ಶೀಲಾ ದೀಕ್ಷಿತ್ ಅಳಿಯನ ಬಂಧನ
ಕೌಟುಂಬಿಕ ದೌರ್ಜನ್ಯ ಪ್ರಕರಣ

ಹೊಸದಿಲ್ಲಿ, ನ.13: ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ರ ಅಳಿಯ ಇಮ್ರಾನ್ ಸಯ್ಯದ್‌ರನ್ನು ಬೆಂಗಳೂರಿನ ಹಲಸೂರಿನಲ್ಲಿ ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶೀಲಾ ದೀಕ್ಷಿತ್‌ರ ಪುತ್ರಿ ಲತಿಕಾ ಸೈಯದ್ ನೀಡಿದ್ದ ದೂರಿನ ಆಧಾರದಲ್ಲಿ ಬೆಂಗಳೂರಿಗೆ ತೆರಳಿದ್ದ ದಿಲ್ಲಿ ಪೊಲೀಸರು ಎರಡು ದಿನಗಳ ಹಿಂದೆ ಇಮ್ರಾನ್‌ರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆರೋಪಿ ಇಮ್ರಾನ್ ಹಾಗೂ ದೀಕ್ಷಿತ್‌ರ ಪುತ್ರಿ ಲತಿಕಾ ಕಳೆದ ಕೆಲವು ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಮ್ರಾನ್ ಕಳೆದ 10 ತಿಂಗಳಿಂದ ಲತಿಕಾರಿಂದ ದೂರವಾಗಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಇಮ್ರಾನ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
Next Story





