Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮುಖ್ಯವಾಹಿನಿಗೆ ನಾಲ್ವರು...

ಚಿಕ್ಕಮಗಳೂರು: ಮುಖ್ಯವಾಹಿನಿಗೆ ನಾಲ್ವರು ನಕ್ಸಲರು

ವಾರ್ತಾಭಾರತಿವಾರ್ತಾಭಾರತಿ14 Nov 2016 3:26 PM IST
share
ಚಿಕ್ಕಮಗಳೂರು: ಮುಖ್ಯವಾಹಿನಿಗೆ ನಾಲ್ವರು ನಕ್ಸಲರು

ಚಿಕ್ಕಮಗಳೂರು, ನ.14: ಕಳೆದ ಹದಿನೈದು ವರ್ಷಗಳಿಂದ ಕಾಡಿನಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದರು ಎನ್ನಲಾದ ಎ ಮತ್ತು ಬಿ ಕೆಟಗರಿಯ ನಾಲ್ವರು ನಕ್ಸಲರು ಸೋಮವಾರ ಜಿಲ್ಲಾಡಳಿತದ ಎದುರು ಶರಣಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ.

ಶಾಂತಿಗಾಗಿ ನಾಗರಿಕ ಹಿತರಕ್ಷಣಾ ವೇದಿಕೆಯ ಮೂಲಕ ನಕ್ಸಲರೆಂದು ಶಂಕಿಸಲಾಗಿರುವ ಈ ನಾಲ್ವರನ್ನು ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಮಾಜಿ ಶಾಸಕರೂ ಆದ ಹೈಕೋರ್ಟ್ ವಕೀಲ ಎ.ಕೆ.ಸುಬ್ಬಯ್ಯ ಚಿಕ್ಕಮಗಳೂರು ಜಿಲ್ಲಾ ನಕ್ಸಲ್ ಶರಣಾಗತಿ ವೇದಿಕೆ ಎದುರು ಹಾಜರುಪಡಿಸಿದರು. ನಕ್ಸಲ್ ಪ್ಯಾಕೇಜ್‌ನಡಿ ಶರಣಾಗಿರುವ ನಕ್ಸಲರು ಯಾಮದೇ ಬೇಡಿಕೆಗಳನ್ನು ಸರಕಾರದ ಮುಂದಿಡದೆ ಭವಿಷ್ಯದಲ್ಲಿ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನ ನೀಲಗುಳಿ ಪದ್ಮನಾಭ, ರಾಜಚೂರು ಜಿಲ್ಲೆಯ ರಿಝ್ವನ ಬೇಗಂ, ರಾಜು ಅಲಿಯಾಸ್ ಪರಶುರಾಮ್ ಹಾಗೂ ಭಾರತಿ ಅಲಿಯಾಸ್ ದೀಪಾ ಸಮಾಜದ ಮುಖ್ಯವಾಹಿನಿಗೆ ಬಂದರು. ಇತ್ತೀಚೆಗೆ ಮಲೆನಾಡಿನಲ್ಲಿ ನಕ್ಸಲರ ಸಂಖ್ಯೆ ಕಡಿಮೆಯಾಗಿತ್ತು. ಈ ಮಾತಿಗೆ ಇಂಬು ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಎದುರು ಇಂದು ಈ ನಾಲ್ವರು ಶರಣಾದರು. ಈ ಶರಣಾಗತಿಯ ಹಿಂದೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ, ಪತ್ರಕರ್ತೆ ಗೌರಿ ಲಂಕೇಶ್, ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ಸೇರಿದಂತೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯ ಬಳಿಕ ನಕ್ಸಲ್ ಶರಣಾಗತಿ ಹಾಗೂ ಪುನರ್‌ವಸತಿ ವೇದಿಕೆ ಮೂಲಕ ಶರಣಾಗತಿ ನಡೆದಿದೆ.

ರಾಜ್ಯದ ವಿವಿದ ಪೊಲೀಸ್ ಠಾಣೆಗಳಲ್ಲಿ ನೀಲಗುಳಿ ಪದ್ಮನಾಭನ ವಿರುದ್ಧ ಕೊಲೆ, ಕೊಲೆ ಯತ್ನ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ, ಕರಪತ್ರ ಹಂಚಿಕೆ ಸಹಿತ ವಿವಿಧ ಕಲಂಗಳಡಿ ಒಟ್ಟು 19 ಪ್ರಕರಣಗಳು ದಾಖಲಾಗಿವೆ. ರಿಝ್ವಾನಾ ಬೇಗಂ ವಿರುದ್ಧ ಪೊಲೀಸರ ಮೇಲೆ ಗುಂಡೆಸೆತ, ಕರಪತ್ರ ಹಂಚಿಕೆ ಸಹಿತ ಶೃಂಗೇರಿ ಮತ್ತು ರಾಯಚೂರು ಪೊಲೀಸ್ ಠಾಣೆಗಳಲ್ಲಿ ತಲಾ 1 ಪ್ರಕರಣ ದಾಖಲಾಗಿದೆ. ಉಳಿದಂತೆ ಶರಣಾಗತಿಯಾದ ರಾಜು ಅಲಿಯಾಸ್ ಪರುಶುರಾಮ್ ಮತ್ತು ಭಾರತಿ ಅಲಿಯಾಸ್ ದೀಪಾ ಮೇಲೆ ಯಾವುದೇ ಪ್ರಕರಣಗಳು ದಾಖಲಾಗದಿರುವುದು ಕಂಡು ಬಂದಿದೆ.

ಶರಣಾಗತಿಯಾದ ನಾಲ್ವರು ಶಂಕಿತ ನಕ್ಸಲರಲ್ಲಿ ನೀಲಗುಳಿ ಪದ್ಮನಾಭ ಮತ್ತು ರಿಝ್ವನಾ ಬೇಗಂರನ್ನು ವಾರೆಂಟ್ ಇರುವ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡರು. ಇನ್ನುಳಿದ ರಾಜು ಮತ್ತು ಭಾರತಿ ಮೇಲೆ ಯಾವುದೇ ಪ್ರಕರಣಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸದೇ ತನಿಖೆಗೆ ಕರೆದಾಗ ಬಂದು ಸಹಕರಿಸುವಂತೆ ಸೂಚನೆ ನೀಡಿ ಬಿಟ್ಟು ಬಿಡಲಾಗಿದೆ. ಈ ಹಿಂದೆ ನೀಲಗುಳಿ ಪದ್ಮನಾಭ ಪತ್ತೆ ಹಚ್ಚಿ ಕೊಟ್ಟವರಿಗೆ 5 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದರೆ, ಉಳಿದವರ ಹೆಸರಿಗೆ ತಲಾ 1 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಲಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

2015ರ ಡಿಸೆಂಬರ್ 8ರಂದು ನೂರ್ ಜುಲ್ಪಿಕರ್ ಅಲಿಯಾಸ್ ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್ ಜಿಲ್ಲಾಡಳಿತದ ಎದುರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದರು. ಇವರ ಬೆನ್ನಲ್ಲಿಯೇ ಈ ನಾಲ್ವರು ಶಂಕಿತ ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ನಕ್ಸಲರು ಕಾಡಿನ ಹೋರಾಟದಿಂದ ವಿಮುಖರಾಗಿ ನಾಡಿನ ಹೋರಾಟದತ್ತ ಧುಮುಕಲಿದ್ದಾರೆ ಎಂದು ಕಾದು ನೋಡಬೇಕಾಗಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿ ಸತ್ಯವತಿ, ಎಸ್ಪಿ ಕೆ.ಅಣ್ಣಾಮಲೈ ಮತ್ತು ಜಿಪಂ ಸಿಇಒ ರಾಗಪ್ರಿಯ ಇದ್ದರು.

ನಾನು ಆಯುಧ ಹಿಡಿದು ಹೋರಾಟಕ್ಕೆ ಬಂದಿಲ್ಲ. ಸಮಾಜ ನನಗೆ ಮುಂದಿನ ದಿನಗಳಲ್ಲಿ ಸಮಾಜದೊಂದಿಗೆ ರೈತರು, ಕಾರ್ಮಿಕರು, ದಲಿತರು ಹಾಗೂ ಮಹಿಳೆಯರ ಪರವಾಗಿ ಹೋರಾಡ ನಡೆಸುವ ಇಚ್ಛೆ ಇದೆ. ಈ ನಿಟ್ಟಿನಲ್ಲಿ ತಾವು ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದೇವೆ. ಇದು ಶರಣಾಗತಿಯಲ್ಲ. ನಾನು ಹೋರಾಟದ ದೃಷ್ಟಿಯಿಂದ ಸಮಾಜದಲ್ಲಿ ಗುರುತಿಸಿಕೊಳ್ಳಲು ಮುಖ್ಯವಾಹಿನಿಗೆ ಬರುತ್ತಿದ್ದೇವೆ.

- ನೀಲಗುಳಿ ಪದ್ಮನಾಭ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X