ಕೇಂದ್ರ ಸರಕಾರ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿರುವ ನಿರ್ಧಾರದಿಂದ ದೇಶ ತಲ್ಲಣಗೊಂಡಿದ್ದು, ಶ್ರೀಸಾಮಾನ್ಯನ ದೈನಂದಿನ ಬದುಕು ಸಂಪೂರ್ಣ ಅಸ್ತವ್ಯವಸ್ತಗೊಂಡಿದೆ. 500 ಹಾಗೂ 1 ಸಾವಿರ ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಬದಲಾಯಿಸಿಕೊಳ್ಳಲು ಬ್ಯಾಂಕ್‌ಗಳಲ್ಲಿ ಜನರು ಜಮಾಯಿಸಿರುವ ದೃಶ್ಯ ಸಾಮಾನ್ಯವಾಗಿತ್ತು.