1000, 500 ರೂ. ಮುಖಬೆಲೆಯ 60 ಲಕ್ಷ ರೂ. ಸಾಗಾಟ ಪತ್ತೆ: ಇಬ್ಬರ ಬಂಧನ

ಹುಬ್ಬಳ್ಳಿ, ನ.14: ಹೊಸ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳಲೆಂದು 60 ಲಕ್ಷ ರೂ. ವೌಲ್ಯದ 500 ಹಾಗೂ 1000 ರೂ.ಗಳ ನೋಟುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ ಮೂರ್ತಿ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಅಮಾನ್ಯಗೊಂಡಿರುವ 500 ಹಾಗೂ 1000 ರೂ. ಮುಖಬೆಲೆಯ ಸುಮಾರು 60 ಲಕ್ಷ ನಗದನ್ನು ವಿನಿಮಯ ಮಾಡಿಕೊಳ್ಳಲೆಂದು ಸಾಗಿಸುತ್ತಿದ್ದರೆನ್ನಲಾಗಿದೆ. ಈ ನೋಟುಗಳನ್ನು ಆರೋಪಿಗಳು ಹೊಸಪೇಟೆಯಿಂದ ವಿನಿಮಯಕ್ಕಾಗಿ ಕೇಶ್ವಾಪುರದ ಹರಿಹಂತ ನಗರಕ್ಕೆ ತಂದಿದ್ದಾರೆ. ಆದರೆ ವಿನಿಮಯ ಸಾಧ್ಯವಾಗದ ಹಿನ್ನೆಲೆಯಲ್ಲಿ ಅವುಗಳನ್ನು ಮತ್ತೆ ಹೊಸಪೇಟೆಗೆ ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಪೊಲೀಸರು ಹಣ ಸಾಗಾಟದ ವಾಹನವನ್ನು ತಡೆದು ಪರಿಶೀಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.
Next Story





