ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪವಿಲ್ಲ: ಖಾದರ್

ಮಂಗಳೂರು, ನ.13: ಯಾವುದೇ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆಯಲ್ಲಿ ತನ್ನ ಹಸ್ತಕ್ಷೇಪವಿಲ್ಲ. ಪ್ರಕರಣದ ತನಿಖೆ ನಡೆಸಲು ಇಲಾಖೆ ಸರ್ವ ಸ್ವತಂತ್ರವಾಗಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.
ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ ಘಟನೆಯಲ್ಲಿ ಸಚಿವ ಖಾದರ್‌ರ ಪಾತ್ರವಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದ ಹಿನ್ನೆಲೆಯಲ್ಲಿ ರವಿವಾರ ನಗರದಲ್ಲಿ ಮಾಧ್ಯಮ ವರದಿಗಾರರೊಂದಿಗೆ ಅವರು ಮಾತನಾಡಿದರು.
ಮೋನಪ್ಪ ಭಂಡಾರಿಯ ಆರೋಪದಲ್ಲಿ ಹುರುಳಿಲ್ಲ. ಅಹಿತಕರ ಘಟನೆ ಯಾರೇ ಮಾಡಿದರೂ ಖಂಡನೀಯ. ಶಾಂತಿಯನ್ನು ಬಯಸುವ ಯಾವನೇ ನಾಗರಿಕ ಇಂತಹ ಕೃತ್ಯದಲ್ಲಿ ಪಾಲ್ಗೊಳ್ಳಲಾರ. ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಅಹಿತಕರ ಘಟನೆಯ ಬಗ್ಗೆ ಸೂಕ್ತ ತನಿಖೆ ಕ್ರಮ ಜರಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಖಾದರ್ ತಿಳಿಸಿದರು.
Next Story





