ಮುಕ್ಕ: ಶ್ರೀನಿವಾಸ್ ಸ್ಕೂಲ್ ಆಫ್ ಇಂಜಿನಿಯರಿಂಗ್‌ನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಸುರತ್ಕಲ್, ನ.14: ಮುಕ್ಕದ ಶ್ರೀನಿವಾಸ್ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ಕಂಪ್ಯೂಟರ್ ಸಯನ್ಸ್ ವಿಭಾಗದ ವಿದ್ಯಾರ್ಥಿ ಸಂಘದ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಝಿಯಾಗೋ ಸ್ಟುಡಿಯೋಸ್‌ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಇದೇ ಸಂದರ್ಭ ಅವರು ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕಾಲೇಜು ವತಿಯಿಂದ ಗೌರವಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಪ್ರಕಾಶ್ ಬಿ. ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗ್ಡೆ, ಕಂಪ್ಯೂಟರ್ ಸಯನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಕಿಶೋರ್ ಬಾಗ್ಲೊಡಿ ಹಾಗೂ ಸಂಘದ ಶಿಕ್ಷಕಿ ಸಲಹೆಗಾರ್ತಿ ರಶ್ಮಿ ಪಿ.ಸಿ. ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ವಿಪಿನ್ ಸ್ವಾಗತಿಸಿ, ಪದಾಧಿಕಾರಿಗಳಿಗೆ ಪ್ರಮಾಣವಚನ ಭೋದಿಸಿದರು. ಕಾರ್ಯದರ್ಶಿ ಸುಜನ ಸಂಘದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಖಜಾಂಚಿ ಶಾನೆಲ್ ಪಿಂಟೊ ವಂದಿಸಿದರು. ಜಾಹ್ನವಿ ಮತ್ತು ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಅಭಿಜಿತ್ ಶೆಟ್ಟಿ ‘ವರ್ಚುವಲ್ ರಿಯಾಲಿಟಿ’ ಬಗ್ಗೆ ತಾಂತ್ರಿಕ ಉಪನ್ಯಾಸ ನೀಡಿದರು.





