ವ ವ್ಯಕ್ತಿ ಜನರ ಗುಂಪಿನಿಂದ ಹೊರಬಂದು ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಸಿಯಾಟಲ್ ಪೊಲೀಸರು ತಿಳಿಸಿದ್ದಾರೆ.

ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಪ್ರತಿಭಟಿಸಿ ಅಮೆರಿಕದ ನಗರಗಳೆಲ್ಲೆಡೆ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ವಲಸಿಗರು, ಮುಸ್ಲಿಮರು ಹಾಗೂ ಇತರರ ಬಗ್ಗೆ ಟ್ರಂಪ್ ಚುನಾವಣಾ ಪ್ರಚಾರದ ವೇಳೆ ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಚಿಕಾಗೊದಲ್ಲಿ ಟ್ರಂಪ್ ಇಂಟರ್‌ನ್ಯಾಶನಲ್ ಹೊಟೇಲ್ ಹಾಗೂ ಟವರ್‌ನ ಹೊರಗೆ ಜಮಾಯಿಸಿದ್ದ 1,800 ಜನರು ‘‘ನೋ ಟ್ರಂಪ್!ಕೆಕೆಕೆ! ನೋ ರೇಸಿಸ್ಟ್ ಯುಎಸ್‌ಎ’’ ಎಂದು ಘೋಷಣೆ ಕೂಗಿದರು.

ಚಿಕಾಗೊ ಪೊಲೀಸರು ಈ ಪ್ರದೇಶದ ಮಾರ್ಗವನ್ನು ಬಂದ್ ಮಾಡಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದರು. ಬಂಧಿಸಲ್ಪಟ್ಟ ಅಥವಾ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿಲ್ಲ. ಫಿಲಡೆಲ್ಫಿಯಾ, ಬೋಸ್ಟನ್ ಹಾಗೂ ಪೋರ್ಟ್‌ಲ್ಯಾಂಡ್‌ನಲ್ಲಿ ಬುಧವಾರ ಸಂಜೆ ನೂರಾರು ಜನರು ಸೇರಿದ್ದರು. ಸ್ಯಾನ್ ಫ್ರಾನ್ಸಿಸ್ಕೊ, ಲಾಸ್ ಏಂಜಲಿಸ್ ಹಾಗೂ ಒಕ್ಲಾಂಡ್, ಕ್ಯಾಲಿಫೋರ್ನಿಯದಲ್ಲಿ ಟ್ರಂಪ್ ವಿರುದ್ಧ ರ್ಯಾಲಿ ನಡೆಸಲು ಆಯೋಜಕರು ನಿರ್ಧರಿಸಿದ್ದಾರೆ. ಟೆಕ್ಸಸ್ ರಾಜಧಾನಿ ಆಸ್ಟಿನ್‌ನಲ್ಲಿ ಸುಮಾರು 400 ಜನರು ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X