ಕೊಣಾಜೆ: ‘ಮಹಿಳೆಯರ ಮಾನಸಿಕ ಆರೋಗ್ಯ’ ಮಾಹಿತಿ ಕಾರ್ಯಕ್ರಮ

ಕೊಣಾಜೆ, ನ.14: ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಕೊಣಾಜೆ ಹಾಗೂ ಶಾರದಾ ಜ್ಞಾನ ವಿಕಾಸ ಕೇಂದ್ರ ಕೊಣಾಜೆ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ‘ಮಹಿಳೆಯರ ಮಾನಸಿಕ ಆರೋಗ್ಯದ ಮಾಹಿತಿ ಕಾರ್ಯಕ್ರಮವು ರವಿವಾರ ಕೊಣಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಅಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ಒಕ್ಕೂಟದ ಸೇವಾ ಪ್ರತಿನಿಧಿ ನೌಶಾದ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗಣೇಶ್ ಪೂಂಜಾಲಕಟ್ಟೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳೆಯರ ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಮಂಗಳೂರು ವಿವಿ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಶರತ್ ಕುಮಾರ್, ಜ್ಞಾನ ವಿಕಾಸ ಕೇಂದ್ರ ಕೊಣಾಜೆ ಒಕ್ಕೂಟದ ಅಧ್ಯಕ್ಷೆ ಭವ್ಯ, ಕೊಣಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೇಶವ ಪೂಜಾರಿ, ಪಂಚಾಯತ್ ಕಾರ್ಯದರ್ಶಿ ಶಾಲಿನಿ, ಕಾವ್ಯಶ್ರೀ ಮುಂತಾದವರು ಉಪಸ್ಥಿತರಿದ್ದರು.
ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಶಿಲ್ಪಾ ಸ್ವಾಗತಿಸಿ, ಮೈತ್ರಿ ವಂದಿಸಿದರು. ಅನುಷಾ ಕಾರ್ಯಕ್ರಮ ನಿರೂಪಿಸಿದರು.





