Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿಯ ಐತಿಹಾಸಿಕ ಆದೇಶ ಅನುಷ್ಠಾನಕ್ಕೆ...

ಮೋದಿಯ ಐತಿಹಾಸಿಕ ಆದೇಶ ಅನುಷ್ಠಾನಕ್ಕೆ ಕೊಡುಗೆ ನೀಡಿದ ಮೈಸೂರು ವಿಮಾನ ನಿಲ್ದಾಣ !

ವಾರ್ತಾಭಾರತಿವಾರ್ತಾಭಾರತಿ12 Nov 2016 4:52 PM IST
share
ಮೋದಿಯ ಐತಿಹಾಸಿಕ ಆದೇಶ ಅನುಷ್ಠಾನಕ್ಕೆ ಕೊಡುಗೆ ನೀಡಿದ ಮೈಸೂರು ವಿಮಾನ ನಿಲ್ದಾಣ !

ಬೆಂಗಳೂರು,ನ. 12 : ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಆದೇಶ ಅನುಷ್ಠಾನಕ್ಕೆ ಕರ್ಣಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಕೊಡುಗೆ ಅಪಾರ. ಅದರಲ್ಲೂ ಮೈಸೂರು ಸರಕಾರಿ ನೋಟು ಮುದ್ರಣಾಲಯದಿಂದ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ನವದೆಹಲಿಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕಿಗೆ ಸಾಗಿಸಲು ಚಾರ್ಟರ್ಡ್ ವಿಮಾನ, ಮೈಸೂರು ವಿಮಾನ ನಿಲ್ದಾಣದಿಂದ ಕಳೆದ ಆರು ತಿಂಗಳಿಂದ ಕಾರ್ಯ ನಿರ್ವಹಿಸುತ್ತಿತ್ತು. ಇದರಿಂದಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಮಾಡಿದ ವೆಚ್ಚ ವ್ಯರ್ಥವಲ್ಲ ಎನ್ನುವುದು ಇದೀಗ ಸಾಬೀತಾಗಿದೆ.

ಕಳೆದ ಕೆಲ ವರ್ಷಗಳಿಂದ ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣ ಅವಕೃಪೆಗೆ ಪಾತ್ರವಾಗಿತ್ತು. ಏಕೈಕ ರನ್‌ವೇ ಹೊಂದಿರುವ ಈ ಪುಟ್ಟ ವಿಮಾನ ನಿಲ್ದಾಣ ಇದೀಗ ಇಡೀ ದೇಶದಲ್ಲೇ ಕಂಪನ ಮೂಡಿಸಿರುವ ಐತಿಹಾಸಿಕ ನಿರ್ಧಾರ ಅನುಷ್ಠಾನಕ್ಕೆ ಗಣನೀಯ ಕೊಡುಗೆ ನೀಡಿದೆ.

ಈ ಬಗ್ಗೆ ತೀರಾ ಗೌಪ್ಯ ಕಾಪಾಡಿಕೊಂಡು ಬರಲಾಗುತ್ತಿತ್ತು. ಆದರೆ ಇದರ ಮಧ್ಯೆ ಖಾಸಗಿ ಚಾರ್ಟರ್ಡ್ ವಿಮಾನವೊಂದು ಸದ್ದುಗದ್ದಲವಿಲ್ಲದೆ ತನ್ನ ಕಾರ್ಯವನ್ನು ನಿರ್ವಹಿಸುತ್ತಲೇ ಇತ್ತು. ಈ ವಿಮಾನ ಮೈಸೂರಿನಿಂದ ಬೆಂಗಳೂರು ಸೇರಿದಂತೆ ಆರ್‌ಬಿಐ ಕಚೇರಿ ಇರುವ ಹಲವೆಡೆಗಳಿಗೆ ಸಂಚಾರ ಕೈಗೊಂಡಿದೆ.

ಮೈಸೂರಿನ ನೋಟು ಮುದ್ರಣಾಲಯದಲ್ಲಿ ಮುದ್ರಣವಾದ 2000 ರೂಪಾಯಿ ನೋಟುಗಳನ್ನು ವಿವಿಧ ಆರ್‌ಬಿಐ ಕಚೇರಿಗಳಿಗೆ ರವಾನಿಸುವಲ್ಲಿ ಈ ವಿಮಾನ ನಿಲ್ದಾಣ ಗಣನೀಯ ಕೊಡುಗೆ ನೀಡಿದೆ. ಇದು 500 ರೂಪಾಯಿ ಹಾಗೂ 1000 ರೂಪಾಯಿ ನೋಟುಗಳ ಚಲಾವಣೆ ರದ್ದು ಮಾಡುವ ನಿರ್ಧಾರಕ್ಕೆ ವೇದಿಕೆ ಒದಗಿಸಿತ್ತು.

ಮೈಸೂರಿನಲ್ಲಿರುವ ನೋಟು ಮುದ್ರಣಾಲಯ ಅಧಿಕ ಭದ್ರತೆಯ ವಲಯವಾಗಿದ್ದು, ಇಲ್ಲಿಗೆ ಪ್ರತ್ಯೇಕವಾದ ರೈಲು ಹಳಿ ವ್ಯವಸ್ಥೆ ಮತ್ತು ನೀರು ಸರಬರಾಜು ವ್ಯವಸ್ಥೆ ಇದೆ. ಎರಡು ದಶಕದಷ್ಟು ಹಳೆಯ ಈ ಮುದ್ರಣಾಲಯ ವಿಶ್ವಮಟ್ಟದಲ್ಲೇ ಅತ್ಯಂತ ಶ್ರೇಷ್ಠ ನೋಟು ಮುದ್ರಣಾಲಯಗಳಲ್ಲೊಂದು. ಈ ಮುದ್ರಣಾಲಯದಲ್ಲಿ 2000 ರೂಪಾಯಿಗಳ ನೋಟು ಮುದ್ರಣ ಕಾರ್ಯ ಆರು ತಿಂಗಳ ಹಿಂದೆ ಆರಂಭವಾಗಿತ್ತು.

ಹೀಗೆ ಮುದ್ರಣವಾದ ನೋಟುಗಳನ್ನು 20 ಲಕ್ಷದಿಂದ ಹಿಡಿದು 2 ಕೋಟಿ ವರೆಗೆ ಆಯಾ ಬ್ಯಾಂಕು ಶಾಖೆಗಳ ಗಾತ್ರವನ್ನು ಹೊಂದಿಕೊಂಡು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X