Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಿಶೆಲ್ ಒಬಾಮಗೆ ಗೇಲಿ ಮಾಡಿದ ಗಣ್ಯ...

ಮಿಶೆಲ್ ಒಬಾಮಗೆ ಗೇಲಿ ಮಾಡಿದ ಗಣ್ಯ ವ್ಯಕ್ತಿಗಳು

ಪಾದರಕ್ಷೆ ಹಾಕಿಕೊಂಡು ನಡೆಯುವ ವಾನರ

ವಾರ್ತಾಭಾರತಿವಾರ್ತಾಭಾರತಿ15 Nov 2016 7:39 PM IST
share
ಮಿಶೆಲ್ ಒಬಾಮಗೆ ಗೇಲಿ ಮಾಡಿದ ಗಣ್ಯ ವ್ಯಕ್ತಿಗಳು

 ವಾಶಿಂಗ್ಟನ್, ನ. 15: ಅಮೆರಿಕದ ಪ್ರಥಮ ಮಹಿಳೆ ಮಿಶೆಲ್ ಒಬಾಮ ಬಗ್ಗೆ ವೆಸ್ಟ್ ವರ್ಜೀನಿಯ ರಾಜ್ಯದ ಸಣ್ಣ ಪಟ್ಟಣವೊಂದರ ಮೇಯರ್ ಮತ್ತು ಲಾಭರಹಿತ ಸಂಸ್ಥೆಯೊಂದರ ನಿರ್ದೇಶಕರೊಬ್ಬರು ಜನಾಂಗೀಯ ನಿಂದನೆಯ ಮಾತುಗಳನ್ನಾಡಿರುವುದು ಭಾರೀ ವಿವಾದವೆಬ್ಬಿಸಿದೆ.

‘‘ಶ್ವೇತಭವನಕ್ಕೆ ಶ್ರೇಷ್ಠ, ಸುಂದರ, ಸಂಭಾವಿತ ಪ್ರಥಮ ಮಹಿಳೆಯೊಬ್ಬರು ಮರಳಿರುವುದರಿಂದ ತುಂಬಾ ನಿರಾಳವಾಗಿದ್ದೇನೆ. ಪಾದರಕ್ಷೆ ಹಾಕಿಕೊಂಡು ನಡೆಯುವ ವಾನರನನ್ನು ನೋಡಿ ನೋಡಿ ಸಾಕಾಗಿದೆ’’ ಎಂಬುದಾಗಿ ಕ್ಲೇ ಎಂಬ ಪಟ್ಟಣದಲ್ಲಿರುವ ‘ಕ್ಲೇ ಕೌಂಟಿ ಡವಲಪ್‌ಮೆಂಟ್ ಕಾರ್ಪ್’ನ ನಿರ್ದೇಶಕಿ ಪಮೇಲಾ ರ್ಯಾಮ್‌ಸೇ ಟೇಲರ್ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗೆದ್ದ ಬಳಿಕ ಈ ಹೇಳಿಕೆಯನ್ನು ಹಾಕಲಾಗಿದೆ.

ಹಾಲಿ ಪ್ರಥಮ ಮಹಿಳೆ ಮಿಶೆಲ್ ಒಬಾಮರನ್ನು ಗಮನದಲ್ಲಿರಿಸಿಕೊಂಡು ಈ ಹೇಳಿಕೆಯನ್ನು ಹಾಕಲಾಗಿದೆ. ಡೊನಾಲ್ಡ್ ಟ್ರಂಪ್‌ರ ಪತ್ನಿ ಮೆಲಾನಿಯಾ ಟ್ರಂಪ್ ಇನ್ನು ಅಮೆರಿಕದ ಪ್ರಥಮ ಮಹಿಳೆಯಾಗಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ನಗರದ ಮೇಯರ್ ಬೆವರ್ಲಿ ವೇಲಿಂಗ್, ‘‘ಪಮೇಲಾ, ನಿಮ್ಮ ಹೇಳಿಕೆ ತಮಾಷೆಯಾಗಿದೆ’’ ಎಂಬುದಾಗಿ ಬರೆದಿದ್ದಾರೆ ಎಂದು ಎನ್‌ಬಿಸಿ ಟಿವಿಯ ಸಹ ಸಂಸ್ಥೆ ಡಬ್ಲುಎಸ್‌ಎಝಡ್ ವರದಿ ಮಾಡಿದೆ.

ಈ ಹೇಳಿಕೆಗಳನ್ನು ಬಳಿಕ ಡಿಲೀಟ್ ಮಾಡಲಾಗಿದೆಯಾದರೂ, ಅವುಗಳ ಚಿತ್ರಗಳನ್ನು ಸಾಮಜಿಕ ಜಾಲತಾಣಗಳಲ್ಲಿ ಭಾರೀ ಪ್ರಮಾಣದಲ್ಲಿ ಹಂಚಿಕೊಳ್ಳಲಾಗಿದೆ. ಜನಾಂಗೀಯ ನಿಂದನೆಗೈದ ಈ ಇಬ್ಬರೂ ಮಹಿಳೆಯರನ್ನು ವಜಾಗೊಳಿಸಬೇಕು ಎಂಬುದಾಗಿ ಆಗ್ರಹಿಸುವ ಆನ್‌ಲೈನ್ ಮನವಿಗೆ ಸೋಮವಾರ ಮಧ್ಯಾಹ್ಯದವರೆಗೆ 14,000ಕ್ಕೂ ಅಧಿಕ ಸಹಿಗಳು ಬಿದ್ದಿವೆ.

ಈ ಇಬ್ಬರೂ ಮಹಿಳೆಯರು ತಮ್ಮ ದುರಭಿರುಚಿಯ ಹೇಳಿಕೆಗಳಿಗಾಗಿ ಕ್ಷಮೆ ಕೋರಿದ್ದಾರೆ. ಕ್ಲೇ ಕೌಂಟಿಯ ಹತ್ತನೇ ಎರಡು ಭಾಗ ಜನರು ಆಫ್ರಿಕನ್ ಅಮೆರಿಕನ್ನರು. ಅಲ್ಲಿನ ಮುಕ್ಕಾಲು ಭಾಗಕ್ಕೂ ಅಧಿಕ ಮತಗಳು ಟ್ರಂಪ್ ಪರವಾಗಿ ಚಲಾವಣೆಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X