Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಘುರಾಮ್ ರಾಜನ್ ಹೆಸರಿನಲ್ಲಿ ವೈರಲ್ ಆದ...

ರಘುರಾಮ್ ರಾಜನ್ ಹೆಸರಿನಲ್ಲಿ ವೈರಲ್ ಆದ ನೋಟು ರದ್ದತಿ ಲೇಖನದ ಅಸಲಿಯತ್ತೇನು?

ವಾರ್ತಾಭಾರತಿವಾರ್ತಾಭಾರತಿ14 Nov 2016 6:44 PM IST
share
ರಘುರಾಮ್ ರಾಜನ್ ಹೆಸರಿನಲ್ಲಿ ವೈರಲ್ ಆದ ನೋಟು ರದ್ದತಿ ಲೇಖನದ ಅಸಲಿಯತ್ತೇನು?

ಹೊಸದಿಲ್ಲಿ,ನ.14: ಆರ್‌ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಪ್ರಮುಖ ಇಂಗ್ಲಿಷ್ ವಾಣಿಜ್ಯ ದೈನಿಕವೊಂದರಲ್ಲಿ ಬರೆದಿದ್ದರೆನ್ನಲಾದ,ನೋಟು ರದ್ದತಿ ಕುರಿತ ಲೇಖನವೊಂದರ ಮರಾಠಿ ಅನುವಾದವು ‘ಆರ್ಥಿಕ ಅಂಧಾಭಿಮಾನವೂ ಅಪಾಯಕಾರಿಯೇ ’ ಎಂಬ ಶೀರ್ಷಿಕೆಯಡಿ ನ.9ರಂದು ವಾಟ್ಸಾಪ್‌ನಲ್ಲಿ ಹರಿದಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಸರಕಾರದ ನೋಟು ರದ್ದತಿ ನಿಷೇಧದ ಕುರಿತು ರಾಜನ್ ಈವರೆಗೂ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ. ಈ ವಾಟ್ಸಾಪ್ ಸಂದೇಶದ ಬಗ್ಗೆ ಕುತೂಹಲ ತಳೆದ ಪತ್ರಕರ್ತ ರೋರ್ವರು ಇಂಗ್ಲೀಷ್ ವಾಣಿಜ್ಯ ಪತ್ರಿಕೆಯ ವೆಬ್ ಸೈಟ್‌ನ್ನು ಜಾಲಾಡಿದಾಗ ರಾಜನ್ ಬರೆದಿರುವ ಯಾವುದೇ ಲೇಖನ ಅಲ್ಲಿರಲಿಲ್ಲ.
ಈ ಲೇಖನವನ್ನು ದಿಟಕ್ಕೂ ಬರೆದವರು ಎನ್‌ಸಿಪಿ ಶಾಸಕ ಡಾ.ಜಿತೇಂದ್ರ ಅವದ್ ಎನ್ನುವುದನ್ನು ಪತ್ತೆ ಹಚ್ಚುವಲ್ಲಿ ಆ ಪತ್ರಕರ್ತರು ಕೊನೆಗೂ ಯಶಸ್ವಿಯಾಗಿದ್ದಾರೆ. ಅವದ್ ಈ ಲೇಖನವನ್ನು ಮೊದಲು ತನ್ನ ಖಾಸಗಿ ಬ್ಲಾಗ್‌ನಲ್ಲಿ ಪ್ರಕಟಿಸಿ ಬಳಿಕ ತನ್ನ ಫೇಸಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಯಾರೋ ಈ ಲೇಖನಕ್ಕೆ ರಘುರಾಮ್ ರಾಜನ್ ಹೆಸರನ್ನು ಜೋಡಿಸಿ ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ದರು.
ಸದ್ರಿ ಪತ್ರಕರ್ತ ತನ್ನನ್ನು ಸಂಪರ್ಕಿಸುವವರೆಗೂ ಬೇರೊಬ್ಬರ ಹೆಸರಿನಲ್ಲಾದರೂ ತನ್ನ ಲೇಖನ ಇಷ್ಟೊಂದು ಜನಪ್ರಿಯಗೊಂಡಿದ್ದು ಅವದ್‌ಗೆ ಗೊತ್ತೇ ಇರಲಿಲ್ಲ.
‘‘ಇದನ್ನು ಕೇಳಿ ನನಗೆ ಆಘಾತವಾಗಿತ್ತು. ನೋಟು ರದ್ದತಿ ಕ್ರಮದ ಕುರಿತು ನನ್ನ ಚಿಂತನೆಗಳನ್ನು ಈ ಲೇಖನದಲ್ಲಿ ವ್ಯಕ್ತಪಡಿಸಿದ್ದೆ. ಈ ಕ್ರಮ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ಗುರಿ ಮಾಡುತ್ತದೆ ಎಂದು ನನಗನಿಸಿತ್ತು. ಈ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ ಲೇಖನವನ್ನು ಬರೆದಿದ್ದೆ. ನ.9ರಂದು ಮಧ್ಯಾಹ್ನ ನನ್ನ ಬ್ಲಾಗಿನಲ್ಲಿ ಮತ್ತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೆ ’’ಎಂದು ಅವದ್ ಹೇಳಿದರು.
ಅಂತರ್ಜಾಲದಲ್ಲಿ ಈ ಲೇಖನವನ್ನು ಎತ್ತಿದ ಯಾರೋ ಅದಕ್ಕೆ ರಾಜನ್ ಹೆಸರನ್ನು ಜೋಡಿಸಿದ್ದರು.
‘‘ನನ್ನ ಲೇಖನಕ್ಕಾಗಿ ಮೋದಿ ಭಕ್ತರಿಂದ ವ್ಯಾಪಕ ಟೀಕೆಗಳು ಬರುತ್ತವೆ ಎಂದು ನಾನು ಆರಂಭದಲ್ಲಿ ಭಾವಿಸಿದ್ದೆ. ಆದರೆ ನಾನು ಬರೆದಿದ್ದನ್ನು ಜನರು ಮೆಚ್ಚಿದ್ದಾರೆಂದು ನನಗೆ ಈಗ ಗೊತ್ತಾಗಿದೆ. ಆರ್ಥಿಕತೆಯ ಕುರಿತು ನನ್ನ ತಿಳುವಳಿಕೆ ಜನಪರವಾಗಿದೆ ಎನ್ನುವುದು ನನಗೆ ಸಮಾಧಾನ ತಂದಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X