Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡನೆ ತ್ರೈಮಾಸಿಕ: ಕಾರ್ಪೊರೇಶನ್...

ಎರಡನೆ ತ್ರೈಮಾಸಿಕ: ಕಾರ್ಪೊರೇಶನ್ ಬ್ಯಾಂಕ್‌ಗೆ 206 ಕೋಟಿ ರೂ.ನಿವ್ವಳ ಲಾಭ

ವಾರ್ತಾಭಾರತಿವಾರ್ತಾಭಾರತಿ14 Nov 2016 8:00 PM IST
share
ಎರಡನೆ ತ್ರೈಮಾಸಿಕ: ಕಾರ್ಪೊರೇಶನ್ ಬ್ಯಾಂಕ್‌ಗೆ 206 ಕೋಟಿ ರೂ.ನಿವ್ವಳ ಲಾಭ

ಮಂಗಳೂರು,ನ.14: ಕಾರ್ಪೊರೇಶನ್ ಬ್ಯಾಂಕ್ 2016ನೆ ಆರ್ಥಿಕ ವರ್ಷದ ಎರಡನೆ ತ್ರೈಮಾಸಿಕ ಅವಧಿಯಲ್ಲಿ 206 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಜೈ ಕುಮಾರ್ ಗರ್ಗ್ ತಿಳಿಸಿದ್ದಾರೆ.

ಕಾರ್ಪೊರೇಶನ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಬ್ಯಾಂಕ್ ಎರಡನೆ ತ್ರೈಮಾಸಿಕ ಅವಧಿಯಲ್ಲಿ 3,54,431 ಕೋಟಿ ರೂ. ಆರ್ಥಿಕ ವ್ಯವಹಾರ ನಡೆಸಿದೆ. 32,260 ಕೋಟಿ ರೂ. ಉಳಿತಾಯ ಖಾತೆಯ ಮೂಲಕ ಠೇವಣಿ ಸಂಗ್ರಹಿಸಲಾಗಿದೆ. 1,38,316 ಕೋಟಿ ರೂ. ಸಾಲ ನೀಡಲಾಗಿದೆ. ಬ್ಯಾಂಕಿನ ನಿರ್ವಹಣಾ ಲಾಭ ಗಳಿಕೆ 1,267 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕಿನ ಲಾಭ ಗಳಿಕೆ 36 ಕೋಟಿ ರೂ., ಆರ್ಥಿಕ ವ್ಯವಹಾರ 3,35,445 ಕೋಟಿ ರೂ., ನಿರ್ವಹಣಾ ಲಾಭಗಳಿಕೆ 797 ಕೋಟಿ ರೂ., ಠೇವಣಿ ಸಂಗ್ರಹ 1,98,502 ಕೋಟಿ ರೂ.ಗಳಾಗಿತ್ತು ಎಂದು ಜೈ ಕುಮಾರ್ ಗರ್ಗ್ ತಿಳಿಸಿದ್ದಾರೆ.

ಬ್ಯಾಂಕಿನ ಎನ್‌ಪಿಎ ಪ್ರಮಾಣ ಹಾಲಿ ಅವಧಿಯಲ್ಲಿ ಶೇ.6.19ಕ್ಕೆ ಇಳಿಕೆಯಾಗಿದೆ. ಆದ್ಯತಾ ವಲಯಕ್ಕೆ ಸಂಬಂಧಿಸಿದಂತೆ ಸಣ್ಣ ಮತ್ತು ಸಾಮಾನ್ಯ ವಿಭಾಗದ ರೈತರಿಗೆ 13,263 ಕೋಟಿ ರೂ. ಸಾಲ ವಿತರಿಸಲಾಗಿದೆ. ಬ್ಯಾಂಕ್ 3,131 ಎಟಿಎಂಗಳನ್ನು 1,06,240 ಪಿಒಎಸ್ ಮೆಶಿನ್‌ಗಳನ್ನು ಹೊಂದಿದೆ. ದುಬೈ ಹಾಗೂ ಹಾಂಕಾಂಗ್‌ನಲ್ಲಿ ಬ್ಯಾಂಕ್ ಎರಡು ಪ್ರಾತಿನಿಧಿಕ ಶಾಖೆಗಳನ್ನು ಹೊಂದಿದೆ ಎಂದು ಜೈ ಕುಮಾರ್ ಗರ್ಗ್ ತಿಳಿಸಿದ್ದಾರೆ.

1000, 500 ಕೋಟಿ ರೂ ಅಮಾನ್ಯ ಗೊಳಿಸಿರುವುದರಿಂದ ಬ್ಯಾಂಕಿಂಗ್ ವ್ಯವಹಾರ ಚುರುಕುಗೊಂಡಿದೆ. ಉಳಿತಾಯ ಖಾತೆ ಹಾಗೂ ಚಾಲ್ತಿ ಖಾತೆಗಳ ಮೂಲಕ ಹಣ ಜಮಾವಣೆಯಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಎಟಿಎಂಗಳು ಹಿಂದಿನಂತೆ ಸಹಜ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲಿದೆ . ಕೆಲವು ಕಡೆ ಮೊಬೈಲ್ ಬ್ಯಾಂಕಿಂಗ್ ಸೇವೆ, ಮೈಕ್ರೋ ಎಟಿಎಂಗಳು ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಮೂಲಕ ಅಲ್ಲಿನ ಗ್ರಾಹಕರಿಗೆ ಸಹಾಯವಾಗಬಹುದು ಎಂದು ಜೈ ಕುಮಾರ್ ಗಾರ್ಗ್ ತಿಳಿಸಿದ್ದಾರೆ.

ಬ್ಯಾಂಕಿನ ಕೇಂದ್ರ ಕಚೇರಿ ವರ್ಗಾವಣೆ ..?

ಕಾರ್ಪೊರೇಶನ್ ಬ್ಯಾಂಕಿನ ಕೇಂದ್ರ ಕಚೇರಿ ಬೆಂಗಳೂರಿಗೆ ವರ್ಗಾವಣೆಯಾಗುತ್ತದೆಯೇ? ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಜೈ ಕುಮಾರ್ ಗರ್ಗ್ ‘‘ಬೆಂಗಳೂರಿನಲ್ಲಿ ಬ್ಯಾಂಕಿನ ಮುಂದಿನ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಐ.ಟಿ.ವಿಭಾಗ, ತರಬೇತಿ ಹಾಗೂ ಕಚೇರಿಯ ವಿಭಾಗವನ್ನು ಆರಂಭಿಸಲು ಬಹಳ ಹಿಂದೆಯೇ ತೀರ್ಮಾನಿಸಲಾಗಿದೆ. ಮಂಗಳೂರಿನಲ್ಲಿರುವ ವ್ಯವಸ್ಥೆ ಹಾಗೆಯೇ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ಬ್ಯಾಂಕಿನ ವಿಸ್ತರಣಾ ಯೋಜನೆಯಿಂದ ಮಂಗಳೂರಿನ ಗ್ರಾಹಕರ ಸೇವೆಗೆ ಯಾವುದೇ ತೊಂದರೆಯಾಗುವುದಿಲ್ಲ ’’ಎಂದು ಜೈ ಕುಮಾರ್ ಗರ್ಗ್ ತಿಳಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಜಿ.ಎಂ.ಭಗತ್, ಸುನಿಲ್ ಮೆಹ್ತಾ ಹಾಗೂ ಮಹಾಪ್ರಬಂಧಕ ಎಂ.ಬಿ.ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X