Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.16: ನ್ಯಾಷನಲ್ ಮೆಡಿಕಲ್ ಕಮಿಷನ್...

ನ.16: ನ್ಯಾಷನಲ್ ಮೆಡಿಕಲ್ ಕಮಿಷನ್ ರಚನೆಗೆ ಕ್ರಮ ವಿರೋಧಿಸಿ ಐಎಂಎನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Nov 2016 9:08 PM IST
share

ಉಡುಪಿ, ನ.15:ದೇಶದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ವೈದ್ಯಕೀಯ ಸೌಲಭ್ಯಗಳ ಗುಣಮಟ್ಟ ಕಾಪಾಡಲು 1956ರಲ್ಲಿ ಸಂಸತ್‌ನಿಂದ ಮಾನ್ಯತೆ ಪಡೆದ ಭಾರತೀಯ ವೈದ್ಯಕೀಯ ಪರಿಷತ್‌ನ್ನು ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಜಕೀಯ ಪುಡಾರಿಗಳೇ ಪ್ರದಾನ ಪಾತ್ರ ವಹಿಸುವ ನ್ಯಾಷನಲ್ ಮೆಡಿಕಲ್ ಕಮಿಷನ್ ಎಂಬ ಹೊಸ ಸಂಸ್ಥೆಯನ್ನು ರಚಿಸುವ ಕೇಂದ್ರ ಸರಕಾರದ ಪ್ರಯತ್ನವನ್ನು ವಿರೋಧಿಸಿ ಹಾಗೂ ತಮ್ಮ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಉಡುಪಿ ಕರಾವಳಿ ಶಾಖೆ ನಾಳೆ ಬೆಳಗ್ಗೆ ಜಿಲ್ಲಾಧಿಕಾರಿ ಎದುರು ಧರಣಿ ನಡೆಸಲಿದೆ ಎಂದು ಸಂಘದ ಉಪಾಧ್ಯಕ್ಷ ಡಾ.ವೈ.ಸುದರ್ಶನ್ ರಾವ್ ತಿಳಿಸಿದ್ದಾರೆ.

ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2,20,00ಕ್ಕೂ ಅಧಿಕ ವೈದ್ಯ ಸದಸ್ಯರನ್ನು ಹೊಂದಿರುವ, 1928ರಲ್ಲೇ ಸ್ಥಾಪಿತವಾದ ಐಎಂಎ ಕರೆಯಂತೆ ನಾಳೆ ದೇಶಾದ್ಯಂತ ಕೇಂದ್ರ ಸರಕಾರದ ಕ್ರಮದ ವಿರುದ್ಧ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದರು. ದೇಶದ ವೈದ್ಯರು ಹಾಗೂ ವೈದ್ಯಕೀಯ ವ್ಯವಸ್ಥೆಯ ಮೇಲೆ ಸವಾರಿ ಮಾಡಲು ಹೊರಟಿರುವ ರಾಜಕಾರಣಿಗಳ ಪ್ರಯತ್ನವನ್ನು ನಾವು ಒಗ್ಗಟ್ಟಿನಿಂದ ವಿರೋಧಿಸುತ್ತೇವೆ ಎಂದವರು ನುಡಿದರು.

ಕೇಂದ್ರ ಸರಕಾರ ದೇಶದ ಜನರ ಸ್ವಾಸ್ಥವನ್ನು ಕಾಪಾಡಲು ಕೈಗೊಳ್ಳಬೇಕಾದ ಕೆಲವು ತುರ್ತು ಉಪಕ್ರಮಗಳನ್ನು ಜಾರಿಗೊಳಿಸದೇ ನಿರ್ಲಕ್ಷಿಸುತ್ತಿರುವುದು ಮಾತ್ರವಲ್ಲದೇ, ‘ನ್ಯಾಷನಲ್ ಮೆಡಿಕಲ್ ಕಮಿಷನ್ ಬಿಲ್’ ಎಂಬ ಅವೈಜ್ಞಾನಿಕ ಕಾನೂನನ್ನು ದೇಶದ ಮೇಲೆ ಹೇರಲು ಪ್ರಯತ್ನಿಸುತ್ತಿದೆ. ಈ ವಿಧೇಯಕ ಸಂಸತ್‌ನಲ್ಲಿ ಪಾಸಾದರೆ ದೇಶದ ವೈದ್ಯಕೀಯ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡಲಿದೆ ಎಂದವರು ಆತಂಕ ವ್ಯಕ್ತಪಡಿಸಿದರು.

ಈ ಬಿಲ್ ಜಾರಿಗೆ ಬರದಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಐಎಂಎ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದ್ದು, ಉಡುಪಿಯಲ್ಲಿ ಪೂರ್ವಾಹ್ನ 11:00ರಿಂದ ಅಪರಾಹ್ನ 1:00 ಗಂಟೆಯವರೆಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಸಂಘದ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ. ನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿಯನ್ನು ಸಲ್ಲಿಸಲಾಗುವುದು ಎಂದು ಡಾ.ಸುದರ್ಶನ್ ರಾವ್ ತಿಳಿಸಿದರು.

ನಾಳೆ ಆಸ್ಪತ್ರೆಗಳ ಹೊರರೋಗಿ ವಿಭಾಗಗಳನ್ನು ಮಾತ್ರ ಮುಚ್ಚಲಾಗುತ್ತದೆ. ತುರ್ತು ಚಿಕಿತ್ಸೆಗಳು ಆಬಾಧಿತವಾಗಿ ನಡೆಯಲಿವೆ. ದೇಶದ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ ದೇಶದ ಮೂಲೆಮೂಲೆಗಳ ಸಮಸ್ತ ಜನರಿಗೂ ಲಭ್ಯವಾಗಬೇಕೆಂಬ ಕಳಕಳಿಯನ್ನು ನಾವು ಹೊಂದಿದ್ದೇವೆ. ನಮ್ಮ ಪ್ರತಿಭಟನೆಗೆ ಸಾರ್ವಜನಿಕರೂ ಬೆಂಬಲಿಸಬೇಕೆಂದು ಅವರು ವಿನಂತಿಸಿದರು.

ಸರಕಾರ ತರಲು ಹೊರಟಿರುವ ಹೊಸ ನೇಷನಲ್ ಮೆಡಿಕಲ್ ಕಮಿಷನ್ ಬಿಲ್ ವಿರುದ್ಧ ಕಳೆದ ಎರಡು ವರ್ಷಗಳಿಂದ ಸಂಘವು ಕೇಂದ್ರ ಸರಕಾರದ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿಗಳನ್ನು ಅರ್ಪಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಮನವಿಗಳ ಪರಿಶೀಲ ನೆಗೆ ಕೇಂದ್ರ ಸರಕಾರ ಸಮಿತಿಯೊಂದನ್ನು ರಚಿಸಿ ಒಂದು ವರ್ಷ ಕಳೆದರೂ ಯಾವುದೇ ಪ್ರಗತಿ ಕಂಡುಬಂದಿಲ್ಲವಾದರಿಂದ ಇದೀಗ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದರು.

1956ರಿಂದಲೇ ಅಸ್ತಿತ್ವದಲ್ಲಿರುವ ಭಾರತೀಯ ವೈದ್ಯಕೀಯ ಪರಿಷತ್, ವೈದ್ಯಕೀಯ ಕ್ಷೇತ್ರದ ಗುಣಮಟ್ಟವನ್ನು ಕಾಪಾಡಲು ಕಟ್ಟುನಿಟ್ಟಿನ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿದ್ದು, ಇದರಿಂದ ಕೆಲವೊಂದು ಅವಕಾಶವಾದಿ ವ್ಯಕ್ತಿಗಳಿಗೆ, ಕಾರ್ಪೋರೇಟ್ ಕಂಪೆನಿಗಳಿಗೆ ಇದು ಬಿಸಿತುಪ್ಪವಾಗಿದೆ. ಆದುದರಿಂದ ಅವರು ತಮ್ಮ ಮೂಗಿನ ನೇರಕ್ಕೆ ಸರಿಯಾದ ನೀತಿಗಳನ್ನು ಜಾರಿಗೆ ತರಲು ನೇಷನಲ್ ಮೆಡಿಕಲ್ ಕಮಿಷನ್ ಸ್ಥಾಪನೆಯ ಪ್ರಯತ್ನದಲ್ಲಿದ್ದಾರೆ ಎಂದವರು ಆರೋಪಿಸಿದರು.

ಭಾರತೀಯ ವೈದ್ಯಕೀಯ ಸಂಘವು ವೈದ್ಯಕೀಯ ಕ್ಷೇತ್ರದ ಹಿರಿಯ, ತಜ್ಞ ಹಾಗೂ ಗೌರವಾನಿತ್ವ ವೈದ್ಯರನ್ನೊಳಗೊಂಡ ಸಂಸ್ಥೆಯೊಂದು ಮಾತ್ರ ವೈದ್ಯರನ್ನು ನಿಯಂತ್ರಿಸಲು ಬಯಸುತ್ತದೆಯೇ ಹೊರತು ಅನ್ಯಕ್ಷೇತ್ರದ ವ್ಯಕ್ತಿಗಳು ತಮ್ಮನ್ನು ನಿಯಂತ್ರಿಸುವುದನ್ನು ಒಪ್ಪಿಕೊಳ್ಳುವುದಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಕರಾವಳಿ ಸಂಘದ ಪದಾಧಿಕಾರಿಗಳಾದ ಡಾ. ಅಶೋಕ್ ಕುಮಾರ್, ಡಾ.ಪಿ.ವಿ.ಭಂಡಾರಿ, ಡಾ.ಮುರಳೀಧರ ಪಾಟೀಲ್ ಉಪಸ್ಥಿತರಿದ್ದರು.

ಸಂಘದ ಕೆಲವು ಬೇಡಿಕೆಗಳು

ವೈದ್ಯರ ಮೇಲೆ ಹಲ್ಲೆ, ಆಸ್ಪತ್ರೆಗಳಲ್ಲಿ ದೊಂಬಿ, ಚಿಕ್ಕಚಿಕ್ಕ ವಿಷಯಗಳಿಗೂ ವೈದ್ಯರನ್ನು ನ್ಯಾಯಾಲಯಕ್ಕೆ ಎಳೆಯುವ, ಸಾಮಾಜಿಕ ಜಾಲತಾಣಗಳಲ್ಲಿ ವೈದ್ಯರ ವಿರುದ್ಧ ಏಕಪಕ್ಷೀಯ ಅಭಿಪ್ರಾಯಗಳ ಬರಹ ಪ್ರಕಟಿಸುವುದನ್ನು ನಿಯಂತ್ರಿಸಲು ಇಡೀ ದೇಶಕ್ಕೆ ಅನ್ವಯಿಸುವಂತೆ ಏಕರೂಪದ ಕಾನೂನನ್ನು ಜಾರಿಗೆ ತರಬೇಕು.

ನ್ಯಾಯಾಲಯಗಳಲ್ಲಿ ವೈದ್ಯರ ವೈದ್ಯಕೀಯ ನಿರ್ಲಕ್ಷ ಸಾಬೀತಾಗಿ ವೈದ್ಯ ಪರಿಹಾರ ನೀಡುವ ಸಂದರ್ಭದಲ್ಲಿ ಪರಿಹಾಕ್ಕೆ ಮಿತಿಯನ್ನು ಹೇರಬೇಕು.

ಹೆಣ್ಣು ಭ್ರೂಣ ಹತ್ಯೆ ತಡೆಗೆ ಸಂಬಂಧಿಸಿದಂತೆ ಅಲ್ಟ್ರಾಸೌಂಡ್ ಉಪಕರಣ ಹೊಂದಿರುವ ಆಸ್ಪತ್ರೆಗಳು ಹಾಗೂ ವೈದ್ಯರು ನೀಡಿದ ಮಾಹಿತಿಗಳಲ್ಲಿ ಆಗಬಹುದಾದ ಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆಯನ್ನು ವಿಧಿಸಂದೆ ಕಾನೂನಿಗೆ ತಿದ್ದುಪಡಿಯನ್ನು ತರಬೇಕು.

ವೈದ್ಯರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅವರು ದೇಶದಲ್ಲೇ ಉಳಿದು ಸೇವೆ ನೀಡಲು ಸಾಧ್ಯವಾಗುವಂತೆ ಕ್ರಮ ಕೈಗೊಳ್ಳುವ ಬದಲು, ವೈದ್ಯಕೀಯ ಪರಿಷತ್‌ನ ಮಾನದಂಡಗಳಿಗೆ ಒಳಪಡದಿರುವ ಆಯುಷ್ ಪದವೀಧರಿಗೆ ಅಲೋಪತಿ ಔಷಧ ಬಳಸಲು ತರಬೇತಿ ನೀಡಿ ಅವರನ್ನು ಅಲೋಪತಿ ವೈದ್ಯರಾಗಿ ಮಾಡಲು ಹೊರಟಿರುವುದನ್ನು ಕೇಂದ್ರ ಸರಕಾರ ಕೈ ಬಿಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X