ಕೊಳೆಗೇರಿ ನಿವಾಸಿಗಳಿಗೆ ಒಂದು ಲಕ್ಷಮನೆ ನಿರ್ಮಾಣ ಗುರಿ: ಆರ್.ವಿ.ದೇವರಾಜ್ ಭರವಸೆ
ಬೆಂಗಳೂರು, ನ.11:ಮುಂದಿನ ಎರಡು ವರ್ಷಗಳ ಅವಯಲ್ಲಿ ಕೊಳಗೇರಿ ನಿವಾಸಿ ಗಳಿಗೆ ಒಂದು ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ವಿ.ದೇವರಾಜ್ ಭರವಸೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿರುವ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಬಳಿಕ ಮಾತನಾಡಿದ ಅವರು, ನನ್ನ ಅಕಾರಾವಯಲ್ಲಿ ಕೊಳಗೇರಿ ನಿವಾಸಿಗಳಿಗೆ ಇಂದಿರಾ ಗಾಂ ಅವಾಸ್ ಯೋಜನೆ ಅಡಿ ಒಂದು ಲಕ್ಷ ಮನೆಗಳನ್ನು ಕೊಳಗೇರಿ ಮನೆಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಕೊಳೆಗೇರಿ ಅಭಿವೃದ್ಧಿಗಾಗಿ ಪ್ರತ್ಯೇಕ ಮಂಡಳಿಯನ್ನು ಸ್ಥಾಪಿಸಿದರು. ಅವರ ಕಾಲದಲ್ಲಿ ರಾಜ್ಯದ ಕೊಳೆಗೇರಿ ನಿವಾಸಿಗಳಿಗೆ 18 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದರು. ಇವರ ಹಾದಿಯಲ್ಲಿ ಈಗಿನ ಮುಖ್ಯಮಂತ್ರಿಗಳು ಸಮಗ್ರ ಕೊಳೆಗೇರಿ ಅಭಿವೃದ್ಧಿಗೆ ಮನಸ್ಸು ಮಾಡಿದ್ದಾರೆ. ನನ್ನ ಮೇಲೆ ಭರವಸೆಯಿಟ್ಟು ಕೊಳಗೇರಿ ಮಂಡಳಿಗೆ ಅಧ್ಯಕ್ಷನಾಗಿ ನೇಮಕ ಮಾಡಿದ್ದಾರೆ. ಕೊಳಗೇರಿ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ೊಳೆಗೇರಿ ಅಭಿವೃದ್ಧಿಗಳಿಗಾಗಿ ಪ್ರತ್ಯೇಕ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ. ರಾಜ್ಯಾದ್ಯಂತ ಕೊಳೆಗೇರಿ ನಿವಾಸಿಗಳಿಗೆ ಮನೆಗಳನ್ನು ನಿರ್ಮಾಣ ಮಾಡಲು ಅಗತ್ಯ ಜಾಗಕ್ಕಾಗಿ ಪರಿಶೀಲನೆ ನಡೆಸುವಂತೆ ಕೂಡಲೆ ಜಿಲ್ಲಾಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದರು.ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ಗುಂಡೂರಾವ್, ಯುವ ಕಾಂಗ್ರೆಸ್ ಅಧ್ಯಕ್ಷ ರಿಝ್ವೆನ್ ಹರ್ಷದ್, ಶಾಸಕ ಬೈರತಿ ಬಸವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.